ದಾವಣಗೆರೆ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ನೇಕಾರ ಸಮುದಾಯದ ಪ್ರತಿಭಟನೆ

Date:

ದಾವಣಗೆರೆ ಪಿಜೆ ಬಡಾವಣೆ ಪೊಲೀಸ್ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ, ಮಹಿಳಾ ಘಟಕ ಹಾಗೂ ನೇಕಾರರ ವೇದಿಕೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.

- Advertisement -

ದಾವಣಗೆರೆಯಲ್ಲಿ ಜನವರಿ 31, 2026ರಂದು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಕರ್ತವ್ಯದ ಮೇಲೆ ತೆರಳಿದ್ದ ಬಡಾವಣೆ ಠಾಣೆಯ ವೃತ್ತ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲೆ ಹಲ್ಲೆ ಮಾಡಿ, ನಿಂದಿಸಿರುವುದು ಅಕ್ಷಮ್ಯ ಅಪರಾಧ. ಪ್ರಾಮಾಣಿಕ ಮತ್ತು ನ್ಯಾಯಯುತ ಅಧಿಕಾರಿಯಾದ ಸಿ.ಪಿ.ಐ. ಗಾಯತ್ರಿಯವರು ಹಿಂದುಳಿದ ನೇಕಾರ ಸಮುದಾಯಕ್ಕೆ ಸೇರಿರುವುದು ಅಷ್ಟೇ ಅಲ್ಲದೇ, ಪ್ರಮುಖವಾದ ಜವಾಬ್ದಾರಿಯಲ್ಲಿ ಇರುವ ಇವರಿಗೆ ಹಲ್ಲೆಯಾದರೆ ಸಾಮಾನ್ಯರಿಗೆ ರಕ್ಷಣೆ ಎಲ್ಲಿದೆ? ಎಂಬ ಪ್ರಶ್ನೆ ಕಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲದೆ ಇನ್ನೂ ಅನೇಕರು ಇವರ ಮೇಲೆ ಹಲ್ಲೆ ಮಾಡಿರುವ ಮಾಹಿತಿ ಇದ್ದು, ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಉಳಿದವರನ್ನು ಬಂಧಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ. ಈ ಘಟನೆಯಿಂದ ದಾವಣಗೆರೆ ಸಾಮಾನ್ಯ ನಾಗರೀಕರು ಈ ವಿಷಯದ ಚರ್ಚಿಸುತ್ತಿದ್ದು, ಹಲವಾರು ಸಂಘ-ಸಂಸ್ಥೆಗಳು ಈ ಘಟನೆಯನ್ನು ಖಂಡಿಸಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಕ್ರಮಕೈಗೊಳ್ಳದೇ ಹೋದಲ್ಲಿ, ಇಡೀ ರಾಜ್ಯಾದಾದ್ಯಂತ ನೇಕಾರ ಸಮುದಾಯ ಹಾಗೂ ಹಿಂದುಳಿದ ಸಮುದಾಯಗಳು ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸುತ್ತಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ವಿಶ್ವವಿದ್ಯಾಲಯದ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ

ಗೌರವಾಧ್ಯಕ್ಷ ಎಸ್.ಕೆ. ಬಸವರಾಜ್, ಅಧ್ಯಕ್ಷ ಶ್ರೀಕಾಂತ್ ಎಂ ಕಾಕಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಕೆ. ಪರಶುರಾಮ್, ಖಜಾಂಜಿ ಗಿರಿಮಲ್ಲೇಶ್ ಎಂ. ಸೇರಿದಂತೆ ಪದಾಧಿಕಾರಿಗಳು, ಮಹಿಳೆಯರು ಸೇರಿದಂತೆ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...