ದಾವಣಗೆರೆ | ಎಸ್ಐಆರ್ ಕುರಿತ ಕಾಂಗ್ರೆಸ್‌ ಮೌನ ಅಪಾಯಕಾರಿ: ಎಸ್‌ಡಿಪಿಐನ ಅಬ್ದುಲ್ ಹನ್ನಾನ್

Date:

ಎಸ್ಐಆರ್ ಕುರಿತು ಪ್ರತಿಭಟನೆ ನಡೆಸದೆ, ಅಪಾಯ ಬದಿಗಿಟ್ಟು ಕಾಂಗ್ರೆಸ್‌ ಮೌನಕ್ಕೆ ಶರಣಾಗಿರುವುದು ಅಪಾಯಕಾರಿ ಬೆಳವಣಿಗೆ. ಮತದಾರರ, ನಾಗರೀಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ನಿಯಮಾವಳಿಯೇ ಎಸ್ಐಆರ್ (SIR-ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಆಗಿದೆ” ಎಂದು ದಾವಣಗೆರೆಯಲ್ಲಿ ಎಸ್ಐಆರ್ ಕುರಿತ ಜಾಗೃತಿ ಸಮಾಲೋಚನಾ ಸಭೆಯಲ್ಲಿ ಎಸ್‌ಡಿಪಿಐನ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಆತಂಕ ವ್ಯಕ್ತಪಡಿಸಿದರು.‌

- Advertisement -
1003640338

ದಾವಣಗೆರೆಯಲ್ಲಿ ಫೆಬ್ರವರಿ 07 ರಂದು ಎಸ್ಐಆರ್ ಪ್ರಕ್ರಿಯೆ ಪ್ರಾಥಮಿಕ ಹಂತದ ಮ್ಯಾಪಿಂಗ್ ಪ್ರಕ್ರಿಯೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎದುರಾಗುವ ರಾಜಕೀಯ ಸವಾಲುಗಳು ಮತ್ತು ಪಕ್ಷದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲು ಎಸ್‌ಡಿಪಿಐನ (SDPI) ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ದೇಶಾದ್ಯಂತ ಮತದಾರರ ಹಕ್ಕುಗಳಿಗೆ ಗಂಭೀರ ಅಪಾಯ ಉಂಟುಮಾಡುತ್ತಿರುವ ಎಸ್ಐಆರ್ ಪ್ರಕ್ರಿಯೆ ಕುರಿತು ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದರೂ ಸಹ, ಈ ಅಪಾಯವನ್ನು ಗಂಭೀರವಾಗಿ ಪರಿಗಣಿಸದೇ, ಪ್ರಬಲ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಮುಂದಾಗದೆ ಜಾಣ ಕುರುಡು ಪ್ರದರ್ಶಿಸುತ್ತಿರುವ ಕಾಂಗ್ರೆಸ್ ಪಕ್ಷದ ನಿಲುವು ಆತಂಕಕಾರಿ ಬೆಳವಣಿಗೆಯಾಗಿದೆ” ಎಂದು ಹನ್ನಾನ್ ಆಕ್ರೋಶ ವ್ಯಕ್ತಪಡಿಸಿದರು.

1003640337

“ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಸ್ಐಆರ್ ಪ್ರಕ್ರಿಯೆಯ ಅಪಾಯಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ, ಮತದಾರರ ಹಕ್ಕುಗಳ ರಕ್ಷಣೆಗೆ ಧೈರ್ಯಶಾಲಿ ನಿಲುವು ತಳೆದಿರುವುದು ದೇಶದ ಗಮನ ಸೆಳೆದಿದೆ. ಈ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಮತಾ ಬ್ಯಾನರ್ಜಿಯ ಈ ಸಾಮಾಜಿಕ ಬದ್ಧತೆಯಿಂದ ಪಾಠ ಕಲಿಯುವರೇ..? ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸಿದೆ” ಎಂದು ಟೀಕಿಸಿದರು.‌

“ಶೀಘ್ರದಲ್ಲೇ ಕರ್ನಾಟಕದಲ್ಲಿಯೂ ಸಹ ಎಸ್ಐಆರ್ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಬಡವರು, ಅಲ್ಪಸಂಖ್ಯಾತರು, ವಲಸಿಗ ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ, ದಲಿತರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಪಾಯ ಈ ಪ್ರಕ್ರಿಯೆಯಲ್ಲಿ ಅಡಗಿದ್ದು, ಇದು ಎನ್ಆರ್ಸಿ(NRC) ಎಂಬ ಕರಾಳ ನಿಯಮದ ಹಿಂಬಾಗಿಲು ಎಂದು ಅನೇಕ ಸಾಮಾಜಿಕ ಚಿಂತಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ ಆದರೆ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಈ ಕರಾಳ ನಿಯಮವನ್ನು ಪ್ರಬಲವಾಗಿ ವಿರೋಧಿಸದಿರುವುದು ಅತ್ಯಂತ ಖೇದಕರ” ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸ

1003640339

“ಜನರ ಮತದಾನದ ಹಕ್ಕು ಸಂವಿಧಾನಾತ್ಮಕ ಹಕ್ಕು, ಅದನ್ನು ರಕ್ಷಿಸುವ ಜವಾಬ್ದಾರಿ ಆಡಳಿತದಲ್ಲಿರುವ ಸರ್ಕಾರದ ಮೇಲಿದೆ. ಈ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗದೇ, ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಈ ಎಸ್ಐಆರ್ ಪ್ರಕ್ರಿಯೆಯಿಂದ ಉಂಟಾಗುವ ಕಾನೂನಾತ್ಮಕ, ರಾಜಕೀಯ ಮತ್ತು ಸಾಮಾಜಿಕ ದುಷ್ಪರಿಣಾಮಗಳು ಮತದಾರರನ್ನು ದಿಕ್ಕು ತಪ್ಪಿಸಿ ಕುತಂತ್ರದ ಮೂಲಕ ಅಧಿಕಾರ ಪಡೆಯಲು ಬಿಜೆಪಿ ಹವಣಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆರೋಪಿಸಿದರು.

1003640342

ಹಿರಿಯ ನಾಯಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ, ಎಸ್‌ಡಿಪಿಐ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಇಂದಿನ ವಿಶೇಷ ಸಭೆಯ ಪ್ರಮುಖ ವಿಷಯವಾಗಿತ್ತು. ಉಪಚುನಾವಣೆಯಲ್ಲಿ ಎಸ್‌ಡಿಪಿಐ (SDPI) ಪಕ್ಷದ ಪಾತ್ರ ಪ್ರಮುಖವಾಗಿದ್ದು, ಚುನಾವಣಾ ಸಿದ್ಧತೆ, ಸಂಘಟನಾ ಬಲವರ್ಧನೆ ಹಾಗೂ ಪರ್ಯಾಯ ರಾಜಕೀಯದ ಅಗತ್ಯತೆಯ ಕುರಿತು ಮುಖಂಡರು ಸುದೀರ್ಘ ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಸ್ಲಿಂ ಸಮಾಜದ ವಿರುದ್ಧ ಕೋಮುವಾದಿ ಹೇಳಿಕೆ: ಕ್ರಮಕ್ಕೆ ಮುಖಂಡರ ಆಗ್ರಹ

ಸಮಾಲೋಚನಾ ಸಭೆಯಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಮೌಲನ ಸೈಯದ್ ಅಕ್ರಮ್, ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹಮದ್ ದಾವಣಗೆರೆ, ಜಿಲ್ಲಾಧ್ಯಕ್ಷರಾದ ಎ ಆರ್ ತಾಹೀರ್, ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಝ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌಸ್ ಪೀರ್ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಇಸ್ಮಾಯೀಲ್ ಝಬಿವುಲ್ಲಾ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಮೊಹಮ್ಮದ್ ಕುಬೈಬ್ ಹಾಗೂ ತಾಲ್ಲೂಕು ಮುಖಂಡರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...