ದಾವಣಗೆರೆ | ಎಸ್‌ಸಿಪಿಎಸ್‌ಟಿ ದುರ್ಬಳಕೆ ತಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ದಸಂಸ ಮನವಿ

Date:

ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿಡುವುದು, ಒಳ ಮೀಸಲಾತಿ ಪರಿಪೂರ್ಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಘಟಕದಿಂದ ಬುಧವಾರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ತಹಶೀಲ್ದಾರ್ ಸಂತೋಷ್ ಕುಮಾರ್ ಅವರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿ ಕದಸಂಸ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, “ಪರಿಶಿಷ್ಟರಿಗೆ ಮೀಸಲಿರಿಸಿದ ಶೇ. 24.1ರಷ್ಟು ಅನುದಾನ ದುರ್ಬಳಕೆ ತಡೆಯಲು ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಕಾಯ್ದೆಯ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ, 7 (ಸಿ) ರದ್ದುಪಡಿಸಿ 2026-27ನೇ ಬಜೆಟ್ ಅಧಿವೇಶನದಲ್ಲಿ ಆದೇಶ ಹೊರಡಿಸಬೇಕು. ಕದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಿಸಬೇಕು ಹಾಗೂ ಜೂನ್ 9ರ ಅವರ ಜನ್ಮದಿನವನ್ನು ರಜೆರಹಿತ ದಿನವನ್ನಾಗಿ ಆಚರಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಾಸಿಕ ಭೋಜನ ವೆಚ್ಚ ರೂ.3000ವರೆಗೆ ಹೆಚ್ಚಳ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ವಸತಿ ಕಾಲೇಜುಗಳಾಗಿ ಮೇಲ್ದರ್ಜೆ ಗೇರಿಸಬೇಕು. ದೇವದಾಸಿ, ವಿಧವೆಯರು, ವೃದ್ಧರು, ವಿಕಲ ಚೇತನರಿಗೆ ನೀಡುತ್ತಿರುವ ಮಾಸಿಕ ವೇತನ ರೂ.5000ವರೆಗೆ ಹೆಚ್ಚಿಸಬೇಕು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ ಅನ್ನು ರದ್ದುಪಡಿಸಿ, ಭಾರತದಿಂದ ವಿದೇಶಗಳಿಗೆ ದನದ ಮಾಂಸದ ರಫ್ತು ನಿಲ್ಲಿಸಬೇಕು” ಎಂದು ಹೇಳಿದರು.

“ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಪ್ರೊ.ಕೃಷ್ಣಪ್ಪ ಅವರ ಹೆಸರನ್ನು ಇಡಬೇಕು. ನಗರದ ಸೂಕ್ತ ಸ್ಥಳದಲ್ಲಿ ಪ್ರೊ.ಕೃಷ್ಣಪ್ಪ ಅವರ ಸ್ಮಾರಕವನ್ನು ನಿರ್ಮಿಸಬೇಕು. ಗುತ್ತೂರಿನ ಹೆಲಿಪ್ಯಾಡ್ ಜಾಗದಲ್ಲಿ ವಾಸವಿರುವ ಅಲೆಮಾರಿ ಸಮುದಾಯದವರಿಗೆ ಅಲ್ಲಿಯೇ ನಿವೇಶನಗಳನ್ನು ದೊರಕಿಸಿ, ಮನೆ ನಿರ್ಮಿಸಿ ಕೊಡಬೇಕು” ಎಂದರು.

“ಹರಿಹರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ನಲ್ಲಿ 2015ರ ಆಗಸ್ಟ್ 3 ಮತ್ತು 4 ರಂದು ಹುಳು ಭರಿತ ಆಹಾರ ವಿತರಣೆ ಮಾಡಿದ ಘಟನೆಗೆ ಸಂಬಂಧಿತ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಹೊಟ್ಟಿಗೇನಹಳ್ಳಿ ಗ್ರಾಮದ ರಸ್ತೆಗಳು ಅಕ್ರಮ ಮಣ್ಣು, ಮರಳು ಸಾಗಣೆಯಿಂದಾಗಿ ಸಂಪೂರ್ಣ ಹಾಳಾಗಿದೆ, ಆ ರಸ್ತೆಗಳನ್ನು ಹೊಸದಾಗಿ ನಿರ್ಮಿಸಬೇಕು ಹಾಗೂ ಅಕ್ರಮ ಮಣ್ಣು, ಮರಳು ಸಾಗಣೆಯನ್ನು ತಡೆಯಬೇಕು. ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಆರಂಭಿಸಬೇಕು ಎಂದು ಮನವಿ ನೀಡಲಾಗಿದೆ” ಎಂದು ತಿಳಿಸಿದರು

“ತಾಲೂಕಿನ ಕಡ್ಲೆಗೊಂದಿ ಮತ್ತು ಭಾನುವಳ್ಳಿ ಗ್ರಾಮದ ಸರ್ಕಾರಿ ಜಾಗದಲ್ಲಿ ವಸತಿ ಯೋಜನೆ ರೂಪಸಿಬೇಕು. ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರೂ.18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಆರಂಭಿಸಬೇಕು. ನಗರದ ಜನರ ಕುಡಿಯುವ ನೀರಿಗಾಗಿ ಪ್ರತ್ಯೇಕ ಕೆರೆ ನಿರ್ಮಿಸಬೇಕು. ನಗರದ ವಿವಿಧ ಪ್ರಕಾರದ ಮದ್ಯದ ಅಂಗಡಿಗಳನ್ನು ನಿಗದಿತ ಅವಧಿಯಲ್ಲಿ ಮಾತ್ರ ತೆರೆಯುವಂತೆ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆದ್ದಾರಿ ವಿವಾದದಲ್ಲಿ ಸರ್ಕಾರ ಮೌನ: ಬಲಿಯಾಗುತ್ತಿರುವುದು ವಾಹನ ಸವಾರರ ಜೀವನ

ಈ ಸಂದರ್ಭದಲ್ಲಿ ಕೊಕ್ಕನೂರು ಗ್ರಾಪಂ ಸದಸ್ಯ ಹನುಮಂತಪ್ಪ, ಚೌಡಪ್ಪ ಸಿ. ಭಾನುವಳ್ಳಿ, ಅಲೆಮಾರಿ ಸಮುದಾಯದ ಮುಖಂಡ ದುರುಗಪ್ಪ, ಮಂಜುನಾಥ್ ಎಂ.ಎಸ್. ಕೊಕ್ಕನೂರು, ಹೊಸಪಾಳ್ಯ ಯುವರಾಜ್, ರಾಮಪ್ಪ ಹಿಂಡಸಘಟ್ಟ, ಧರ್ಮರಾಜ್ ಹಳ್ಳಿಹಾಳ್, ತಿಮ್ಮಣ್ಣ ಕಡ್ಲೆಗೊಂದಿ, ಸುರೇಶ್ ಕೆಂಚನಹಳ್ಳಿ, ಆಕಾಶ ಎಂ.ಆರ್., ಪುನೀತ ಎಂ.ಎಲ್., ಮಾರುತಿ, ಈರಣ್ಣ, ಚಂದ್ರು, ವಿಶ್ವ, ಮರಿಯ, ಅಭಿ, ಅರುಣ್, ಧನುಷ್ ಡಿ., ಹನುಮಂತಪ್ಪ, ಪ್ರಕಾಶ, ನಿಂಗಪ್ಪ, ದುರುಗಪ್ಪ, ವಿನಾಯಕ, ಗಿರೀಶ್, ಮಧು ಹಾಗೂ ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...