ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

Date:

ದಾವಣಗೆರೆ ಸರ್ಕೀಟ್ ಹೌಸ್ ಪಕ್ಕದ ಜಾಗದಲ್ಲಿ ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿದ್ದ ಎಲ್ಲರ ಮನದಲ್ಲಿ ಏನೋ ಒಂದು ಸಾರ್ಥಕತೆ ಸಾಧಿಸಿದ ಭಾವ ಮನಸ್ಸಿನಲ್ಲಿ ತುಂಬಿತ್ತು. ಇದಕ್ಕೆ ಕಾರಣವಾಗಿದ್ದು ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬೇಡ್ಕರ್ ಭವನದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆಯ ಕಾರ್ಯಕ್ರಮ.

- Advertisement -

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಜಾಗದ ನಿಗದಿ ವಿವಾದಕ್ಕೆ ಸಂಬಂಧಿಸಿದಂತೆ ಹಲವುವರ್ಷಗಳಿಂದ ದಲಿತ ಸಂಘಟನೆಗಳು ಹೋರಾಟಗಾರರು ಮತ್ತು ಸ್ಥಳೀಯ ಜಿಲ್ಲಾಡಳಿತದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಯಶಸ್ವಿಯಾಗಿ ಸುಖಾಂತ್ಯ ಕಂಡಿದೆ. ದಾವಣಗೆರೆ ಸರ್ಕಿಟ್ ಹೌಸ್ ಬಳಿಯ ಜಾಗನಿಗಧಿ ಮಾಡಿ ಅಂಬೇಡ್ಕರ್ ಭವನಕ್ಕೆ ಈಗಾಗಲೇ ಒದಗಿಸಲಾಗಿದ್ದ ಅನುದಾನ ಸೇರಿದಂತೆ ಮತ್ತಷ್ಟು ಅನುದಾನವನ್ನು ಒದಗಿಸಿ ಶಂಕುಸ್ಥಾಪನೆ ನೆರವೇರಿಸಿದ್ದು ದಲಿತ ಸಂಘಟನೆಗಳಲ್ಲಿ ಉತ್ಸಾಹದ ಮತ್ತು ಸಂತೋಷದ ಅಲೆ ಎಬ್ಬಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಾ.ಅಂಬೇಡ್ಕರ್ ರವರ 134ನೇ ಜಯಂತಿಯ ದಿನವೇ ಸುಮಾರು ಇಪ್ಪತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಭೂಮಿ ಪೂಜೆ, ಶಂಕುಸ್ಥಾಪನೆಯನ್ನು ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ನೆರವೇರಿಸಿದರು.

1001836091

ಕಾರ್ಯಕ್ರಮದಲ್ಲಿ ಮಾತನಾಡಿದ ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ್, “ಬಹಳ ದಿನಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಭೂಮಿ ಪೂಜೆ ಇಂದು ನೆಡೆದಿದೆ.‌ 2000 ಇಸವಿಯಲ್ಲೇ ಪ್ರಾರಂಭವಾಗಬೇಕಿತ್ತು. ದಲಿತ ಸಂಘಟನೆಗಳ ಮುಖಂಡರ ಮುಖಂಡ ಒಮ್ಮತವಿಲ್ಲದೆ ಮುಂದಕ್ಕೆ ಬಂದಿತ್ತು. ಡಾ.ಅಂಬೇಡ್ಕರ್ ಅವರ ಆಶಯದಂತೆ ದಲಿತ, ಹಿಂದುಳಿದ ವರ್ಗಗಳ ಮಕ್ಕಳಿಗೆ ಹಾಸ್ಟೆಲ್, ವಿಧ್ಯಾಭ್ಯಾಸ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ.‌ ಪೌರಕಾರ್ಮಿಕರಿಗೆ ಖಾಯಂ ಮಾಡುವ ಕೆಲಸ ನೆಡೆಯುತ್ತಿದೆ. ಈ ಜಾಗ ಡಿಸಿಸಿ ಬ್ಯಾಂಕ್ ನವರಿಗೆ ಕಟ್ಟಡಕ್ಕೆ ನೀಡಲಾಗಿತ್ತು. ಆದರೆ ಅವರಿಗೆ ಬೇರೆ ಜಾಗ ಕೊಟ್ಟು ಅಂಬೇಡ್ಕರ್ ಭವನಕ್ಕೆ ಜಾಗ ಮರು ಮಂಜೂರು ಮಾಡಲಾಗಿದೆ.‌ ಒಳ್ಳೆಯ ಗುತ್ತಿಗೆದಾರರಿಗೆ ಈ ಕೆಲಸ ವಹಿಸಲಾಗುವುದು. ಹಣದ ಕೊರತೆ ಇಲ್ಲ. ಉತ್ತಮ ಸುಸಜ್ಜಿತ ಭವನ ನಿರ್ಮಾಣಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ಬದ್ದವಾಗಿದೆ. ಎಚ್. ಆಂಜನೇಯ ಸಚಿವರಾಗಿದ್ದಾಗ ಜಿಲ್ಲೆಯ ಬಹುತೇಕ ಕಡೆ ಸಮುದಾಯ ಭವನ ನಿರ್ಮಾಣಕ್ಕೆ ಉತ್ತಮ ಅನುದಾನ ಬಿಡುಗಡೆ ಮಾಡಿಸಿದ್ದೇವೆ. ಎಲ್ಲರೂ ಕೈಜೋಡಿಸಿ ಬೆಂಗಳೂರಿನಲ್ಲಿರುವಂತಹ ಉತ್ತಮ, ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸೋಣ” ಎಂದು ತಿಳಿಸಿದರು.

1001836095
ಅಂಬೇಡ್ಕರ್ ಭವನದ ಶಂಕುಸ್ಥಾಪನೆ

ಶಾಸಕ ಬಸವಂತಪ್ಪ ಮಾತನಾಡಿ,”ಬಹಳ ದಿನಗಳ ನಂತರ ಅಂಬೇಡ್ಕರ್ ಭವನ ನಿರ್ಮಾಣ ಸಂತೋಷದ ವಿಷಯ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣಕ್ಕೆ ಜಾಗ ದೊರೆತಿದೆ. ಇದಕ್ಕೆ ಕಾರಣರಾದ ಸಚಿವರು, ಸಂಘಟನೆಯ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆಗಳು. ಉತ್ತಮವಾದ ಅಂಬೇಡ್ಕರ್ ಭವನ ನಿರ್ಮಾಣ ಎಲ್ಲರ ಕನಸಾಗಿತ್ತು. ಬೆಂಗಳೂರು, ವಸಂತನಗರದ ರೀತಿ ಉತ್ತಮ ಭವನ ನಿರ್ಮಾಣವಾಗಬೇಕು. ಮುಖಂಡರಿಗೆ ಭವನ ನಿರ್ಮಾಣದ ಬಗ್ಗೆ ದೂರದೃಷ್ಟಿ ಬೇಕು. ಇದು ಸಮಾಜದ ಎಲ್ಲ ಸಮುದಾಯಗಳಿಗೆ ಉಪಯೋಗವಾಗಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಮಹಾ ನಗರ ಪಾಲಿಕೆ ಆಯುಕ್ತ ರೇಣುಕಾ, ಮುಖಂಡರಾದ ಡಿ ಬಸವರಾಜ್, ರವಿ ನಾರಾಯಣ್, ಮಲ್ಲೇಶ್, ಕುಂದುವಾಡ ಮಂಜುನಾಥ್, ಬಸವರಾಜು, ನೀಲಗಿರಿಯಪ್ಪ, ಮಲ್ಲಿಕಾರ್ಜುನ್, ಹನುಮಂತಪ್ಪ, ಆವರಗೆರೆ ಉಮೇಶ್, ದುಗ್ಗಪ್ಪ, ಹಾಲೇಶ್, ಮಲ್ಲಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಹಾಜರಿದ್ದರು. ಹೆಗ್ಗರೆ ರಂಗಪ್ಪ, ಐರಣಿ ಚಂದ್ರು ಕ್ರಾಂತಿಗೀತೆ ಹಾಡಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...