ದಾವಣಗೆರೆ | ಅಶ್ವಿನಿ, ಭೂಮಾನಂದ ಹತ್ಯೆಯ ಸೂಕ್ತ ತನಿಖೆಗೆ ದಲಿತ-ದಮನಿತರ ಹೋರಾಟ ಸಮಿತಿ ಆಗ್ರಹ

Date:

ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ-ದಮನಿತರ ಹೋರಾಟ ಸಮಿತಿ (DDHS), ದಾವಣಗೆರೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಆಗಸ್ಟ್ 31, 2026ರ ಸೋಮವಾರ ದಾವಣಗೆರೆಯ ಉಪವಿಭಾಗಾಧಿಕಾರಿ ಮೂಲಕ ಗೃಹ ಸಚಿವರಿಗೆ ಪ್ರತಿಭಟನಾ ಮನವಿ ಸಲ್ಲಿಸಿದ ಸಮಿತಿ ಮುಖಂಡರು, ದಲಿತ ಹಾಗೂ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಪರಿಣಾಮಕಾರಿ ಹಾಗೂ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮುಖಂಡರು “ಆಗಸ್ಟ್ 19ರಂದು ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಅವರು ಬಯಲು ಶೌಚಕ್ಕೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದು, ಮೃತದೇಹವನ್ನು ಬಾವಿಗೆ ಎಸೆಯಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆ ಅತ್ಯಂತ ಅಮಾನವೀಯವಾಗಿದ್ದು, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಅದೇ ರೀತಿ ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರು ಯುವಕರಲ್ಲಿ ಅಂಬೇಡ್ಕರ್ ವಿಚಾರಧಾರೆ ಕುರಿತು ಜಾಗೃತಿ ಮೂಡಿಸುತ್ತಿದ್ದ ಸಂದರ್ಭದಲ್ಲಿ ಹತ್ಯೆಗೀಡಾಗಿದ್ದಾರೆ. ಈ ಪ್ರಕರಣದಲ್ಲಿಯೂ ಸತ್ಯಾಂಶವನ್ನು ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಅಶ್ವಿನಿ ಹೊಕ್ರಾಣಿ ಮತ್ತು ಭೂಮಾನಂದ ಹದ್ದಿನಾಳ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಪರಿಹಾರ ಹಾಗೂ ನ್ಯಾಯ ಒದಗಿಸಬೇಕು. ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆಗಳನ್ನು ತಡೆಗಟ್ಟಲು ಪರಿಣಾಮಕಾರಿ ಹಾಗೂ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸಮಿತಿಯ ಹಕ್ಕೊತ್ತಾಯಗಳನ್ನು ಗೃಹ ಸಚಿವರಿಗೆ ಉಪವಿಭಾಗಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ?ದಾವಣಗೆರೆ | ಜಾತಿ ದೌರ್ಜನ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಪ್ರತಿಭಟನಾ ಮನವಿ ಸಲ್ಲಿಕೆ ಸಂದರ್ಭದಲ್ಲಿ ದಲಿತ ದಮನಿತರ ಹೋರಾಟ ಸಮಿತಿಯ ಮುಖಂಡರಾದ ವಕೀಲರು ಹಾಗೂ ಸಂಚಾಲಕ ಸತೀಶ್ ಅರವಿಂದ್, ಮುಖಂಡರಾದ ಸುರೇಶ್ ಶಿಡ್ಲಪ್ಪ, ವೆಂಕಟೇಶ್, ಗೋವಿಂದಪ್ಪ, ನಾಗೇಶ್, ರಘು, ಧರ್ಮ ನಾಯ್ಕ, ಸತೀಶ್, ಲಕ್ಷ್ಮಣ್ ಸೇರಿದಂತೆ ಹಲವು ದಲಿತ ಮುಖಂಡರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರಿನಲ್ಲಿ ನಿಲ್ಲದ ರೈತರ ಆತ್ಮಹತ್ಯೆ ಸರಣಿ, ಪರಿಹಾರ ವಿತರಣೆಯ ಅಂಕಿ-ಅಂಶಗಳಲ್ಲೇ ಗೊಂದಲ!

ಕೃಷಿ ಪ್ರಧಾನ ಜಿಲ್ಲೆಯೆಂಬ ಹೆಗ್ಗಳಿಕೆ ಹೊಂದಿರುವ ರಾಯಚೂರಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...