ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಶಾರ್ಟ್‌ ಸರ್ಕಿಟ್‌: ವೈದ್ಯಕೀಯ ಉಪಕರಣಗಳು ಕರಕಲು

Date:

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಂದಾಜು 75 ಲಕ್ಷ ರೂ ಮೌಲ್ಯದ ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿದೆ.

ಆಸ್ಪತ್ರೆಯ 2ನೇ ಮಹಡಿಯಲ್ಲಿರುವ ಕಣ್ಣು, ಕಿವಿ, ಮೂಗು ಹಾಗೂ ಕೀಲಿನ ಶಸ್ತ್ರಚಿಕಿತ್ಸಾ ವಿಭಾಗ ಕೊಠಡಿಯಲ್ಲಿ ಈ ಅವಘಡ ಸಂಭವಿಸಿದೆ.

ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದ್ದ ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಯ 5 ಜನ ಸಿಬ್ಬಂದಿ ಮತ್ತು ವೈದ್ಯೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅರವಳಿಕಾ ಉಪಕರಣಗಳಲ್ಲಿ ಶಾರ್ಟ್‌ ಸರ್ಕಿಟ್‌ ಉಂಟಾಗಿದ್ದು, ಕೂಡಲೇ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ಕೈ ಮೀರುವುದನ್ನು ಊಹಿಸಿದ ಅವರು ಕೊಠಿಯಿಂದ ಆಚೆಗೆ ಓಡಿ ಜೀವ ರಕ್ಷಿಸಿಕೊಂಡಿದ್ದು, ವೈದ್ಯಕೀಯ ಸಿಬ್ಬಂದಿ ರೋಗಿಗಳನ್ನು ಕಟ್ಟಡದಿಂದ ಹೊರಕ್ಕೆ ಕರೆ ತಂದಿದ್ದಾರೆ.

ವೈದ್ಯಕೀಯ ಉಪಕರಣಗಳು, ಅರವಳಿಕೆ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸ್ಥಳಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿ ನಂದಿಸಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...