ದಾವಣಗೆರೆ | ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿ
ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿವಿಧ ತಾಲೂಕುಗಳಲ್ಲಿನ ಕಾಮಗಾರಿಯ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ನವಂಬರ್ 15 ರಂದು ಆಯೋಜಿಸಲಾಗಿದೆ.

- Advertisement -
1003085365

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ “ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿದು ಜೀವನ ಸಾಗಿಸುತ್ತಿರುವ ಕೂಲಿಕಾರರ ಆರೋಗ್ಯ ನಮ್ಮ ಪ್ರಮುಖ ಆದ್ಯತೆ. ಶ್ರಮದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಈ ಶ್ರಮಜೀವಿಗಳ ದೈಹಿಕ ಕ್ಷೇಮತೆ ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಈ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯ ಪ್ರತೀಕವಾಗಿದೆ. ಈ ಶಿಬಿರಗಳ ಮೂಲಕ ಪ್ರತಿ ಕೆಲಸಗಾರರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಬೇಕು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಅಗತ್ಯ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಪಂಚಾಯತ್ ನೌಕರರು ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...
1003085363

ಶಿಬಿರಗಳು ಚನ್ನಗಿರಿ ತಾಲ್ಲೂಕು – ದಾಗಿನಕಟ್ಟೆ ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು – ಕಾಡಜ್ಜಿ ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು – ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಹೊನ್ನಾಳಿ ತಾಲ್ಲೂಕು – ತಿಮ್ಲಾಪುರ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು – ತೋರಣಗಟ್ಟೆ ಗ್ರಾಮ ಪಂಚಾಯಿತಿ, ನ್ಯಾಮತಿ ತಾಲ್ಲೂಕು – ಕುಂಕುವಾ ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿವೆ.

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ರಕ್ತದ ಒತ್ತಡ, ರಕ್ತದಲ್ಲಿನ ಸಕ್ಕರೆ, ಕ್ಷಯರೋಗ, ಪರೀಕ್ಷೆ, ಕುಷ್ಟರೋಗ ಪರೀಕ್ಷೆ, ಜ್ವರದ ಪ್ರಕರಣಗಳಲ್ಲಿ ರಕ್ತದ ಮಾದರಿ ಸಂಗ್ರಹ ಹಾಗೂ ಅಗತ್ಯವಿದ್ದರೆ ಇತರೆ ತಪಾಸಣೆಗಳನ್ನೂ ನಡೆಸಲಾಗುತ್ತದೆ. ಈ ಶಿಬಿರಗಳ ಮೂಲಕ ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯನ್ನು ಬಲಪಡಿಸುವ ಜೊತೆಗೆ, ಸಮಯೋಚಿತ ವೈದ್ಯಕೀಯ ನೆರವು ಮತ್ತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...