ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

Date:

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿಯ ಸರ್ಕಾರಿ ಉನ್ನತಿಕರಿಸಿದ ಶಾಲೆಯ ಇಂದಿನ ದುಸ್ಥಿತಿ ಬೇಸರ ತರಿಸುವಂತಿದೆ.‌ ಮಳೆ ಬಂದರೆ ಸೋರುವ ಕೊಠಡಿಯ ಚಾವಣಿಗಳು, ಮಳೆಗೆ ಬೀಳುವಂತಿರುವ ಹಂಚಿನ ಚಾವಣಿ ಇರುವ ಕೊಠಡಿ, ಇನ್ನೊಂದು ಕೊಠಡಿ ಪಾಳುಬಿದ್ದು ಪ್ರಾಣಿಗಳ ವಾಸಸ್ಥಾನವಾಗಿದೆ ಎಂದು ಶಿಕ್ಷಣಾಸಕ್ತರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
1002196067

ಈ ಶಾಲೆ 1951ರಲ್ಲಿ ನಿರ್ಮಾಣಗೊಂಡಿದ್ದು, ಬಡವರ್ಗದ, ದಲಿತ, ಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿದ್ದಾರೆ. ಸುಮಾರು 60 ಮಕ್ಕಳು ವಿದ್ಯೆ ಕಲಿಯುತ್ತಿದ್ದು, ಶಾಲೆಯ ದುರವಸ್ಥೆ ಪೋಷಕರಲ್ಲಿ ಆತಂಕ ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1002196059

“ಕೊಠಡಿಗಳು ಮಳೆ ಬಂದರೆ ಸೋರುತ್ತಿದ್ದು, ಹಂಚು ಬೀಳುವ ಸ್ಥಿತಿಯಲ್ಲಿರುವ ಇದ್ದರೆ, ಇನ್ನೊಂದು ಕೊಠಡಿ ಸಂಪೂರ್ಣ ಹಾಳಾಗಿ ಹಂದಿ, ನಾಯಿಗಳ, ವಿಷಜಂತುಗಳ ವಾಸಸ್ಥಾನವಾಗಿದೆ. ಶಾಲೆಗೆ ಕಾರ್ಯಕ್ರಮ ನಡೆಸಿಕೊಡಲುರಂಗಮಂದಿರವಿದ್ದು, ಈ ಸಭಾಂಗಣ ಕೂಡ ಯೋಗ್ಯವಲ್ಲದ ಮುರಿದು ಹೋಗಿರುವ ಸಿಮೆಂಟ್ ಚಾವಣಿಗಳಿಂದ ಪಾಳು ಬಿದ್ದು ನಿರುಪಯುಕ್ತವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1002196070

ಶಾಲೆಯಲ್ಲಿ ಹೆಚ್ಚಾಗಿ ದಲಿತರ ಕೂಲಿ ಕಾರ್ಮಿಕರ ಅಲ್ಪಸಂಖ್ಯಾತರ ಮಕ್ಕಳೇ ವಿದ್ಯಾಭ್ಯಾಸ ಕಲಿಯುತ್ತಿದ್ದಾರೆ. ಈ ಶಾಲೆಯ ದುಸ್ಥಿತಿಯನ್ನು ಕಂಡು ಶಿಕ್ಷಣ ವ್ಯವಸ್ಥೆ ಬಗ್ಗೆ ಆತಂಕ ಬರುತ್ತಿದೆ. ಈ ರೀತಿ ಇದ್ದರೆ ಶಾಲೆಗಳಿಗೆ ಬರಲು ಮಕ್ಕಳು ಕೂಡ ಹೆದರಿಕೆಕೊಳ್ಳುತ್ತಾರೆ. ಇದು ಜನಪ್ರತಿನಿಧಿಗಳಿಗೆ, ಅಧಿಕಾರಿಗಳ ಕಣ್ಣಿಗೆ ಬಿದ್ದರೂ ಬೀಳದಂತೆ ಅಸಡ್ಡೆ ವಹಿಸುತ್ತಾರೆ. ಇದು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವಾಗಿದೆ. ಕೂಡಲೇ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಜಿಲ್ಲಾಡಳಿತ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ತುರ್ತಾಗಿ ದುರಸ್ಥಿ ಕಾಮಗಾರಿ ಕೈಗೊಂಡು ಪಠ್ಯ ಚಟುವಟಿಕೆ ಕೈಗೊಳ್ಳಲು ಅನುಕೂಲ ಮಾಡಿ ಕೊಡಬೇಕು” ಎಂದು ಶಿಕ್ಷಣ ಪ್ರೇಮಿ ಲಿಂಗರಾಜ್ ಗಾಂಧಿನಗರ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...