ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಗ್ರಂಥಾಲಯ ವಿಭಾಗದ ವತಿಯಿಂದ 2025, ಆಗಸ್ಟ್ 12 ಮಂಗಳವಾರ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ “ಕೃತಕ ಬುದ್ಧಿಮತ್ತೆ ಯುಗದಲ್ಲಿ ತಂತ್ರಜ್ಞಾನ ರೂಪಾಂತರದ ಮೂಲಕ ಗ್ರಂಥಾಲಯ ಸುಸ್ಥಿರ ಅಭಿವೃದ್ಧಿ ಹಾಗೂ ಸಮಸ್ಯೆಗಳು, ಸವಾಲುಗಳು ಮತ್ತು ಅವಕಾಶಗಳು” ಕುರಿತು ನೆಡೆಯುವ ಕಾರ್ಯಾಗಾರವನ್ನು ಚೆನ್ನೈನ ಮದ್ರಾಸ್ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ರಮೇಶ ಬಾಬು ಉದ್ಘಾಟಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಯೋಜನೆ; ಕಾಂಗ್ರೆಸ್ ನಿಂದು ಯೋಜನೆಯ ಸತ್ಯ ಶೋಧನಾ ಸಮಾವೇಶ
ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಬಸವ ಅಂತರರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಮುತ್ತಯ್ಯ ಕೋಗನೂರಮಠ, ತಿರುಪತಿ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಡಿ.ಚಂದ್ರನ್, ತುಮಕೂರು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ಬಿ.ಟಿ.ಸಂಪತ್‍ಕುಮಾರ್ ಅತಿಥಿಗಳಾಗಿ ಭಾಗವಹಿಸುವರು. ಕುಲಸಚಿವರಾದ ಎಸ್.ಬಿ.ಗಂಟಿ, ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಸಂಯೋಜಕರಾದ ಡಾ. ಜಿ.ನೀಲಮ್ಮ ಮತ್ತು ಡಾ.ಸಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.