ದಾವಣಗೆರೆ | ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಕೆಗೆ ದಸಂಸ ಒತ್ತಾಯ

Date:

Advertisements

ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳ ವರೆಗೆ ಮುಂದುವರೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

1002834700

“ಸೆ.22 ರಿಂದ ಆರಂಭವಾಗಿರುವ ಸಮೀಕ್ಷಾ ಕಾರ್ಯ ಅ.7ರವರೆಗೆ ನಡೆಯಲಿದೆ. ದಸರಾ ನಿಮಿತ್ತ ಶಾಲಾ, ಕಾಲೇಜುಗಳಿಗೆ ರಜೆ ನೀಡಿರುವುದರಿಂದ ಪೋಷಕರು ಕುಟುಂಬ ಸಮೇತ ತಮ್ಮ ಸ್ವಂತ ಊರುಗಳಿಗೆ, ಪ್ರವಾಸಕ್ಕೆ ತೆರಳಿರುತ್ತಾರೆ. ಪರಿಣಾಮವಾಗಿ ಸಮೀಕ್ಷೆ ನಡೆಸುವ ಸರ್ಕಾರದ ಉದ್ದೇಶ ಪರಿಪೂರ್ಣವಾಗಿ ಈಡೇರುವುದಿಲ್ಲ. ದಲಿತ, ಹಿಂದುಳಿದ ವರ್ಗಗಳು ಹಾಗೂ ಬಡವರ ಪಾಲಿಗೆ ಬಹು ಮುಖ್ಯವಾದ ಈ ಸಮೀಕ್ಷೆ ಪರಿಪೂರ್ಣವಾಗಬೇಕಿದೆ. ಹೀಗಾಗಿ ಸಮೀಕ್ಷಾ ಕಾರ್ಯವನ್ನು ಅ.17ರವರೆಗೆ ಮುಂದುವರೆಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಈ ಹಿಂದೆ 158 ಕೋಟಿ ಅನುದಾನ ಖರ್ಚು ಮಾಡಿ ರಾಜ್ಯ ಸರ್ಕಾರದಿಂದ ಜಾತಿ ಸಮೀಕ್ಷೆ ನಡೆಸಲಾಯಿತು, ಆದರೆ ಆ ಸಮೀಕ್ಷಾ ಕಾರ್ಯ ತಾರ್ಕಿಕ ಹಂತಕ್ಕೆ ತಲುಪಲಿಲ್ಲ. ಈ ಬಾರಿಯ ಸಮೀಕ್ಷಾ ಕಾರ್ಯ ತಾರ್ಕಿಕ ಹಂತಕ್ಕೆ ತಲುಪಬೇಕು, ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಾಪಲ್ಯತೆ ಪಡೆಯಬೇಕೆಂದು” ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಭದ್ರಾ ನದಿಯಲ್ಲಿ ವೃದ್ಧೆ ಆತ್ಮಹತ್ಯೆ ಯತ್ನ: ರಕ್ಷಿಸಿದ ಹರಿಹರ ಪೊಲೀಸರು

ಬಲಾಢ್ಯರು, ಸ್ಥಿತಿವಂತರು, ಮನುಸ್ಮೃತಿ ಆರಾಧಕರು ಈ ಸಮೀಕ್ಷೆ ಯಶಸ್ವಿಯಾಗದಂತೆ ತಡೆಯಲು ಹುನ್ನಾರ ನಡೆಸಿದ್ದಾರೆ. ಬಡವರ ಪರ ಇರುವ ಈ ಸಮೀಕ್ಷಾ ಕಾರ್ಯಕ್ಕೆ ಎಲ್ಲಾ ಧರ್ಮ, ಜಾತಿ, ಪಂಗಡದವರು ಸಹಕರಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X