ದಾವಣಗೆರೆ | ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ

Date:

ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು.

- Advertisement -

ದಸಂಸ ಸಭೆಯಲ್ಲಿ ಮಾತನಾಡಿದ ಅವರು, “ಚಿಕ್ಕಮೆಗಳಗೆರೆ ಗ್ರಾಮದಲ್ಲಿ ದಸಂಸ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುತ್ತಿದೆ. ಇದಕ್ಕೆ ವಿಜಯನಗರ ಜಿಲ್ಲಾ ಸಂಚಾಲಕರಾದ ದುರ್ಗೇಶ್ ಅವರ ಅಧ್ಯಕ್ಷತೆಯಿದೆ. ಶಿವಮೊಗ್ಗ ಜಿಲ್ಲಾ ಸಂಚಾಲಕ ಏಳುಕೋಟಿ ಅವರು ಸಹಕಾರ ನೀಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ದಸಂಸ ಉಸ್ತುವಾರಿ ವಹಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಷ್ಟ್ರವೇ ಹೆಮ್ಮೆ ಪಡುವಂತ ಸಂವಿಧಾನ ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ಸಹಕಾರ ಕೋರಿ ಹಾಗೂ ವಸತಿ ರಹಿತರಿಗೆ ನಿವೇಶನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸುತ್ತೇವೆ ಎಂದರು.

ವಸತಿ ರಹಿತರ ಸಮಸ್ಯೆ ಸೇರಿ ಇನ್ನಿತರ ವಿಷಯಗಳ ಬಗ್ಗೆ,  ಎಲ್ಲರೂ ಒಗ್ಗಟ್ಟಿನಿಂದ ಸಂಘಟನೆ ಮಾಡುವುದು ಹಾಗೂ ಗ್ರಾಮ ಶಾಖೆಯ ಉದ್ಘಾಟನೆ ಮಾಡುವುದರ ವಿಷಯವಾಗಿ ಗ್ರಾಮದ ದಲಿತ ಯುವಕರು ಯುವತಿಯರು, ಹಿರಿಯರು,ಮುಖಂಡರು ಜೊತೆಗೆ ಚರ್ಚಿಸಲಾಗಿದ್ದು ಸಮುದಾಯದ ಹಿತಕ್ಕಾಗಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷ್ಣಪ್ಪ, ಮಹಿಳಾ ಜಿಲ್ಲಾ ಸಂಚಾಲಕಿ ವಿಜಯಲಕ್ಷ್ಮೀ, ದಾವಣಗೆರೆ ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ ಹಾಗೂ ಸಂಘಟನೆಯ ಹಿರಿಯ ಪದಾಧಿಕಾರಿಗಳು ಮತ್ತು  ಗ್ರಾಮಸ್ಥರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...