ದಾವಣಗೆರೆ | ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

Date:

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರು, ನಾಯಕರನ್ನು, ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ (SKM) ದಾವಣಗೆರೆ ಜಿಲ್ಲಾ ಸಮಿತಿ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

- Advertisement -

ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗರೆ ಚಂದ್ರು “ಕಳೆದ 1,180 ದಿನಗಳಿಂದಲೂ 13 ಹಳ್ಳಿಗಳ ರೈತರು ತಮ್ಮ 1,770 ಎಕರೆ ಫಲವತ್ತಾದ ಭೂಮಿಯನ್ನು ರಾಜ್ಯ ಸರ್ಕಾರವು ಕೈಗಾರಿಕಾ ಅಭಿವೃದ್ಧಿಯ ಹೆಸರಿನಲ್ಲಿ ಸ್ವಾಧೀನ ಪಡಿಸಿಕೊಳ್ಳಲು ಯತ್ನಿಸುತ್ತಿರುವದರ ವಿರುದ್ಧ ಈ ಭಾಗದ ರೈತರು ಹೋರಾಡುತ್ತಿದ್ದಾರೆ. ಈ ಭೂಮಿಯ ಮೇಲೆ ಅವಲಂಬಿತರಾಗಿ ಯಥೇಚ್ಛವಾದ ಹಾಲು ಉತ್ಪಾದನೆ, ಹೈನುಗಾರಿಕೆ ಹಾಗೂ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಸಮೃದ್ಧವಾಗಿರುವ ಈ ಭೂಮಿಯ ಮೇಲೆ ಈಗ ಭೂಗಳ್ಳರ ಕರಿನೆರಳು ಬಿದ್ದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಎಐಟಿಯುಸಿ, ಸಿಪಿಐ ಮುಖಂಡರಾದ ಆವರಗೆರೆ ಉಮೇಶ್ ಮಾತನಾಡಿ “ರೈತರ ಮನಸ್ಸನ್ನು ಒಲಿಸಲು ರಾಜ್ಯ ಸರ್ಕಾರವು ಕೈಗಾರಿಕಾ ಅಭಿವೃದ್ಧಿ ಹೆಸರಿನಲ್ಲಿ ರೈತರೊಂದಿಗೆ ಮೂರು ಸುತ್ತಿನ ಸಭೆಯನ್ನು ನಡೆಸಿ ನಿನ್ನೆ ಅಂತಿಮವಾಗಿ ತನ್ನ ನಿರ್ಧಾರವನ್ನು ಪ್ರಕಟಿಸಿದೆ. ರೈತರ ಜೀವನದೊಂದಿಗೆ ಚೆಲ್ಲಾಟವಾಡುವ ಈ ನಿರ್ಧಾರವು ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ. ಹಾಗೂ ಸರ್ಕಾರವು ಯಾರ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002217353
ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ಸದಸ್ಯರು ಹೋರಾಟ ನೆಡೆಸಿದರು.

ಮುಖಂಡ ಮಧುತೊಗಲೇರಿ ಮಾತನಾಡಿ “ಒಂದು ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಆಡಳಿತದಲ್ಲಿದ್ದಾಗ ಕೇಂದ್ರ ಬಿಜೆಪಿ ಸರ್ಕಾರವು ಜಾರಿಗೊಳಿಸಿದ್ದ ಭೂ ಸುಧಾರಣಾ ನೀತಿಯನ್ನು ಇಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ವಿರೋಧಿಸಿ ‘ರೈತರೊಂದಿಗೆ ನಾವಿದ್ದೇವೆ, ಈ ನೀತಿಯನ್ನು ಹಿಮ್ಮೆಟ್ಟಿಸುತ್ತೇವೆ’ ಎಂದು ಹೇಳಿ ಈಗ ಇದೇ ನೀತಿಯನ್ನು ತಾವು ಅಧಿಕಾರಕ್ಕೆ ಬಂದಮೇಲೆ ಜಾರಿಗೊಳಿಸುತ್ತಿರುವುದು ರೈತರ ಬೆನ್ನಿಗೆ ಚೂರಿ ಹಾಕಿದಂತಿದೆ” ಎಂದು ಕಿಡಿಕಾರಿದರು

ಜನಶಕ್ತಿ ಮುಖಂಡ ಸತೀಶ್ ಅರವಿಂದ್ ಮಾತನಾಡಿ “ರೈತರ ಒಪ್ಪಿಗೆ ಇಲ್ಲದೆ ಭೂಮಿ ಪಡೆಯುವಂತಿಲ್ಲ ಎನ್ನುವ ಕಾನೂನಿದ್ದರೂ ಸಹ ಒಂದು ಕಡೆ ದೌರ್ಜನ್ಯದಿಂದ, ಇನ್ನೊಂದು ಕಡೆ ಭೂಮಿಯ ಕಾನೂನುಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬದಲಿಸಿ ಸ್ವಾಧೀನ ಪಡಿಸಿಕೊಳ್ಳಲು ಯತ್ನಿಸುತ್ತಿರುವ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಮಾಡಿರುವ ಮಹಾ ದ್ರೋಹ ಇದಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರೈತ ಮುಖಂಡ ಬುಳ್ಳಾಪುರದ ಹನುಮಂತಪ್ಪ ಮಾತನಾಡಿ “ರೈತರನ್ನು ಬೀದಿಗೆ ತಳ್ಳಲಿರುವ ಈ ಸ್ವಾಧೀನ ನಿರ್ಧಾರವು ರದ್ದಾಗಿ ರೈತರ ಭೂಮಿ ರೈತರಿಗೆ ಬರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ, ಏನೇ ಬಂದರೂ ಎದುರಿಸುತ್ತೇವೆ” ಎನ್ನುವ ರೈತರ ಹೋರಾಟದ ಸ್ಪೂರ್ತಿಯು ಇಡೀ ನಾಡಿನ ಜನತೆಯ ಹೃದಯವನ್ನು ತಟ್ಟುತ್ತಿದೆ. ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ದಾವಣಗೆರೆ ಸಮಿತಿ (SKM) ಸಹ ರೈತರ ಗೆಲುವಿನವರೆಗೂ ಹೋರಾಟದೊಂದಿಗೆ ರೈತರೊಂದಿಗೆ ನಿಲ್ಲುತ್ತದೆ ಎಂದು ಭರವಸೆ, ಬೆಂಬಲ ಘೋಷಿಸಿದರು.

“ಭೂಮಿಗಾಗಿ, ಜೀವನಕ್ಕಾಗಿ ಹೋರಾಡುತ್ತಿರುವ ರೈತರ ಜನತಾಂತ್ರಿಕ ಹಕ್ಕನ್ನು ಪೊಲೀಸ್ ದೌರ್ಜನ್ಯದ ಮೂಲಕ ದಮನ ಮಾಡುವ ಹೀನ ಯತ್ನವನ್ನು ಕೈಬಿಟ್ಟು, ಬಂಧಿಸಿರುವ ಎಲ್ಲಾ ನಾಯಕರನ್ನು ಬೇಷರತ್ತಾಗಿ ಕೂಡಲೇ ಬಿಡುಗಡೆಗೊಳಿಸಬೇಕೆಂದು ಹಾಗೂ ಭೂ ಸ್ವಾದೀನ ಪ್ರಕ್ರಿಯೆಯನ್ನು ಕೈ ಬಿಟ್ಟು ಕೂಡಲೇ ರೈತರ ಭೂಮಿಯನ್ನು ರೈತರಿಗೆ ನೀಡಬೇಕು” ಎಂದು ಸಂಯುಕ್ತ ಹೋರಾಟ ಕರ್ನಾಟಕ ದಾವಣಗೆರೆ ಜಿಲ್ಲಾ ಸಮಿತಿಯ ಮುಖಂಡರು ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

ಪ್ರತಿಭಟನೆಯಲ್ಲಿ ರೈತ, ಕಾರ್ಮಿಕ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಮುಖಂಡರಾದ ಮರುಳಸಿದ್ದಯ್ಯ, ಪವಿತ್ರ ಅರವಿಂದ್, ಶ್ರೀನಿವಾಸ್, ಆನಂದ್ ರಾಜು , ಸಂತೋಷ್ ನಾಯಕ್, ಆಪ್ ಮುಖಂಡ ಆದಿಲ್ ಖಾನ್, ರಾಮಾಂಜನೇಯ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...