ದಾವಣಗೆರೆ | ರುದ್ರಭೂಮಿಯಲ್ಲಿ ಉಪಾಹಾರ ಸೇವಿಸಿ ಅಂಬೇಡ್ಕ‌ರ್ ಪರಿನಿರ್ವಾಣ ದಿನಾಚರಣೆ

Date:

ದಾವಣಗೆರೆ ಜಿಲ್ಲೆ ಜಗಳೂರು ನಗರದ ರುದ್ರಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆ ಉಪಹಾರ ಸೇವನೆಯೊಂದಿಗೆ ಡಾ. ಬಿ.ಆ‌ರ್.ಅಂಬೇಡ್ಕ‌ರ್ ಅವರ ಪರಿನಿರ್ವಾಣ ಕಾರ್ಯಕ್ರಮ ಹಾಗೂ ಮೌಢ್ಯ ಪರಿವರ್ತನಾ ದಿನ ಆಚರಣೆ ಮಾಡಿದ್ದಾರೆ.

ಈ ವೇಳೆ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ವಕೀಲ ಮರೇನಹಳ್ಳಿ ಬಸವರಾಜ್ ಮಾತನಾಡಿ, ಕಳೆದ ದಶಕದಿಂದ ಮಾನವಬಂಧುತ್ವ ವೇದಿಕೆಯ ರೂವಾರಿಗಳು ಹಾಗೂ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಪ್ರತಿ ಡಿಸೆಂಬರ್ 6ರಂದು ಅಂಬೇಡ್ಕ‌ರ್ ಪರಿನಿರ್ವಾಣದ ಅಂಗವಾಗಿ ಬೆಳಗಾವಿಯ ಸದಾಶಿವನಗರದ ವೀರಶೈವ ರುದ್ರಭೂಮಿಯಲ್ಲಿ ಎರಡು ದಿನಗಳಕಾಲ ವೈಚಾರಿಕ, ವೈಜ್ಞಾನಿಕತೆ ಪ್ರಚಾರ, ಮೌಡ್ಯ ಮುಕ್ತಕ್ಕಾಗಿ ಆಯೋಜಿಸಿತ್ತಿದ್ದ ಸ್ಮಶಾನವಾಸ್ತವ್ಯ ಕಾರ್ಯಕ್ರಮದಲ್ಲಿ ತಾಲೂಕಿನಿಂದ ಭಾಗವಹಿಸಲಾಗುತ್ತಿತ್ತು.

ಪ್ರಸಕ್ತ ವರ್ಷ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ತಾಲೂಕು ಜಿಲ್ಲಾ ಮಟ್ಟದಲ್ಲಿ ಸ್ಮಶಾನದಲ್ಲಿ ಉಪಹಾರ ಸೇವಿಸಿ ಮೌಢ್ಯತೆ ಪರಿವರ್ತನೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖಂಡ ಕಾನನಕಟ್ಟೆ ಪ್ರಭು ಮಾತನಾಡಿ, ಸಂವಿಧಾನದ ಆಶಯಗಳು ಈಡೇರುವವರೆಗೂ ಸಮಾಜದಲ್ಲಿ ಸ್ವಾಸ್ಥ್ಯತೆ ಕಾಪಾಡಲು ಅಸಾಧ್ಯ. ತಳ ಸಮುದಾಯಗಳು ಶಿಕ್ಷಣ ಪಡೆದು ದೇವರುಗಳ ಹೆಸರಿನಲ್ಲಿ ನಡೆಸುವ ಮೂಢನಂಬಿಕೆ, ಕಂದಾಚಾರಗಳಿಂದ ಮುಕ್ತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ. ಅಂಬೇಡ್ಕರ್ ಅವರ ಕನಸಿನಂತೆ ಮಹಿಳೆಯರು ದೇವಸ್ಥಾನದ ಮೊರೆಹೋಗದೆ ಗ್ರಂಥಾಲಯಗಳಲ್ಲಿ ಸಾಲುನಿಂತು ಪುಸ್ತಕಗಳನ್ನು ಅಭ್ಯಾಸ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಕೀಲ ಸಣ್ಣ ಓಬಯ್ಯ ಮಾತನಾಡಿ, ದೇಶಕ್ಕೆ ಸಂವಿಧಾನವೇ ಪವಿತ್ರಗ್ರಂಥವಾಗಿದೆ. ಮನುವಾದಿಗಳಿಂದ ಸಂವಿಧಾನ ತಿರುಚುವ ಹುನ್ನಾರ ನಡೆಯತ್ತಿದೆ. ಸಂವಿಧಾನ ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದಕ್ಕೆ ದಕ್ಕೆ ಉಂಟಾದರೆ ಹೊರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಆಚರಣೆಯಲ್ಲಿ ಪ್ರಾಂಶುಪಾಲ ಎ.ಡಿ.ನಾಗಲಿಂಗಪ್ಪ, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕ ಧನ್ಯಕುಮಾರ್, ಎಚ್.ಎಂ. ಹೊಳೆ, ಡಿಎಸ್‌ಎಸ್ ಸಂಚಾಲಕ ಸತೀಶ್ ಮಲೆಮಾಚಿಕೆರೆ, ಪ್ರಗತಿಪರ ಹೊರಾಟಗಾರ ಮಾದಿಹಳ್ಳಿ ಮಂಜುನಾಥ್, ಸಿದ್ದಮ್ಮನಹಳ್ಳಿ ಬಸವರಾಜ್‌, ಮರೇನಹಳ್ಳಿ ಕುಮಾ‌ರ್, ಗುತ್ತಿದುರ್ಗ ರುದ್ರೇಶ್, ಸ್ವಾಮಿ, ಬಸಯ್ಯ, ನಾಗೇಶ್ ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...