ದಾವಣಗೆರೆ | ಭ್ರೂಣಲಿಂಗಪತ್ತೆ ಕಾನೂನು ಬಾಹಿರ, ಲಿಂಗ ತಾರತಮ್ಯಕ್ಕೆ ಕಾರಣ; ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್

Date:

ಪ್ರಸವ ಪೂರ್ವದಲ್ಲಿ ಭ್ರೂಣಲಿಂಗಪತ್ತೆ ಮಾಡುವುದು ಕಾನೂನು ಬಾಹಿರವಾಗಿದೆ. ಮತ್ತು ಸಮಾಜದಲ್ಲಿ ಗಂಡು, ಹೆಣ್ಣು ಎನ್ನುವ ಲಿಂಗ ತಾರತಮ್ಯಕ್ಕೆ ಕಾರಣವಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಸೂಚನೆ ನೀಡಿದರು.

- Advertisement -

ಬುಧವಾರ ದಾವಣಗೆರೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಿ.ಸಿ ಮತ್ತು ಪಿಎನ್‍ಡಿಟಿ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಭ್ರೂಣಲಿಂಗಪತ್ತೆ ಮಾಡುವುದು ಕಾನೂನು ಬಾಹಿರವಾಗಿದೆ. ಆದರೂ ಸಹ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಲಿಂಗಪತ್ತೆಯಂತಹ ಕೃತ್ಯಗಳು ನಡೆಯುತ್ತಿರುವ ವರದಿಯನ್ನು ಗಮನಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಲಿಂಗಪತ್ತೆ ಮಾಡಿ ಭ್ರೂಣಹತ್ಯೆಗೆ ಸಹಕಾರ ನೀಡುವಂತಹ ಕೆಲಸವನ್ನು ಯಾವುದೇ ವೈದ್ಯರು ಮಾಡಬಾರದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮುಂದಿನ ದಿನಗಳಲ್ಲಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ನಿಯಮಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದಲ್ಲಿ, ಅಂತಹ ಕೇಂದ್ರಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಜಿಲ್ಲಾ ಮಟ್ಟದ ಸಲಹಾ ಸಮಿತಿಯಿಂದ ಅನುಮೋದನೆ ಪಡೆದುಕೊಂಡು ಪ್ರಾರಂಭಿಸಬೇಕು. ಆದರೆ ಕೆಲವು ಸೆಂಟರ್ ಗಳಿಗೆ ಅನುಮೋದನೆ ನೀಡಿ ನಂತರ ಸಮಿತಿಯಿಂದ ಘಟನೋತ್ತರ ಅನುಮತಿ ಪಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಕಡ್ಡಾಯವಾಗಿ ರೇಡಿಯೋಲಾಜಿಸ್ಟ್ ವೈದ್ಯರು ಇರಲೇಬೇಕು ಮತ್ತು ಯಾವುದೇ ಕಾರಣಕ್ಕೂ ತಾಂತ್ರಿಕ ಸಹಾಯಕರು ಸ್ಕ್ಯಾನಿಂಗ್ ಮಾಡುವಂತಿಲ್ಲ, ಸ್ಕ್ಯಾನಿಂಗ್ ದರಗಳನ್ನು ಆಯಾ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕು” ಎಂದು ಸೂಚಿಸಿದರು.

ರಾಜ್ಯದಲ್ಲಿ ನವಜಾತ ಶಿಶುಗಳ ಜನನದ ಲಿಂಗಾನುಪಾತದಲ್ಲಿ ದಾವಣಗೆರೆ ಜಿಲ್ಲೆ 2 ನೇ ಸ್ಥಾನದಲ್ಲಿದೆ. 2024 ರ ಏಪ್ರಿಲ್ ನಿಂದ 2025 ರ ಮಾರ್ಚ್ ವರೆಗಿನ ಅಂಕಿಅಂಶಗಳನ್ವಯ 21938 ನವಜಾತ ಶಿಶುಗಳ ಜನನವಾಗಿದ್ದು ಇದರಲ್ಲಿ 10765 ಹೆಣ್ಣು ಮತ್ತು 11173 ಗಂಡು ಮಗುವಿನ ಜನನವಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ 7 ಮತ್ತು ಖಾಸಗಿ ಮತ್ತು ಇತರೆ ಸಂಸ್ಥೆಗಳಲ್ಲಿ 125 ಸೇರಿ ಒಟ್ಟು 132 ಸ್ಕ್ಯಾನಿಂಗ್ ಕೇಂದ್ರಗಳಿವೆ. ಇದರಲ್ಲಿ ಪ್ರಸ್ತುತ 113 ಕಾರ್ಯನಿರ್ವಹಿಸುತ್ತಿವೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೈಸೂರಿನಲ್ಲಿ ಕ್ರಾಂತಿಕಾರಿ ರಥಯಾತ್ರೆ ಹೋರಾಟಗಾರರ ಬಂಧನ. ದಲಿತ ಸಂಘಟನೆಗಳ ಒಕ್ಕೂಟ ಖಂಡನೆ.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಕ್ಕಳ ತಜ್ಞ ಹಾಗೂ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಎನ್.ಕೆ.ಕಾಳಪ್ಪನವರ್, ಜಿಲ್ಲಾ ಸಲಹಾ ಸಮಿತಿ ನೋಡಲ್ ಅಧಿಕಾರಿ ಡಾ. ರುದ್ರಸ್ವಾಮಿ ಎಂ.ಕೆ, ಹಿಮೋಪೋಲಿಯೋ ಸೊಸೈಟಿ ಡಾ. ಮೀರಾ ಹನಗವಾಡಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ಪ್ರವೀಣ ಎಸ್.ಎನ್, ಚಿಗಟೇರಿ ಆಸ್ಪತ್ರೆ ರೇಡಿಯೋಲಾಜಿಸ್ಟ್ ಡಾ. ಸುಮಿತ್ರ ಎಲ್ ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...