ದಾವಣಗೆರೆ | ಫೆ. 12ರ ಅಖಿಲ ಭಾರತ ಮುಷ್ಕರ; ಸಂಯುಕ್ತ ಹೋರಾಟ ಕರ್ನಾಟಕ ಬೈಕ್ ರ್ಯಾಲಿ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ಕಾರ್ಮಿಕ, ರೈತರ ವಿರುದ್ಧ ಹಾಗೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನರ ಸ್ವಾತಂತ್ರ್ಯ ಮತ್ತು ದುಡಿಯುವ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳು, ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಇಂದು ದಾವಣಗೆರೆಯ ಜಯದೇವ ವೃತ್ತದಿಂದ ಬೈಕ್ ರ್ಯಾಲಿ ನಡೆಸಿದರು.

- Advertisement -

ದಾವಣಗೆರೆಯಲ್ಲಿ ಜಯದೇವ ವೃತ್ತದಿಂದ ಬೈಕ್ ರ್ಯಾಲಿ ಪ್ರಾರಂಭಿಸಿದ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಜಯದೇವ ವೃತದಿಂದ ಪ್ರಾರಂಭಿಸಿ ಅಂಬೇಡ್ಕರ್ ವೃತ್ತ, ಹದಡಿ ರಸ್ತೆ ಮೂಲಕ ಎಚ್ ಕೆ ಆರ್ ವೃತ್ತ, ಭಗತ್ ಸಿಂಗ್ ನಗರ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಕೃಷಿ ಮಾರುಕಟ್ಟೆಯ ಪ್ರಾಂಗಣಕ್ಕೆ ತೆರಳಿ, ಮಂಡಿಪೇಟೆ ಮೂಲಕ ಹೊಂಡದ ಸರ್ಕಲ್, ನಗರಸಭೆ ಮುಂಬಾಗದ ಮೂಲಕ ಜಯದೇವ ವೃತ್ತದಲ್ಲಿ ಸಮಾರೋಪಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
WhatsApp Image 2026 02 10 at 6.46.31 PM

ಈ ವೇಳೆ ಮಾತನಾಡಿದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಸೋಮಶೇಖರ್ ಬಳ್ಳಾರಿ “ಈ ದೇಶದಲ್ಲಿ ಅದಾನಿ ಅಂಬಾನಿಗಳಂತಹ ಬಂಡವಾಳಶಾಹಿಗಳ ಹಿತಾಸಕ್ತಿಗೋಸ್ಕರ, ಅವರ ಸಂಪತ್ತನ್ನು ಹೆಚ್ಚಿಸಲು ಕಾರ್ಮಿಕರ, ರೈತರ ಹಾಗೂ ಜನಸಾಮಾನ್ಯರ ವಿರುದ್ಧವಾಗಿ ಜನ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಮತ್ತು ಬಂಡವಾಳಶಾಹಿಗಳ ಅನುಕೂಲತೆಯ ದೃಷ್ಟಿಯಿಂದ ಕಾರ್ಮಿಕ ಕಾನೂನುಗಳನ್ನು ಸರಳೀಕರಣಗೊಳಿಸಿ ಲೇಬರ್ ಕೋಡ್ ಗಳನ್ನು ಜಾರಿಗೆ ತಂದು ಕಾರ್ಮಿಕರ ಸ್ವಾತಂತ್ರ್ಯ , ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ಜನವಿರೋಧಿ ನೀತಿ, ಕಾರ್ಮಿಕ ವಿರೋಧಿ ನೀತಿಗಳ ಮೂಲಕ ದುಡಿಯುವ ಅವಧಿಯ ಹೆಚ್ಚು ಮಾಡಿ, ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ, ಸಂಘಟನೆಯ ಹಕ್ಕು ಕಿತ್ತುಕೊಳ್ಳಲಾಗುತ್ತಿದೆ, ಕಾಯಂ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು.

“ಇದರೊಂದಿಗೆ ರೈತ ವಿರೋಧಿ ನೀತಿಗಳನ್ನು ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಿಗೆ ಸೇರಿ ಬಂಡವಾಳ ಶಾಹಿಗಳ ಪರ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇದರ ವಿರುದ್ಧ 10 ಕಾರ್ಮಿಕ ಸಂಘಟನೆಗಳು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಒಟ್ಟಿಗೆ ಸೇರಿ ಕಾರ್ಮಿಕ, ರೈತ ವಿರೋಧಿ, ಜನ ವಿರೋಧಿ ನೀತಿಗಳನ್ನು ವಿರೋಧಿಸಿ ರದ್ದು ಮಾಡಲು ಒತ್ತಾಯಿಸಿ 2026, ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟರ ಎಸ್‌ಸಿಪಿಎಸ್‌ಟಿ ಅನುದಾನ ದುರ್ಬಳಕೆ ನಿಲ್ಲಿಸಿ: ದಸಂಸ ಮುಖಂಡ ಮಂಜುನಾಥ ಕುಂದುವಾಡ

ಬೈಕ್ ರಾಲಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರಾದ ಉಮೇಶ್ ಆವರ್ಗೆರೆ, ರಾಘವೇಂದ್ರ ನಾಯರಿ, ಮಂಜುನಾಥ್ ಕೈದಾಳ್, ಮಧು ತೊಗಲೇರಿ, ಐರಣಿ ಚಂದ್ರು, ಲಕ್ಷ್ಮಣ್, ರಮೇಶ್ ದಾಸರ್, ಶಿವಕುಮಾರ್, ರೈತ ಸಂಘದ ಹೊನ್ನೂರು ಮುನಿಯಪ್ಪ, ಬುಳ್ಳಾಪುರ ಹನುಮಂತಪ್ಪ, ಜನಶಕ್ತಿಯ ಸತೀಶ್ ಅರವಿಂದ್, ಪವಿತ್ರ ಅರವಿಂದ್, ಆದಿಲ್ ಖಾನ್, ರಾಮಾಂಜನೇಯ, ಅಶ್ವಖ್ ಸೇರಿದಂತೆ ಹಲವರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...