ದಾವಣಗೆರೆ | ಸಾಮಾಜಿಕ ನ್ಯಾಯ ಬಿಟ್ಟು ರಾಜಕೀಯ ಅಧಃಪತನದತ್ತ ಕಾಂಗ್ರೆಸ್: ಮುಸ್ಲಿಮರ ಅಸಮಾಧಾನ

Date:

ದಾವಣಗೆರೆ ಉಪಚುನಾವಣೆ ಹಾಗೂ ನಂತರದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಅಧಃಪತನದ ದಿಕ್ಕಿನಲ್ಲಿ ಸಾಗುವಂತಿವೆ. ಮುಸ್ಲಿಮರ ಅಸಮಾಧಾನವನ್ನು ತಣ್ಣಗಾಗಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಹಾಗೂ ತನ್ನ ರಾಜಕೀಯ ನಡವಳಿಕೆ ಬಗ್ಗೆ ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ ಅಲ್ಪಸಂಖ್ಯಾತರ ಭಾವನೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ತನ್ನ ಜಾತ್ಯಾತೀತ ಮತ್ತು ಸಾಮಾಜಿಕ ನ್ಯಾಯದ ಮೂಲ ಮೌಲ್ಯಗಳಿಂದ ದೂರ ಸರಿಯುತ್ತಿದೆ. ಇದೇ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಬ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಕಾರಣ. ಈ ಕೂಡಲೇ ಅವರ ಮೇಲಿನ ಕ್ರಮ ಹಿಂಪಡೆಯಬೇಕು” ಎಂದು ದಾವಣಗೆರೆಯ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯ ಅಡಿಯಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ಮಸೀದಿಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಒತ್ತಾಯಿಸಿದರು.

- Advertisement -

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯ ಅಧ್ಯಕ್ಷ ಅಬ್ದುಲ್ ಘನಿ ತಾಹಿರ್
“ದಾವಣಗೆರೆ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ನಡೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡುವ ಭರವಸೆ ಇದ್ದರೂ, ಕುಟುಂಬ ರಾಜಕಾರಣ, ಜಾತಿ ಮತ್ತು ಹಣದ ಪ್ರಭಾವಕ್ಕೆ ಮಣಿದಿರುವುದು ಜಾತ್ಯಾತೀತ ಶಕ್ತಿಗಳ ನಿರೀಕ್ಷೆಗಳನ್ನು ಸುಳ್ಳಾಗಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಶ್ಚಿಮ ಪದವೀದರರ ಕ್ಷೇತ್ರ ಸಮರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್...

ಪಶ್ಚಿಮ ಪದವೀದರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀದರರ ಕ್ಷೇತ್ರವೀಗ ಬಿಜೆಪಿಯ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...
1004146558

“ಈ ಅವಕಾಶವಾದಿ ರಾಜಕಾರಣದಿಂದ ಅಲ್ಪಸಂಖ್ಯಾತರು ಮತ್ತು ಪ್ರಗತಿಪರ ಶಕ್ತಿಗಳಲ್ಲಿ ಬೇಸರ ಉಂಟಾಗಿದೆ. ಫಲಿತಾಂಶ ಏನೇ ಬಂದರೂ ಕಾಂಗ್ರೆಸ್ ನೈತಿಕವಾಗಿ ಸೋತಿದೆ ಎಂಬ ಭಾವನೆ ಮೂಡಿದೆ. ಪರಿಣಾಮವಾಗಿ ಕೆಲವರು ಕಾಂಗ್ರೆಸ್‌ಗೆ ಮತ ಹಾಕಿದರೂ, ಕೆಲವರು ವಿರೋಧವಾಗಿ ಮತಹಾಕಿದ್ದು ಅಥವಾ ಮತದಾನದಿಂದ ದೂರ ಉಳಿದಿದ್ದು, ಸಮುದಾಯದೊಳಗೆ ಗೊಂದಲ ಸ್ಪಷ್ಟಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತಂಜೀಂ ಮಾಜಿ ಅಧ್ಯಕ್ಷ ವೈಎಂ ಫಕ್ರುದ್ದೀನ್ ಮಾತನಾಡಿ “ದಾವಣಗೆರೆಯ ರಾಜಕೀಯ ಗೊಂದಲಗಳ ಪರಿಹರಿಸುವ ಹೊಣೆಗಾರಿಕೆ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿದೆ. ಚುನಾವಣೆ ನಂತರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗೊಂದಲ ಉಂಟು ಮಾಡಿದ ನಾಯಕರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು. ಆತ್ಮಾವಲೋಕನ ಮಾಡುವ ಬದಲು ಪಕ್ಷ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನತೆ ಉಂಟುಮಾಡಲು ಪ್ರಯತ್ನಿಸುತ್ತಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ” ಎಂದು ತಿಳಿಸಿದರು.

“ಈ ಬೆಳವಣಿಗೆಗಳು 2028ರ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿವೆ. ಅಲ್ಪಸಂಖ್ಯಾತರು, ದಲಿತರು ಮತ್ತು ಜಾತ್ಯಾತೀತ ಶಕ್ತಿಗಳನ್ನು ನಿರ್ಲಕ್ಷ್ಯ ಮಾಡಿದರೆ, ಅವರು ಪಕ್ಷದಿಂದ ದೂರ ಸರಿಯುವ ಸಾಧ್ಯತೆ ಇದೆ. ಈಗಾದರೂ ನಾಯಕತ್ವ ತಪ್ಪು ತಿದ್ದಿಕೊಂಡು ನಂಬಿಕೆ ಗಳಿಸಿಕೊಳ್ಳುವುದು ಅಗತ್ಯವಾಗಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ಸುದ್ದಿಗೋಷ್ಠಿಯಲ್ಲಿ ಕೆಟಿಜೆ ನಗರ ಮಸೀದಿಯ ಸಮೀರ್, ವಿನೋಬನಗರ ಮಸೀದಿಯ ಖಾಸಿಂಸಾಬ್, ಖುಬ್ರಾ ಮಸೀದಿಯ ಉಲ್ಮಾನಿ ರೆಹಮಾನ್, ಎಸ್ ಜೆಎಂ ನಗರದ ನೂರುಲ್ಲಾ ಮಸೀದಿಯ ಖಲೀಮುಲ್ಲಾ, ಭಗತ್ ಸಿಂಗ್ ನಗರದ ಮಸೀದಿಯ‌ ಇಎ ಜಬ್ಬಾರ್, ಕ್ರೈಸ್ತ ಪಾದ್ರಿ ರಾಜಶೇಖರ್ ಸೇರಿದಂತೆ ಭಾಷಾ ನಗರ, ಎಸ್ ಎಸ್ ಎಂ ನಗರ, ಶಿವಾನಗರ, ಬಾರ್ಲೈನ್ ರೋಡ್, ದೇವರಾಜ್ ಅರಸ್ ಲೇಔಟ್, ಸಂತೆಬೆನ್ನೂರು, ಹಿಮಾಮನಗರ, ನರಸರಾಜಪೇಟೆ, ಚೌಕಿಪೇಟೆ, ಬಿಎನ್ ಲೇಔಟ್,, ಅಜಾದ್ ನಗರ, ಅಹಮದ್ ನಗರ, ಮುಸ್ತಾಫ ನಗರ, ರಿಂಗ್ ರಸ್ತೆ, ಮಂಡಕ್ಕಿ ಭಟ್ಟಿ ಲೇಔಟ್, ಭಾಷಾ ನಗರ, ದೇವರಾಜ್ ನಗರ ಸೇರಿದಂತೆ ಹಲವು ಮಸೀದಿಗಳ ಅಧ್ಯಕ್ಷರು ಕಾರ್ಯದರ್ಶಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರೊಂದಿಗೆ ಗರ್ಬಾ ಹೆಜ್ಜೆ ಹಾಕಿದ ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್ ಮಮ್ದಾನಿ

ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ಅವರು ನವರಾತ್ರಿ ಆಚರಣೆಯಲ್ಲಿ ಭಾರತೀಯರೊಂದಿಗೆ...

‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ 'ಫೈನಾನ್ಸ್ ವಿತ್ ಹರೀಶ್' ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...