ದಾವಣಗೆರೆ | ಕಾಶ್ಮೀರದ ಪ್ರವಾಸಿಗರ ಮೇಲಿನ ಉಗ್ರ ಕೃತ್ಯಕ್ಕೆ ಚನ್ನಗಿರಿ ಯುವ ಕಾಂಗ್ರೆಸ್ ಖಂಡನೆ, ಶಿಕ್ಷೆಗೆ ಆಗ್ರಹ.

Date:

“ಕಾಶ್ಮೀರದಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಂತಹ ಕೃತ್ಯವನ್ನು ಖಂಡಿಸಿ, ಕೂಡಲೇ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಒತ್ತಾಯಿಸಿ, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಗಿರಿ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾನವ ಸರಪಳಿ ರಚಿಸಿ ಮೇಣದ ದೀಪ ಬೆಳಗಿಸಿ ದಾಳಿಯಲ್ಲಿ ಮೃತರಾದ ಜೀವಗಳಿಗೆ ಗೌರವ ಸೂಚಿಸಲಾಯಿತು.

- Advertisement -
1001884060

ಈ ವೇಳೆ ಮಾತನಾಡಿದ ಮುಖಂಡರು “ಪ್ರವಾಸಕ್ಕೆ ತೆರಳಿದ್ದ ನಮ್ಮ ಕರ್ನಾಟಕ ರಾಜ್ಯದ ಮತ್ತು ಇತರ ಪ್ರವಾಸಿಗರ ಮೇಲೆ ಉಗ್ರ ಕೃತ್ಯ ಎಸಗಿ ಕೊಲ್ಲಲಾಗಿದೆ. ಈ ಕೃತ್ಯ ಎಸಗಿದ ಉಗ್ರರನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು.‌ ಅಂದು ಪುಲ್ವಾಮಾ ದಾಳಿ ಆಗಿತ್ತು . ಇಂದು ಅದೇ ಪ್ರದೇಶದಲ್ಲಿ ಪಹಲ್ಗಾಮ್ ದಾಳಿ ನಡೆಸಿದ್ದಾರೆ. ಈ ಭದ್ರತಾ ವೈಫಲ್ಯಕ್ಕೆ ಯಾರು ಕಾರಣ. ಕೂಡಲೇ ಭದ್ರತೆ ಹೆಚ್ಚಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಹಲ್‌ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಗೆ ಎಸ್‌ಯುಸಿಐ(ಸಿ) ಖಂಡನೆ,

ಈ ವೇಳೆ ಚನ್ನಗಿರಿ ತಾಲ್ಲೂಕಿನ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೀಸ್ ಮತ್ತು ಪುರಸಭೆ ಸದಸ್ಯ ಗೌಸ್ ಪೀರ್ ತನ್ವೀರ್, ಇಮ್ರಾನ್, ಮಧು, ಜಾವಿದ್, ಜೀಲಾನಿ ಹಾಗೂ ಎ ಐ ಟಿ ಯು ಸಿ ಹಾಗು ವಿವಿಧ ಸಂಘಟನೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...