ದಾವಣಗೆರೆ | ಬ್ಯಾಂಕಿಂಗ್ ವ್ಯವಸ್ಥೆ ಸುಧಾರಿಸಿ: ಯುಎಫ್‌ಬಿಯು-ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಆಗ್ರಹ.

Date:

Advertisements

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲು ಯುಎಫ್‌ಬಿಯು – ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು ಕರೆ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಛೇರಿ ಹಾಗೂ ದಾವಣಗೆರೆ ಪಿ.ಬಿ.ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಛೇರಿಯ ಮುಂಭಾಗ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು.

ಕೆನರಾ ಬ್ಯಾಂಕ್ ಬಳಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಜಿಲ್ಲಾ ಸಂಚಾಲಕ ಹಾಗೂ ಕೆನರಾ ಬ್ಯಾಂಕ್ ನೌಕರರ ಯೂನಿಯನ್‌ನ ರಾಷ್ಟ್ರೀಯ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ,”ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

1001670876
ದಾವಣಗೆರೆ ಪಿಬಿ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರ ಮುಷ್ಕರ

ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಾದೇಶಿಕ ಕಾರ್ಯದರ್ಶಿ ಪ್ರದೀಪ್ ಪಾಟೀಲ್ ಮಾತನಾಡಿ, “ಬ್ಯಾಂಕುಗಳಲ್ಲಿ ಅಗತ್ಯ ಪ್ರಮಾಣದ ನೌಕರರ ನೇಮಕಾತಿ ಮಾಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಬೇಕು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬರಬೇಕು ಎನ್ನುವುದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಈಗಾಗಲೇ ಒಪ್ಪಂದ ಆಗಿದ್ದರೂ ಸಹ ಕೇಂದ್ರ ಸರಕಾರ ಈ ಕುರಿತು ಮೌನ ತಾಳಿದೆ” ಎಂದು ಆರೋಪಿಸಿದರು.

Advertisements

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ಮಾತನಾಡಿ “ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಮಾರ್ಚ್ 24 ಮತ್ತು 25 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಯಲಿದೆ” ಎಂದು ಎಚ್ಚರಿಸಿದರು.

ಪಿಬಿ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಬಾಗ ನೆಡೆಸಿದ ಪ್ರತಿಭಟನೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಾದೇಶಿಕ ಕಾರ್ಯದರ್ಶಿ ಸುನಿಲ್ ಎಸ್ ಮ್ಯಾಗೇರಿ ಮಾತನಾಡಿ,”ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡದಿರುವುದರಿಂದ ಒಂದೆಡೆ ಗ್ರಾಹಕರಿಗೆ ಸಮರ್ಪಕ ಸೇವೆ ನೀಡಲು ಸಾಧ್ಯವಾಗದೇ ಮತ್ತೊಂದೆಡೆ ಉದ್ಯೋಗಿಗಳು ತೀವ್ರ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಹಾಗಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರಕಾರವು ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬರಬೇಕು” ಎಂದು ಒತ್ತಾಯಿಸಿದರು.

1001670878
ಕೆನರಾ ಬ್ಯಾಂಕ್ ಮುಂಬಾಗ ಬ್ಯಾಂಕ್ ನೌಕರರ ಮುಷ್ಕರ

ಎನ್‌ಸಿಬಿಇ ಸಂಘಟನೆಯ ಮುಖಂಡ ಎಂ.ಸಿ.ವಾಗೀಶ್ ಮಾತನಾಡಿ, “ಬ್ಯಾಂಕಿಂಗ್ ಕಾಯಿದೆಗೆ ಸುಧಾರಣೆ ಹೆಸರಿನಲ್ಲಿ ತಿದ್ದುಪಡಿ ತರುವ ಮೂಲಕ ಬ್ಯಾಂಕ್ ಉದ್ಯೋಗಿಗಳ ಉದ್ಯೋಗ ಭದ್ರತೆಯ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ನಿಲ್ಲಬೇಕು ಹಾಗೂ ಸರಕಾರವು ಬ್ಯಾಂಕ್ ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೌಕರರು ಮತ್ತು ಅಧಿಕಾರಿಗಳು ಮಾರ್ಚ್‌ 24 ಮತ್ತು 25 ರಂದು ನಡೆಯುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಾಮಾಣಿಕ ಅಧಿಕಾರಿಗಳಿಂದ ಡಿಜಿಟಲ್ ಅಳತೆ, ಸರ್ಕಾರಿ ಒತ್ತುವರಿ ತೆರವುಗೊಳಿಸಿ; ಕಬ್ಬೂರು ಗ್ರಾಮಸ್ಥರ ಆಗ್ರಹ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಬಾಗದ ಪ್ರತಿಭಟನೆಯಲ್ಲಿ ಎಂ.ಪಿ.ಕಿರಣ್‌ಕುಮಾರ್, ಸಿದ್ಧಾರ್ಥ್, ಎಂ.ಡಿ.ವಿದ್ಯಾಸಾಗರ್, ಎಸ್.ಪ್ರಶಾಂತ್, ಅಣ್ಣಪ್ಪ ನಂದಾ, ದುರ್ಗಪ್ಪ, ಶಶಿಧರ ಹೆಗಡೆ, ಮೋಹನ್ ಕುಮಾರ್ ದೊಡ್ಡಮನಿ, ಶ್ರೀನಿವಾಸ್, ಮಧುಸ್ವಿನಿ ದೇಸಾಯಿ, ದುಶ್ಯಂತ್‌ಕುಮಾರ್ ಆರ್ ಮತ್ತಿತರರು ಹಾಗೂ ಕೆನರಾ ಬ್ಯಾಂಕ್ ಮುಂಬಾಗ ನೆಡೆಸಿದ ಪ್ರತಿಭಟನೆಯಲ್ಲಿ ಹೆಚ್.ಸುಗುರಪ್ಪ, ಅನುರಾಧಾ ಸಂಪನ್ನ ಮುತಾಲಿಕ್, ಪರಶುರಾಮ, ಕೆ.ಗಂಗಾಧರ್, ವಿನೋದ್ ವರ್ಣೇಕರ್, ಸಿದ್ದಲಿಂಗೇಶ್ ಕೋರಿ, ಎಸ್.ಪ್ರಶಾಂತ್, ಡಿ.ಹರ್ಷದ್, ಎಲ್.ಗೋಪಾಲಕೃಷ್ಣ, ವಿ.ಆರ್.ಹರೀಶ್, ಅನಿಲ್ ಟಿ.ಎಸ್. ಗೋಪಾಲಕೃಷ್ಣ, ಬಿ.ಎ.ಸುರೇಶ್, ರಶ್ಮಿ ನಾಗರಾಜ್, ಕೆ.ಜಯಲಕ್ಷ್ಮಿ, ವಿಶ್ವಚೇತನ್, ಆಶಾ ವಿದ್ಯಾಸಾಗರ್, ಸುಷ್ಮ ಜೋಷಿ, ರೋಹಿಣಿ ಮಂಡ್ರೆ, ಎಲ್.ಲತಾ, ನಾಗರತ್ನಮ್ಮ, ರೇಣುಕಮ್ಮ ಮತ್ತಿತರರು ಪಾಲ್ಗೊಂಡಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X