ದಾವಣಗೆರೆ | ಅಖಿಲ ಭಾರತ ಮುಷ್ಕರ; ರೈತ‌ ಕಾರ್ಮಿಕ ಪ್ರಗತಿಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

Date:

ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಕಾರ್ಮಿಕ ಜಂಟಿ ಹೋರಾಟ ಸಮಿತಿಯ
ಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಅಡಿಯಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಪ್ರಗತಿಪರ, ಜನಪರ ಸಂಘಟನೆಗಳು ಒಗ್ಗೂಡಿ ಪ್ರತಿಭಟನಾ ಮೆರವಣಿಗೆ ನೆಡೆಸುವ ಮೂಲಕ ಮುಷ್ಕರ ನಡೆಸಿದರು.

- Advertisement -
1002291294

ಜಯದೇವ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ವಿವಿಧ ರೈತ, ಕಾರ್ಮಿಕ, ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ವಾಗ್ದಾಳಿ ನಡೆಸಿದರು. ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತ, ಎವಿಕೆ ರಸ್ತೆ, ರೇಣುಕಾ ಮಂದಿರ ಮಾರ್ಗದಲ್ಲಿ ಗಾಂಧಿ ವೃತ್ತ ಮಾರ್ಗವಾಗಿ ಜಯದೇವ ವೃತ್ತದವರೆಗೆ ಸಾಗಿ ಬಂದು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...
1002291293

ಜಯದೇವ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ರೈತ, ಕಾರ್ಮಿಕ, ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಕೇಂದ್ರ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು.

1002291289

ಪ್ರೊ.ರಾಮಚಂದ್ರಪ್ಪ ಮಾತನಾಡಿ, “ಕಾರ್ಮಿಕರ ಕನಿಷ್ಠ ವೇತನ, ಕೆಲಸ ಮಾಡುವ ಅವಧಿ, ಸಾಮಾಜಿಕ ಭದ್ರತೆ ಇತ್ಯಾದಿ ಸೇರಿದಂತೆ ಕೆಲಸದ ಪರಿಸ್ಥಿತಿಗಳಿಗೆ ಸಂಬಂಧಿಸಿದ ಎಲ್ಲಾ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆದಿದೆ. ಹಾಗೂ ಯೂನಿಯನ್ ಮಾಡುವ ಹಕ್ಕು. ಮನ್ನಣೆ. ಸಾಮೂಹಿಕ ಚೌಕಾಸಿ, ಆಂದೋಲನಗಳು ಮತ್ತು ಮುಷ್ಕರದ ಹಕ್ಕು ಸೇರಿದಂತೆ ಯಾವುದೇ ರೀತಿಯ ಸಾಮೂಹಿಕ ಪ್ರತಿಭಟನೆಯ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ. ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಲು ಪ್ರಬಲವಾದ ಹೋರಾಟವನ್ನು ಸಂಘಟಿಸುವ ಉದ್ದೇಶದಿಂದ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ” ಎಂದು ಹೇಳಿದರು.

1002291292

ಎಐಟಿಯುಸಿ ಸಿಪಿಐ ಮುಖಂಡರಾದ ಆವರಗೆರೆ ಉಮೇಶ್ ಮಾತನಾಡಿ, “ಕೇಂದ್ರ ಸರ್ಕಾರವು ದುಡಿಯುವ ಜನರ ಜೀವನೋಪಾಯದ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಕಾರಣ ಜುಲೈ 9 ಇಡೀ ದೇಶದಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಪೊರೇಟ್‌ಗಳ ಹಿತಾಸಕ್ತಿ, ವಹಿವಾಟಿಗಾಗಿ ಅವರಿಗೆ ಅನುಕೂಲವಾಗುವಂತೆ ಅವಕಾಶ ಮಾಡಿಕೊಡುವಂತಹ ನೀತಿಗೆ ಅನುಗುಣವಾಗಿ ಹಾಗೂ ದುಡಿಯುವ ಜನರ ಮೇಲೆ ಗುಲಾಮಗಿರಿ ಷರತ್ತುಗಳನ್ನು ಹೇರುವ ಉದ್ದೇಶದಿಂದ ಅದಕ್ಕೆ ಬೇಕಾಗಿರುವ ನೀತಿಗಳನ್ನು ಸರ್ಕಾರ ರೂಪಿಸುತ್ತಿದೆ. ಹಳೆಯ 29 ಕಾರ್ಮಿಕ ಕಾನೂನುಗಳನ್ನು ತೆಗೆದುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲು ಸರ್ಕಾರವು ತುದಿಗಾಲಿನಲ್ಲಿ ನಿಂತಿದೆ. ಅಸ್ತಿತ್ವದಲ್ಲಿರುವ ಉದ್ಯೋಗಗಳನ್ನು ಖಾಯಂ ಕಡಿತಗೊಳಿಸಿ ಉದ್ಯೋಗಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುತ್ತಿದೆ” ಎಂದು ಆರೋಪಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ, ಹೃದಯಕ್ಕೇನಾಗಿದೆ?

1002291290

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸರ್ಕಾರಿ ಭೂಮಿ ಗೋಮಾಳಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆ ಆಗ್ರಹ

ಬೈಕ್ ರ್ಯಾಲಿಯಲ್ಲಿ ಸುರೇಶ್ ಯರಗುಂಟೆ, ಹೆಚ್ಚಿಆರ್ ಸುರೇಶ್, ವಿ.ಲಕ್ಷ್ಮಣ್, ಅವರಗೆರೆ ಚಂದ್ರು, ಹೊನ್ನೂರು ಮುನಿಯಪ್ಪ, ಐರಣಿ ಚಂದ್ರು, ಅಣಬೇರು ತಿಪ್ಪೇಸ್ವಾಮಿ, ಸತೀಶ್ ಅರವಿಂದ್, ಕೈದಾಳು ಮಂಜುನಾಥ್, ಶ್ರೀನಿವಾಸ್, ಕೆ.ಎಸ್.ಆದಿಲ್ ಖಾನ್, ಹೆಗ್ಗೆರೆ ರಂಗಪ್ಪ, ನರೇಗಾ ರಂಗನಾಥ್, ಕೆ.ಹೆಚ್.ಆನಂದ್ ರಾಜ್, ಸರೋಜ, ಹನುಮಂತಪ್ಪ, ಮಹಮ್ಮದ್ ರಫೀಕ್, ದಾದಾಪೀರ್, ಶ್ರೀನಿವಾಸ ಮೂರ್ತಿ ಸೇರಿದಂತೆ ಪ್ರತಿಭಟನಾ ರ್ಯಾಲಿ ಮತ್ತು ಮುಷ್ಕರದಲ್ಲಿ ರೈತ ಸಂಘದ ಹಲವು ಬಣಗಳ ಮುಖಂಡರು ಕಾರ್ಯಕರ್ತರು, ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ, ಎಐಯುಟಿಯುಸಿ, ಸಿಐಟಿಯು, ಎಐಡಿವೈಓ, ಎಐಕೆಕೆಎಂಎಸ್, ಕರ್ನಾಟಕ ಜನಶಕ್ತಿ, ಕರ್ನಾಟಕ ಶ್ರಮಿಕ ಶಕ್ತಿ, ಕಟ್ಟಡ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸರ್ವೋದಯ ಕರ್ನಾಟಕ, ಭೂಮಿ ಮತ್ತು ವಸತಿ ವಂಚಿತರ ಹಕ್ಕುಗಳ ಹೋರಾಟ ಸಮಿತಿ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ-ಗ್ರಾಕೂಸ್ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...