ದಾವಣಗೆರೆ | ಸದಾಶಿವ ರೆಡ್ಡಿ ಮೇಲೆ ಹಲ್ಲೆ, ಜಿಲ್ಲಾ ವಕೀಲರ ಸಂಘ ಖಂಡನೆ, ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ.

Date:

Advertisements

ಭಾರತೀಯ ವಕೀಲ ಪರಿಷತ್ತಿನ ಸದಸ್ಯರು, ಪದಾಂಕಿತ ಹಿರಿಯ ವಕೀಲರಾದ ವೈ ಆರ್ ಸದಾಶಿವರೆಡ್ಡಿಯವರ ಕಚೇರಿಗೆ ನುಗ್ಗಿ ಸದಾಶಿವರಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡಿಸಿ, ವಕೀಲರ ಸಂರಕ್ಷಣಾ ಕಾಯ್ದೆ ಪರಿಣಾಮಕಾರಿ ಜಾರಿಗೆ ದಾವಣಗೆರೆ ಜಿಲ್ಲಾ ವಕೀಲರು ವಕೀಲರ ಭವನದಲ್ಲಿ ಖಂಡನಾ ಸಭೆ ನಡೆಸಿ ಒತ್ತಾಯಿಸಿದರು. ಇದೇ ವೇಳೆ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ರವರಿಗೆ ಮನವಿ ಸಲ್ಲಿಸಲಾಯಿತು.

1001871785
ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

“ಎಪ್ರಿಲ್ 16ರಂದು ಬಳ್ಳಾರಿಯ ಸದಾಶಿವ ರೆಡ್ಡಿ ಅವರ ಕಚೇರಿಗೆ ನುಗ್ಗಿ ಅಪರಿಚಿತ ವ್ಯಕ್ತಿಗಳು ಫೈಬರ್ ಪೈಪ್ ನಿಂದ ಹಲ್ಲೆ ಮಾಡಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ದಾವಣಗೆರೆ ಜಿಲ್ಲಾ ವಕೀಲರ ಸಂಘ ಮತ್ತು ವಕೀಲರು ಖಂಡಿಸಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣ್ ಕುಮಾರ್, “ಇಂತಹ ಘಟನೆಗಳನ್ನು ಖಂಡಿಸುವುದು ಎಲ್ಲರ ಕರ್ತವ್ಯ. ರಾಜ್ಯ ಪರಿಷತ್ ಎಪ್ರಿಲ್ 16ರಂದು ನಡೆದ ಹಲ್ಲೆ ಘಟನೆಯನ್ನು ಖಂಡಿಸಲು ಎಪ್ರಿಲ್ 19ರಂದು ಕರೆ ನೀಡಿರುವುದು ಬೇಸರದ ಸಂಗತಿ. ಘಟನೆಯಲ್ಲಿ ವಕೀಲರಾದ ಸದಾಶಿವ ರೆಡ್ಡಿ ಅವರ ಕೈ ಮುರಿಯಲಾಗಿದೆ. ಕಾಲು ಸಹ ಮುರಿದಿದೆ. ಒಬ್ಬ ರಾಷ್ಟ್ರೀಯ ವಕೀಲರ ಪರಿಷತ್ ಸದಸ್ಯರ ಮೇಲೆ ಈ ರೀತಿ ಹಲ್ಲೆ ನಡೆಸಿದ್ದು ಆತಂಕಕಾರಿ” ಎಂದು ಆತಂಕ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆಯ ಸಹೋದರನ ಹಸ್ತಕ್ಷೇಪ, ಸದಸ್ಯರಿಂದ ಗ್ರಾಮ ಪಂಚಾಯಿತಿಗೆ ಬೀಗ.

ಸಂಘದ ಮಾಜಿ ಅಧ್ಯಕ್ಷ, ಹಿರಿಯ ವಕೀಲ ವಿಜಯಪ್ರಕಾಶ್ ಮಾತನಾಡಿ, “ವಕೀಲರ ರಕ್ಷಣೆಗೆ ಕಾನೂನು ಅಗತ್ಯವಿದೆ. ವಕೀಲರ ಸಂರಕ್ಷಣಾ ಕಾಯ್ದೆ ಯಾಕೆ ಪರಿಣಾಮಕಾರಿಯಾಗಿ ಜಾರಿ ಆಗಿಲ್ಲ” ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಸಂಘದ ಕಾರ್ಯದರ್ಶಿ ಬಸವರಾಜ್, ಉಪಾಧ್ಯಕ್ಷ ಬಸವರಾಜ್ ಗೋಪನಾಳು, ಮಾಜಿ ಕಾರ್ಯದರ್ಶಿ ಶ್ಯಾಂ, ವಕೀಲರಾದ ನಾಗರಾಜ್, ಆಂಜನೇಯ ಗುರೂಜಿ, ಎ.ಎಸ್. ಮಂಜುನಾಥ್, ಭಾಗ್ಯಲಕ್ಷ್ಮಿ, ಕಂದಗಲ್ ಗೌಡ್ರ ಮಲ್ಲಿಕಾರ್ಜುನ್, ಎ.ಸಿ.ರಾಘವೇಂದ್ರ, ಗಣೇಶ್, ಮಂಜುಳಾ ಸಭೆಯ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X