ದಾವಣಗೆರೆ | ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

Date:

“ಕಾಂಗ್ರೆಸ್ ಸರ್ಕಾರ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿರುವ ಉದ್ಯೋಗ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಕರ್ನಾಟಕ ಸಂಘರ್ಷ ಸಮಿತಿ ದಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

- Advertisement -

ಈ ವೇಳೆ ಮಾತನಾಡಿದ ಮುಖಂಡರು “ಸುಪ್ರೀಂ ಕೋರ್ಟ್ ಆದೇಶ ನೀಡಿ 2 ವರ್ಷ ಕಳೆದರೂ ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಪಡೆದು ಸಚಿವ ಸಂಪುಟ ಅನುಮೋದಿಸಿ, ರಾಜ್ಯಪಾಲರ ಅಂಗೀಕಾರವಾದರೂ ನೇಮಕಾತಿ ಸುತೊಲೆಯಲ್ಲಿ 56432 ಸರ್ಕಾರಿ ಉದ್ಯೋಗಗಳಿಗೆ ಒಳ ಮೀಸಲಾತಿಯನ್ನು ಬದಿಗೊತ್ತಿ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿರುವುದು ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಮಾಡಿದ ದ್ರೋಹ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಮೊದಲನೇ ಸಚಿವ ಸಂಪುಟ ಸಭೆಯಲ್ಲಿ ಒಳಮಿಸಲಾತಿ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿತ್ತು. ಇದುವರೆಗೂ ಒಳ ಮೀಸಲಾತಿ ಜಾರಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಕಾನೂನು ಅಥವಾ ತಾಂತ್ರಿಕ ತೊಡಕು ಎಂದು ನೆಪ ಹೇಳುತ್ತಿದೆ. ಒಳಮೀಸಲಾತಿಯನ್ನು ವಿರೋಧಿಸುವರು ಸಂವಿಧಾನ ಮತ್ತು ಅಂಬೇಡ್ಕರ್ ವಿರೋಧಿಗಳು” ಎಂದು ಆಪಾದಿಸಿದರು.

“ಪರಿಶಿಷ್ಟ ಜಾತಿಗಳ ಶೇ.15ರ ಮೀಸಲಾತಿಯಲ್ಲಿ ಉದ್ಯೋಗ ನೇಮಕಾತಿಗೆ ಒಳಮೀಸಲಾತಿ ತರಲು ಯಾವುದೇ ಕಾನೂನು, ತಾಂತ್ರಿಕ ಅಥವಾ ಕೋರ್ಟ್ ಅಡಚಣೆ ಆಗಲಿ ಇಲ್ಲ. ಹಾಗಾಗಿ ಒಳ ಮೀಸಲಾತಿ ಇಲ್ಲದೆ ಉದ್ಯೋಗ ನೇಮಕಾತಿ ಮಾಡಬಾರದು ವಿಶ್ವವಿದ್ಯಾನಿಲಯಗಳನ್ನು ಒಂದು ಘಟಕವಾಗಿಸಿ ಉದ್ಯೋಗ ನೇಮಕಾತಿ ಮಾಡುವ ಪ್ರಯತ್ನ ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ ಶೇಕಡ ಒಂದರಷ್ಟು ಪ್ರತ್ಯೇಕ ಮೀಸಲಾತಿ ಹಾಗೂ ಪರಿಶಿಷ್ಟ ಜಾತಿಗೆ ಶೇ. 17, ಪರಿಶಿಷ್ಟ ವರ್ಗಕ್ಕೆ ಶೇ.7 ಮೀಸಲಾತಿಗೆ ಹೆಚ್ಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ (ಮೂರ್ತಿ ಬಣ) ಒತ್ತಾಯಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ: ಕಾಂಗ್ರೇಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಕ್ಕಿ ಮಂಜುನಾಥ್, ಪದಾಧಿಕಾರಿಗಳಾದ ತಿಮ್ಮೇಶ್, ಮಾಂತೇಶ್, ಕಬ್ಬೂರು ಸಂತೋಷ್, ಗದಿಗೇಶ್, ಹುಸೇನ್, ಪವನ್, ಜನಾರ್ದನ, ಸುನಿಲ್, ಅಪ್ಪಿ, ಅಜಯ, ಮಂಜು ಎಸ್, ಹಾಲೇಶ್ , ವಿಷ್ಣು, ಅಣ್ಣಪ್ಪ, ಮನು ಸೇರಿದಂತೆ ಇತರ ಕಾರ್ಯಕರ್ತರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...