ದಾವಣಗೆರೆ | ಮುಸ್ಲಿಂ ರಾಜಕೀಯ ಹಕ್ಕಿನ ಬೇಡಿಕೆಗೆ ಶಿಸ್ತುಕ್ರಮ ದುರದೃಷ್ಟಕರ; ಅಲ್ಪಸಂಖ್ಯಾತರ ಜಾಗೃತಿ ವೇದಿಕೆ

Date:

“ದಾವಣಗೆರೆ ಉಪಚುನಾವಣೆ ಹಿನ್ನೆಲೆ ಆರಂಭವಾದ ಟಿಕೆಟ್ ಆಗ್ರಹವು, ರಾಜ್ಯದ ಮುಸ್ಲಿಂ ಸಮುದಾಯದ ರಾಜಕೀಯ ಹಕ್ಕಿನ ಬೇಡಿಕೆಯಾಗಿ ರೂಪಾಂತರಗೊಂಡು ಸಮುದಾಯದ ರಾಜಕೀಯ ಜಾಗೃತಿಗೆ ಕಾರಣವಾಯಿತು. ಈ ವಿಚಾರ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದ್ದು, ರಾಜ್ಯ ನಾಯಕರ ಗಮನ ಸೆಳೆದಿದೆ. ಇದನ್ನೇ ಗುರಿಯಾಗಿಸಿ ಇದೇ ವೇಳೆ, ದಾವಣಗೆರೆಯ ಸ್ಥಳೀಯ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಹಂತ ತಲುಪಿರುವುದು ದುರದೃಷ್ಟಕರ” ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯ ಮುಖಂಡ ಅಬ್ದುಲ್ ಘನಿ ತಾಹಿರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.‌

- Advertisement -
1004251670

“ದಾವಣಗೆರೆಯ ಹಿರಿಯ ಮುತ್ಸದ್ದಿಗಳೂ ರಾಜಕೀಯ ಮುಖಂಡರೂ ಆಗಿದ್ದ ಮಾನ್ಯ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಟಿಕೆಟ್ ಅಪೇಕ್ಷಿಸಿ ಚುನಾವಣಾ ಘೋಷಣೆಗೂ ಮೊದಲು ಅಲ್ಲಲ್ಲಿ ಜಾಗೃತಿ ಸಮಾರಂಭಗಳು ನಡೆದವು. ಸದರಿ ಸಭೆಗಳಲ್ಲಿ ಭಾಗವಹಿಸಿದ ಅಹಿಂದ ಸಮುದಾಯದ ಮುಖಂಡರು 2026 ರಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಗೆ ಮುಸ್ಲಿಂ, ಕುರುಬ, ಪಂಚಮಸಾಲಿ,ಅಥವಾ ಮರಾಠ ಸಮುದಾಯದ ಯಾವುದೇ ವ್ಯಕ್ತಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಆಗ್ರಹಿಸಲಾಯಿತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತದಾರರಿರುವ ಸಮುದಾಯದ ವ್ಯಕ್ತಿಗೆ ಟಿಕೆಟ್ ಕೇಳುವುದು ಸಾಮಾನ್ಯ ಸಂಗತಿ. ಮುಸ್ಲಿಂ ಮತದಾರರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಅಧಿಕಾರಕ್ಕೆ ತಂದಿರುವುದು ಎಲ್ಲರಿಗೂ ತಿಳಿದ ವಿಷಯ. ಆದರೆ ರಾಜಕೀಯ ಅಧಿಕಾರ ಮತ್ತು ಪ್ರಾತಿನಿಧ್ಯದ ವಿಷಯದಲ್ಲಿ ಮುಸ್ಲಿಮರನ್ನು ಕೇವಲ ಮತದಾರರನ್ನಾಗಿ ಪರಿಗಣಿಸಿರುವ ರಾಜಕೀಯ ವಿದ್ಯಮಾನಗಳು ಆ ಸಮುದಾಯವನ್ನು ಸರ್ವ ರೀತಿಯಲ್ಲೂ ನಿರ್ಲಕ್ಷಿಸುತ್ತಾ ಬಂದಿರುವುದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮೊದಲಬಾರಿಗೆ ಎಂಬಂತೆ ಮುಸ್ಲಿಂ ಸಮುದಾಯದಲ್ಲಿ ರಾಜಕೀಯ ಪ್ರಾತಿನಿಧ್ಯದ ಅರಿವು ಮೂಡಿ ಬಂದು ತಮ್ಮ ಸಮುದಾಯಕ್ಕೆ ಟಿಕೆಟ್ ಆಗ್ರಹಿಸುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೂಲಕ ಮತ್ತು ರಾಜಕೀಯ ಮುಖಂಡರ ಮೂಲಕ ಹಕ್ಕೊತ್ತಾಯ ಮಂಡಿಸುವಷ್ಟು ಪ್ರಬಲ ಹೋರಾಟ ಮುಂದುವರಿದರೂ ಅವರನ್ನು ಟಿಕೆಟ್ ಗಾಗಿ ಪರಿಗಣಿಸಲಿಲ್ಲ. ಆದಾಗ್ಯೂ ಉಳ್ಳವರ ರಾಜಕೀಯ ಪ್ರಾಬಲ್ಯದ ದೆಸೆಯಿಂದಾಗಿ ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ದಾವಣಗೆರೆಯ ಅಲ್ಪಸಂಖ್ಯಾತರ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸುವ ಅನಪೇಕ್ಷಿತ ಕ್ರಮಕ್ಕೆ ಮುಂದಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಪಕ್ಷದ ಶಿಸ್ತು ಉಲ್ಲಂಘನೆ ಸಂಬಂಧ ಯಾರನ್ನಾದರೂ ಉಚ್ಚಾಟಿಸುವ ಮುನ್ನ ಕನಿಷ್ಠ ಎರಡು ವಾರಗಳಷ್ಟು ಮುಂಚಿತವಾಗಿ ಕಾರಣಕೇಳಿ ನೋಟೀಸನ್ನು ನೀಡುವ ನಿಯಮವಿದೆ” ಎಂದು ತಿಳಿಸಿದರು.

“ಆದರೆ ದಾವಣಗೆರೆಯ ಅಲ್ಪಸಂಖ್ಯಾತರ ಮುಖಂಡರ ಉಚ್ಚಾಟನೆಯ ಸಂಬಂಧವಾಗಿ ಈ ನಿಯಮವನ್ನೇ ಅನುಸರಿಸಲಾಗಿಲ್ಲ. ಇದು ಪ್ರಬಲರಿಗೊಂದು ನೀತಿ ದುರ್ಬಲರಿಗೊಂದು ನೀತಿಯಂತೆ ಕಾಣುತ್ತದೆ. ಅಲ್ಪಸಂಖ್ಯಾತರ ಹಿತ ಕಾಯುವ ರಾಜಕೀಯ ನೈತಿಕತೆಯನ್ನು ಪ್ರದರ್ಶಿಸಬೇಕಾದ ಪಕ್ಷದ ಕೆಲಮುಖಂಡರ ಈ ಕ್ರಮವನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯು ಬಲವಾಗಿ ಖಂಡಿಸುತ್ತದೆ. ಅಲ್ಲದೆ ದಾವಣಗೆರೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ನೀತಿ ನಿಯಮಗಳನ್ನು ಅನುಸರಿಸದೇ ಅವರ ರಾಜಕೀಯ ಧಣಿಗಳ ಆಣತಿಯಂತೆ ನಡೆದುಕೊಳ್ಳುತ್ತಿರುವುದನ್ನು ರಾಜ್ಯ ಮತ್ತು ರಾಷ್ಟ್ರ ಮುಖಂಡರ ಗಮನಕ್ಕೆ ತರುವ ಪ್ರಯತ್ನವನ್ನು ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯು ಮಾಡುತ್ತದೆ” ಎಂದು ಅಭಿಪ್ರಾಯಪಟ್ಟರು.

“ಇದಲ್ಲದೆ ಮುಸ್ಲಿಮರ ವಿರುದ್ಧ ಮುಸ್ಲಿಮರನ್ನೇ ಎತ್ತಿ ಕಟ್ಟಿ ಸಮಾಜವನ್ನು ಒಡೆಯುವ ಪಟ್ಟಭದ್ರ ಹಿತಾಸಕ್ತಿಗಳು ರಾಜ್ಯ ಕಾಂಗ್ರೆಸ್ ಪಕ್ಷವನ್ನು ಅದರ ನೀತಿಗೆ ವಿರುದ್ಧವಾಗಿ ಮುನ್ನಡೆಸುತ್ತಿವೆ. ಉಳ್ಳವರ ಮನೆಯಲ್ಲಿ ವಿರೋಧ ಪಕ್ಷದ ಮುಖಂಡರು ಚುನಾವಣೆ ಸಮಯದಲ್ಲಿ ಗಂಟೆಗಟ್ಟಲೆ ಕುಳಿತು ಮಾತುಕತೆ ನಡೆಸಬಹುದಾದರೆ ಅವರ ಮೇಲೇಕೆ ಶಿಸ್ತು ಕ್ರಮ ಜರುಗಿಸಲಾಗುವುದಿಲ್ಲ?” ಎಂದು ಪ್ರಶ್ನಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

“ಅಲ್ಪಸಂಖ್ಯಾತರ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆಯುವ ಎಲ್ಲ ಹೋರಾಟಗಳಿಗೆ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಬೆಂಬಲ ಸೂಚಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. ಅನುದಾನ ನೀಡಿರುವುದು ಸಮುದಾಯದ ರಾಜಕೀಯ ಜಾಗೃತಿಯ ಪರಿಣಾಮವಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿನ ಸಮಾಧಾನ ಕ್ರಮವೂ ಆಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ. ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ರಾಜಕೀಯ ಪ್ರಾತಿನಿಧ್ಯಕ್ಕೆ ಗುಣಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...