ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

Date:

ದಲಿತರು ಸೇರಿ ವಸತಿರಹಿತರಿಗೆ ಈ ಮುಂಚೆ ಮಂಜೂರಾಗಿ, ವಾಸವಾಗಿರುವ ಎರಡು ಎಕರೆ ಜಮೀನಿನಲ್ಲಿ ವಾಸವಾಗಿರುವ ನಿವೇಶನ ರಹಿತರಿಗೆ ಹಕ್ಕಪತ್ರಗಳನ್ನು ವಿತರಿಸಬೇಕು. ಇಂದಿರಾಗಾಂಧಿ ವಸತಿ ನಿಲಯದ ಜಮೀನಿಗೆ ಒಟ್ಟುಗೂಡಿಸಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ನೇತೃತ್ವದಲ್ಲಿ ವಸತಿ ರಹಿತರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು..

- Advertisement -
1003624617

ಈ ವೇಳೆ ಮಾತನಾಡಿದ ಮುಖಂಡ, ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂದೇಶ್ “ಗ್ರಾಮದ 58 ಎಕರೆ ಜಮೀನನ್ನು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಿದ್ದು, ಅದರ ಎರಡು ಎಕರೆ ಜಮೀನಿನಲ್ಲಿ ಈ ಹಿಂದೆಯೇ ಜಿಲ್ಲಾಧಿಕಾರಿಗಳು ನಿವೇಶನ ರಹಿತರಿಗೆ ವಸತಿಗೆ ಮಂಜೂರು ಮಾಡಿದ್ದರು. ಅಂದಿನಿಂದಲೂ ನಿವೇಶನ ರಹಿತರು ಅಲ್ಲಿ ವಾಸವಿದ್ದಾರೆ. ಇತ್ತೀಚೆಗೆ ಇಂದಿರಾಗಾಂಧಿ ವಸತಿ ಶಾಲೆಗೆ 7 ಎಕರೆ ಜಮೀನನ್ನು ಮಂಜೂರು ಮಾಡಿದ್ದು ಅಧಿಕಾರಿಗಳು ವಸತಿ ರಹಿತರಿಗೆ ಮೀಸಲಿರಿಸಿದ್ದ ಎರಡೂ ಎಕರೆ ಜಮೀನನ್ನು ಸೇರಿಸಿ ಸರ್ವೆ ಸ್ಕೆಚ್ ತಯಾರಿಸಿ ಮಂಜೂರು ಮಾಡಿದ್ದಾರೆ. ಇದು ಅಧಿಕಾರಿಗಳ ಕರ್ತವ್ಯ ಲೋಪ, ನಿರ್ಲಕ್ಷ್ಯವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಈ ಹಿಂದೆ ಅನಿರೀಕ್ಷಿತವಾಗಿ ಗುಡಿಸಲಿಗಳಿಗೆ ಬೆಂಕಿ ಬಿದ್ದಾಗ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿ, ಜಿಲ್ಲಾಧಿಕಾರಿಗಳೇ ನಿವೇಶನ ರಹಿತರಿಗೆ ಮನೆ ಕಟ್ಟಿಕೊಳ್ಳಲು ಎರಡು ಎಕರೆ ಜಮೀನನ್ನು ಮಂಜೂರು ಮಾಡಿದ್ದರು. ಈಗ ಅಧಿಕಾರಿಗಳು ಅದನ್ನು ವಸತಿ ನಿಲಯಕ್ಕೆ ಸೇರಿಸುವ ಉದ್ದೇಶದಿಂದ ಇಲ್ಲಿ ವಾಸವಾಗಿರುವವರನ್ನು ಒಕ್ಕಲಬ್ಬಿಸುವ ಸಂಚುರೂಪಿಸುತ್ತಿದ್ದಾರೆ. ಜನಪ್ರತಿನಿಧಿಗಳು ಕೂಡ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ಧೋರಣೆ ವಹಿಸಿದದ್ದಾರೆ. ಹಲವು ವರ್ಷಗಳಿಂದ ಇಲ್ಲಿ ವಾಸವಾಗಿರುವ ನಿವೇಶನರಹಿತರಿಗೆ ಹಕ್ಕುಪತ್ರಗಳನ್ನು ಜಿಲ್ಲಾಡಳಿತ ನೀಡಬೇಕು. ವಸತಿ ರಹಿತರಲ್ಲಿ ಬಹುತೇಕ ದಲಿತರೇ ಹೆಚ್ಚಿದ್ದಾರೆ. ಉಳಿದಿರುವ ಇತರೆ ಜಮೀನಿನಲ್ಲಿ ಇನ್ನೂ ಎರಡು ಎಕರೆ ಹೆಚ್ಚು ವಸತಿ ಶಾಲೆಗೆ ನೀಡಬೇಕು” ಎಂದು ಒತ್ತಾಯಿಸಿದರು.

1003624627

“ಮೂರು ದಿನಗಳಿಂದ ಪ್ರತಿಭಟನೆ ಕುಳಿತಿದ್ದರೂ ಯಾವುದೇ ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಬಂದು ಭೇಟಿ ಮಾಡಿಲ್ಲ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿಲ್ಲ. ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ನೀಡುವವರೆಗೂ ಅನಿರ್ದಿಷ್ಟಾವಧಿಯ ಹೋರಾಟ ಮುಂದುವರಿಸುತ್ತೇವೆ” ಎಂದು ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಗೌರವ ಅಧ್ಯಕ್ಷ ಮಂಜಪ್ಪ ನೀತಿಗೆರೆ, ರಾಜ್ಯ ವಿಭಾಗೀಯ ಸಂಚಾಲಕ ಭರ್ಮಪ್ಪ ಎಂಟು ಮನಿ,ಜಿಲ್ಲಾ ಉಪಾಧ್ಯಕ್ಷ ನವಿಲಿಹಾಳ್ ಕೃಷ್ಣಪ್ಪ, ತಾಲೂಕ್ ಅಧ್ಯಕ್ಷ ಪ್ರವೀಣ್ ಕೆ ಪಿ. ಹಿರೇಕೋಗಲೂರು, ಚಿತ್ರದುರ್ಗ ತಾಲೂಕ ಅಧ್ಯಕ್ಷ ಕಿರಣ್ ಅಂದನೂರು
ಸೇರಿದಂತೆ ಇತರ ಮುಖಂಡರು ಕಾರ್ಯಕರ್ತರು ಹಾಗೂ ವಸತಿ ರಹಿತರು ಭಾಗವಹಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...