ದಾವಣಗೆರೆ | ಸರ್ಕಾರಿ ಜಮೀನು ಕಬಳಿಕೆ ಆರೋಪ: ಅರ್ಜಿದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ದಂಡ ವಿಧಿಸಿದ ಮಾಹಿತಿ ಆಯೋಗ

Date:

ದಾವಣಗೆರೆ ಜಿಲ್ಲೆಯ ಕುಂದುವಾಡ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಗುಡಿಯ ಜಮೀನೊಂದನ್ನು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಬೃಹತ್ ಹಗರಣವೊಂದು ಬೆಳಕಿಗೆ ಬಂದಿದೆ. ಈ ಅಕ್ರಮವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯಿದೆಯಡಿ ಹೋರಾಟಕ್ಕಿಳಿದ ಅರ್ಜಿದಾರರಿಗೆ ಮಾಹಿತಿ ನೀಡುವ ಬದಲು, ಕರ್ನಾಟಕ ಮಾಹಿತಿ ಆಯೋಗವು ಅರ್ಜಿದಾರರನ್ನೇ ‘ಕಪ್ಪುಪಟ್ಟಿ’ಗೆ ಸೇರಿಸಿ, ದಂಡ ವಿಧಿಸಿರುವ ಅಚ್ಚರಿಯ ಘಟನೆ ನಡೆದಿದೆ.

- Advertisement -

ಕಂದಾಯ ಇಲಾಖೆಯ ಪಹಣಿ ದಾಖಲೆಗಳ ಪ್ರಕಾರ, ದಾವಣಗೆರೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ಕುಂದುವಾಡ ಗ್ರಾಮದ ಸರ್ವೇ ನಂಬರ್ 249/1ರಲ್ಲಿ ಒಟ್ಟು 9 ಎಕರೆ 32 ಗುಂಟೆ ಜಮೀನಿದೆ. ಇದು ಸರ್ಕಾರಿ ಗುಡಿಯ ಹೆಸರಿನಲ್ಲಿರುವ ಜಮೀನಾಗಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಶಾಮೀಲಾಗಿ ಈ ಜಮೀನನ್ನು ಖಾಸಗಿ ವ್ಯಕ್ತಿಗಳ(ಗಂಗಮ್ಮ ಕೋಂ ಎಂ. ಶರಣಪ್ಪ ಎಂಬುವವರ ಹೆಸರಿಗೆ 9.22 ಎಕರೆ) ಹೆಸರಿಗೆ ಅಕ್ರಮವಾಗಿ ಮ್ಯುಟೇಷನ್ ಮಾಡಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಪ್ರಸ್ತುತ ಈ ವಿವಾದಿತ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳೂ ಕೂಡ ಭರದಿಂದ ಸಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸರ್ಕಾರಿ ಆಸ್ತಿ ಕಬಳಿಕೆ ಕುರಿತು ದೂರುದಾರರು ದಾವಣಗೆರೆ ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನ್ಯಾಯ ಸಿಗದಿದ್ದಾಗ, ದೂರುದಾರರಾದ ಬೆಂಗಳೂರಿನ ಶೇಖರ್ ಎಸ್ ಎಂಬುವವರು ಮಾಹಿತಿ ಹಕ್ಕು ಕಾಯಿದೆಯಡಿ ಮೂಲ ದಾಖಲೆಗಳನ್ನು ಅಂದರೆ ಕೈಬರಹದ ಪಹಣಿಯಿಂದ ಕಂಪ್ಯೂಟರ್ ಪಹಣಿಗೆ ಬದಲಾದ ಮಾಹಿತಿ, ಮ್ಯುಟೇಷನ್ ಪ್ರತಿಗಳು ಇತ್ಯಾದಿ ಕೋರಿ ದಾವಣಗೆರೆ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಮಾಹಿತಿ ಸಿಗದಿದ್ದಾಗ ಕರ್ನಾಟಕ ಮಾಹಿತಿ ಆಯೋಗದ ಮೆಟ್ಟಿಲೇರಿದ್ದರು.

ಪ್ರಕರಣ ಸಂಖ್ಯೆ 887/COM/2024 ಮತ್ತು 1542/COM/2024ರ ಅಡಿ ಮೇಲ್ಮನವಿ ಸಲ್ಲಿಸಲಾಗಿತ್ತು. ​ಮಾಹಿತಿ ಆಯೋಗದ ವಿವಾದಾತ್ಮಕ ಆದೇಶ ಆಯೋಗದ ಪೀಠ-2ರ ವಿಚಾರಣೆ ವೇಳೆ, ಅಂದಿನ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ. ಹೆಚ್ ಸಿ ಸತ್ಯನ್ ಅವರು 2025ರ ಜನವರಿ 16ರಂದು ನೀಡಿದ ಆದೇಶ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅರ್ಜಿದಾರರಿಗೆ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸುವ ಬದಲು, ಆಯೋಗವು ಅರ್ಜಿದಾರರ ವಿರುದ್ಧವೇ ಕಠಿಣ ಕ್ರಮ ಕೈಗೊಂಡಿದೆ.

ಅರ್ಜಿದಾರರು ಈವರೆಗೆ ಒಟ್ಟು 1103 ಮೇಲ್ಮನವಿಗಳನ್ನು ಸಲ್ಲಿಸಿದ್ದು, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಕೇವಲ ಅಧಿಕಾರಿಗಳಿಗೆ ಕಿರುಕುಳ ನೀಡಲು ಅರ್ಜಿ ಹಾಕುತ್ತಿದ್ದಾರೆ. ಇದರಿಂದ ಆಯೋಗದ ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಹಣ ಪೋಲಾಗುತ್ತಿದೆ ಎಂದು ಆಯೋಗ ಹೇಳಿದೆ. ಕರ್ನಾಟಕ ಹೈಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ, ಆರ್.ಟಿ.ಐ ಕಾಯಿದೆಯ ದುರ್ಬಳಕೆಯನ್ನು ತಡೆಯಲು ಈ ಕ್ರಮ ಅನಿವಾರ್ಯ ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ, ಅರ್ಜಿದಾರ ಶೇಖರ್ ಎಸ್. ಅವರನ್ನು ‘ಕಪ್ಪುಪಟ್ಟಿ’ಗೆ ಸೇರಿಸಲಾಗಿದೆ ಹಾಗೂ ಇನ್ನು ಮುಂದೆ ಅವರು ಸಲ್ಲಿಸುವ ಅರ್ಜಿಗಳನ್ನು ಆಯೋಗದಲ್ಲಿ ನೋಂದಾಯಿಸದಂತೆ ನಿರ್ದೇಶಿಸಲಾಗಿದೆ. ಜತೆಗೆ, ವಿಚಾರಣೆಗೆ ಒಳಪಡಿಸಿದ 13 ಪ್ರಕರಣಗಳಿಗೆ ತಲಾ ₹1,000ದಂತೆ ಒಟ್ಟು ₹13,000 ದಂಡವನ್ನು ವಿಧಿಸಲಾಗಿದ್ದು, ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ವಸೂಲಿ ಮಾಡಲು ಆದೇಶಿಸಲಾಗಿದೆ.

ಮಾಹಿತಿ ಆಯೋಗದ ಈ ಆದೇಶವು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಮತ್ತು ಭೂಕಬಳಿಕೆದಾರರಿಗೆ ನೇರವಾಗಿ ಕುಮ್ಮಕ್ಕು ನೀಡುವಂತಿದೆ ಎಂದು ದೂರುದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಉಳಿಸಲು ದಾಖಲೆಗಳನ್ನು ಕೇಳಿದರೆ, ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಬದಲು, ಮಾಹಿತಿ ಕೇಳಿದವರ ಬಾಯಿ ಮುಚ್ಚಿಸುವ ಕೆಲಸವನ್ನು ಆಯೋಗ ಮಾಡಿದೆ. ಇದು ಸಂಪೂರ್ಣ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿದ್ದೀರಾ? ಕಲಬುರಗಿ | ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ ಆರೋಪ

ಇಂತಹ ಆದೇಶಗಳಿಂದಾಗಿ ದಾವಣಗೆರೆ ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿ ಕಬಳಿಕೆ ಮತ್ತು ಭ್ರಷ್ಟಾಚಾರ ಮಿತಿಮೀರುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...