ದಾವಣಗೆರೆ | ಮುಖ್ಯಮಂತ್ರಿ ಜೆ ಎಚ್ ಪಟೇಲರು ಓದಿದ ಶಿಥಿಲಾವಸ್ಥೆಯಲ್ಲಿರುವ ಶಾಲೆಗೆ ಹೊಸ ಕಟ್ಟಡಕ್ಕೆ ಆಗ್ರಹ

Date:

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರು ಓದಿದ ದಾವಣಗೆರೆ ತಾಲೂಕಿನ ಕಾರಿಗನೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೋರಾಟದ ಕೂಗು ಮೊಳಗಿದ್ದು, ಶೌಚಾಲಯ ವ್ಯವಸ್ಥೆ ಸರಿ ಇಲ್ಲದೇ, ಶಿಥಿಲಗೊಂಡಿರುವ ಕಟ್ಟಡದ ಹೊಸ ನಿರ್ಮಾಣಕ್ಕೆ ಒತ್ತಾಯಿಸಿ ಶಾಲೆಗೆ ಹೊಸ ಕಟ್ಟಡ ಒದಗಿಸುವಂತೆ ಆಗ್ರಹಿಸಿ ಇಂದು ಎಐಡಿಎಸ್‌ಓ ಹಾಗೂ ಎಸ್ ಡಿ ಎಂ ಸಿ ನೇತೃತ್ವದಲ್ಲಿ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಶಾಲೆ ಕುರಿತು ಮಾತನಾಡಿದ ರೈತ ಹೋರಾಟಗಾರ ತೇಜಸ್ವಿ ವಿ. ಪಟೇಲ್ ಮಾತನಾಡಿ, “60 ವರ್ಷಗಳು ತುಂಬಿರುವ ಶಾಲೆ ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಜೋರಾಗಿ ಮಳೆ ಬಂದರೆ ಎಡೆಬಿಡದೆ ಸುರಿಯುವ ಮೇಲ್ಚಾವಣಿ, ಗೋಡೆಗಳು ನೀರು ಹಿಡಿಯುತ್ತಿದ್ದು, ಯಾವಾಗ ಯಾವ ಹಂಚು ಯಾರ ಮೇಲೆ ಬೀಳುತ್ತೋ ಎಂಬ ಭಯದಲ್ಲೇ ಓದುತ್ತಿರುವ ಮಕ್ಕಳು ಓದುತ್ತಿದ್ದಾರೆ. ಶಿಕ್ಷಕರು ಭಯದಲ್ಲೇ ಪಾಠ ಮಾಡುತ್ತಿದ್ದಾರೆ. ಶಾಲೆಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹೊಸದಾಗಿ ನಿರ್ಮಾಣವಾಗಿರುವ ಕಟ್ಟಡದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ಶಾಲೆಯಲ್ಲಿ ಪ್ರತಿ ವರ್ಷ ಇನ್ನೂರಕ್ಕೂ ಹೆಚ್ಚು ಮಕ್ಕಳು ದಾಖಲಾಗುತ್ತಿದ್ದರು. ಆದರೆ ಈ ಬಾರಿ ಸೋರುತ್ತಿರುವ ಕಟ್ಟಡ ಗಮನಿಸಿದ ಪೋಷಕರು ಶಾಲೆಗೆ ಸೇರಿಸಲು ಹಿಂಜರಿಯುತ್ತಿದ್ದಾರೆ. ಹಾಗಾಗಿ ಶಾಲೆಯ ದಾಖಲಾತಿಯು ಸಹ ಕಡಿಮೆಯಾಗಿದೆ. ಇಂತಹ ಸೋರುತ್ತಿರುವ ಕಟ್ಟಡದಲ್ಲೂ ಸಹ 170 ಬಡ ಮಕ್ಕಳು ಕಲಿಯುತ್ತಿದ್ದಾರೆ. ರಾಜ್ಯದ ಕೆಲವೆಡೆ ಮಕ್ಕಳ ಮೇಲೆ ಮೇಲ್ಚಾವಣಿ ಬಿದ್ದು ಪ್ರಾಣ ಕಳೆಕೊಂಡಿರುವ ಉದಾಹರಣೆಯಿದೆ. ಕೂಡಲೇ ಸರ್ಕಾರ, ಶಿಕ್ಷಣ ಇಲಾಖೆ ನೂತನ ಕಟ್ಟಡಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು

1002150376

ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿ “ಇದೇ ಶಾಲೆಯ ಒಬ್ಬ ವಿದ್ಯಾರ್ಥಿನಿಯೋರ್ವರ ಮೇಲೆ ಹಂಚು ಬಿದ್ದಿರುವ ಅವಘಡ ಸಂಭವಿಸಿದೆ. ಹೆಂಚು ಬಿದ್ದು ಹಣೆ ಮತ್ತು ತುಟಿಯಮೇಲೆ ಗಾಯದ ಗುರುತು ಹಾಗೆಯೇ ಉಳಿದಿದೆ. ಕಟ್ಟಡ ಬಿದ್ದು ನಮ್ಮ ಮಕ್ಕಳ ಸಾವಾದಾಗ ಬಂದು ಪರಿಹಾರ ಕೊಡುವ ಬದಲಿಗೆ, ಮುನ್ನೆಚ್ಚರಿಕೆ ವಹಿಸಿ ಸರ್ಕಾರ ಶಾಲೆಗೆ ಹೊಸ ಕಟ್ಟಡ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಶಾಲೆಗೆ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕೃತ ಆದೇಶ ಬರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಮತ್ತು ಅಲ್ಲಿಯವರೆಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂಬುದು ಗ್ರಾಮಸ್ಥರ ಆಗ್ರಹವಾಗಿದ್ದು, ಪೋಷಕರು
ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ಮಾಹಿತಿ ತಿಳಿದು ಪ್ರತಿಭಟನಾ ಸ್ಥಳಕ್ಕೆ ಬಂದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಪ್ಪ ಅವರು ಮನವಿ ಪತ್ರ ಸ್ವೀಕರಿಸಿ, ಶೀಘ್ರವಾಗಿ ಕಟ್ಟಡದ ದುರಸ್ತಿ ಕೈಗೊಳ್ಳಲಾಗುವುದು ಮತ್ತು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಮೂರು ತಿಂಗಳೊಳಗಾಗಿ ಹೊಸ ಕಟ್ಟಡಕ್ಕೆ ಅನುದಾನ ಜಾರಿಗೊಳಿಸುವುದಾಗಿ ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿರುವ ಹಳಬರ ಬದಲು ಹೊಸಬರಿಗೆ ಸಚಿವ ಸ್ಥಾನ ನೀಡಿ;ಹೈಕಮಾಂಡ್‌ಗೆ ಶಾಸಕ ಬಸವರಾಜು ಶಿವಗಂಗಾ ಸಲಹೆ

ಹೋರಾಟದಲ್ಲಿ ಕಬ್ಬು ಬೆಳೆಗಾರರ ಸಂಘದ ತೇಜಸ್ವಿ ಪಟೇಲ್, ಎಐಡಿಎಸ್ಓನ ಜಿಲ್ಲಾಧ್ಯಕ್ಷರಾದ ಪೂಜಾ ನಂದಿಹಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಿಯಾಂಕ ಮಂಜುನಾಥ್, ಎ ಸ್ ಡಿ ಎಂ ಸಿ ಅಧ್ಯಕ್ಷರಾದ ಬಸಣ್ಣ, ಗ್ರಾ ಪಂ. ಸದಸ್ಯರಾದ ಚೇತನ್ ಕುಮಾರ್, ಶರತ್ ಜಿ ಎ, ಸಂದೀಪ್ ನಾಯಕ್, ಉಮಾಬಾಯಿ, ಪೋಷಕರಾದ ನಾಗರಾಜ್, ಹನುಮಂತ, ಲತಾ, ಮಮತ ಎಐಡಿಎಸ್ಓನ ಕಾರ್ಯಕರ್ತರಾದ ಗಂಗಾಧರ, ಶ್ರೀನಿವಾಸ, ಸುಮನ್ ಟಿ ಎಸ್, ಹಾಗೂ ಕಾರಿಗನೂರಿನ ಗ್ರಾಮಸ್ಥರು ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಪೋಷಕರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...