ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ.

Date:

‘ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭವಾಗಿದೆ.ಭತ್ತದ ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿಗೆ ಜಿಲ್ಲಾಡಳಿತ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪಿ.ಬಿ. ರಸ್ತೆಗೆ ಭತ್ತ ಸುರಿದು ರೈತರು ಪ್ರತಿಭಟನೆ ನಡೆಸಿದರು.‌

- Advertisement -

ಜಿಲ್ಲಾಡಳಿತವು ಕೂಡಲೇ ಭತ್ತ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ರೈತರು ಇಲ್ಲಿನ ಪಿ.ಬಿ.ರಸ್ತೆಯಲ್ಲಿ ವಾಹನ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ರಚಿಸಿದ ರೈತರು, ರಸ್ತೆ ಮಧ್ಯದಲ್ಲಿ ಭತ್ತ ಸುರಿದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

‘ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಲ್ ಭತ್ತದ ದರ ₹1,900 ರಿಂದ ₹1,950 ಇದ್ದು ದೂರು ಕುಸಿತವಾಗಿದೆ.‌ ಬೆಲೆ ಕುಸಿತದಿಂದ ರೈತರಿಗೆ ನಷ್ಟ ಆಗುತ್ತಿದೆ. ಭತ್ತ ಬೆಳೆಯುವ ರೈತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಡಳಿತ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿದರು.

‘ಕ್ವಿಂಟಲ್ ಭತ್ತಕ್ಕೆ ₹2,320 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ₹500 ಪ್ರೋತ್ಸಾಹಧನ ಮಂಜೂರು ಮಾಡಿ ₹2,820ರ ದರದಲ್ಲಿ ಖರೀದಿ ಮಾಡಬೇಕು. ಏಪ್ರಿಲ್ 15ರಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಸಿ, ಖರೀದಿ ಕೇಂದ್ರ ತೆರೆಯದಿರುವ ರೈತ ವಿರೋಧಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಸಿ ಉಮಾ ಪ್ರಶಾಂತ್.‌

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಮನವಿ ಸ್ವೀಕರಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಉಪವಿಭಾಗಾಧಿಕಾರಿ ಆಗಮಿಸಿ ರೈತರ ಮನವಿ ಸ್ವೀಕರಿಸಿದರು. ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಕಾರಣ ಸವಾರರು ಬೇರೆ ಮಾರ್ಗಗಳಲ್ಲಿ ಸಂಚರಿಸಿದರು.

ರೈತ ಮುಖಂಡರಾದ ತೇಜಸ್ವಿ ಪಟೇಲ್, ಬಿ.ಎಂ.ಸತೀಶ್, ಬೆಳವನೂರು ನಾಗೇಶ್ವರರಾವ್, ಧನಂಜಯ ಕಡ್ಲೇಬಾಳು, ಲೋಕಿಕೆರೆ ನಾಗರಾಜ್ ಸೇರಿದಂತೆ ಹಲವಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...