ದಾವಣಗೆರೆ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಊಟ ತಯಾರಕರ ಫೆಡರೇಶನ್ ಬೆಂಗಳೂರು ಚಲೋ

Date:

“2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ” ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ ಆವರಗೆರೆ ಚಂದ್ರು ದಾವಣಗೆರೆಯಲ್ಲಿ ತಿಳಿಸಿದ್ದಾರೆ.

- Advertisement -
1003764503
Oplus_131072

ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಫೆಡರೇಶನ್ ರಾಜ್ಯ ಸಮಿತಿ ನೇತೃತ್ವದಲ್ಲಿ ಈ ಬೆಂಗಳೂರು ಚಲೋ ಧರಣಿ ಹಮ್ಮಿಕೊಳ್ಳಲಾಗಿದೆ. ಬಿಸಿ ಊಟ ತಯಾರಕರನ್ನು ಸ್ಕೀಂ ವರ್ಕರ್ಸ್ ಎನ್ನುವುದನ್ನು ಬದಲಾಯಿಸಿ ಅವರನ್ನು ಕಾರ್ಮಿಕರೆಂದು ಘೋಷಿಸಿ ಅವರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು, ನಿವೃತ್ತ ಬಿಸಿಊಟ ತಯಾರಕರಿಗೆ 2 ಲಕ್ಷ ರೂಪಾಯಿ ಇಡುಗಂಟು ಹಣ ಜಾರಿಗೊಳಿಸಬೇಕು, ಮೊಟ್ಟೆ ಸುಲಿಯುವ ಭತ್ಯೆಯನ್ನು ಪ್ರತಿ ಮೊಟ್ಟೆಗೆ 1 ರೂಪಾಯಿಗೆ ಏರಿಸಬೇಕು, ಬಿಸಿಊಟ ತಯಾರಕರಿಗೆ ಅಪಘಾತ ಪರಿಹಾರವಾಗಿ 10 ಲಕ್ಷ ರೂಪಾಯಿ ಜಾರಿಗೊಳಿಸಬೇಕು, ಕೆಪಿಎಸ್ ಶಾಲೆ ತೆರೆಯುವುದನ್ನು ಕೈ ಬಿಡಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು 2026-27 ನೇ ಸಾಲಿನ ಬಜೆಟ್ಟಿನಲ್ಲಿ ಈಡೇರಿಸಬೇಕೆಂದು ರಾಜ್ಯ
ಸರ್ಕಾರಕ್ಕೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೊಸ ಕಾನೂನು ರದ್ದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ

“ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಿಂದ ಫೆಡರೇಷನ್ನಿನ ಬಿಸಿಊಟ ತಯಾರಕರು ಇದೇ ಭಾನುವಾರ ಮಧ್ಯಾಹ್ನ ಅಥವಾ ಸಂಜೆ ಹೊರಟು ತಮಗೆ ಹತ್ತಿರ ಇರುವ ಬಸ್ ಸ್ಟ್ಯಾಂಡ್ ಗಳಿಂದ ಬಸ್ ಮೂಲಕ ಬೆಂಗಳೂರಿಗೆ ಆಗಮಿಸಿ ನೇರವಾಗಿ ಧರಣಿ ನಡೆಯುವ ಸ್ಥಳ ಫ್ರೀಡಂ ಪಾರ್ಕ್ ಗೆ ಆಗಮಿಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ ಜಿ ಅಕ್ಕಮ್ಮ, ರಾಜ್ಯ ಉಪ ಪ್ರಧಾನ ಕಾರ್ಯದರ್ಶಿ ಪುಷ್ಪಾ, ರಾಜ್ಯ ಖಜಾಂಚಿ ಬೆಳಲಗೆರೆ ರುದ್ರಮ್ಮ ಹಾಗೂ ಇತರ ರಾಜ್ಯ ಪದಾಧಿಕಾರಿಗಳು ಕರೆ ನೀಡಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...