ದಾವಣಗೆರೆ | ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟ ಧರಣಿ; ವಿವಿಧ ಸಂಘಟನೆಗಳ ಮುಖಂಡರ ಬೆಂಬಲ

Date:

ಕಾರ್ಮಿಕರ, ಕೈಗಾರಿಕಾ ವಿವಾದಗಳು ಬಾಕಿ ಇರುವ ಸಂದರ್ಭದಲ್ಲೇ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾರ್ಗಿಲ್ ಕಂಪನಿಯ ವಿರುದ್ಧ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭೇಟಿ ನೀಡಿ ಕಾರ್ಮಿಕರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.

- Advertisement -

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಕುರುವ ಗಣೇಶ್, “ಇತಿಹಾಸದಾದ್ಯಂತ ಮಾಲೀಕರು ಕಾರ್ಮಿಕರನ್ನು ಶೋಷಿಸುತ್ತಾ ಬಂದಿದ್ದಾರೆ. ಕಾರ್ಗಿಲ್ ಕಂಪನಿ ಕಾರ್ಮಿಕರ ಮೇಲೆ ನಡೆಸುತ್ತಿರುವ ಅನ್ಯಾಯ ಹಾಗೂ ದೌರ್ಜನ್ಯಗಳ ವಿರುದ್ಧ ಕಾರ್ಮಿಕರು ಕೈಗೊಂಡಿರುವ ಈ ಹೋರಾಟ ನ್ಯಾಯಸಮ್ಮತವಾಗಿದ್ದು, ಹೋರಾಟವೇ ಏಕೈಕ ಸರಿಯಾದ ದಾರಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
1003653377

ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ “ಕಾರ್ಮಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹಾಗೂ ಕೈಗಾರಿಕೆಯ ಉಳಿವಿಗಾಗಿ ಬೀದಿಗಿಳಿದು ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಶೋಚನೀಯ” ಎಂದು ವಿಷಾದ ವ್ಯಕ್ತಪಡಿಸಿದರು.

“ಕೂಡಲೇ ಕಂಪನಿಯ ಮಾಲೀಕರು ಧರಣಿ ಸ್ಥಳಕ್ಕೆ ಬಂದು ಕಾರ್ಮಿಕರ ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾರ್ಗಿಲ್ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ಸುತ್ತಮುತ್ತಲಿನ ಸಾವಿರಾರು ರೈತರನ್ನು ಹೋರಾಟಕ್ಕೆ ಕರೆತರಬೇಕಾಗುತ್ತದೆ. ಮುಂದಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ಮಂಡಳಿಯೇ ನೇರ ಹೊಣೆ” ಎಂದು ಎಚ್ಚರಿಕೆ ನೀಡಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ರಾಜ್ಯ ಸಂಚಾಲಕರಾದ ಅನೀಸ್ ಪಾಷಾ ಮಾತನಾಡಿ “ಕಾರ್ಮಿಕರ ಹೋರಾಟವನ್ನು ಬೆಂಬಲಿಸುತ್ತೇವೆ. ಪ್ರಸ್ತುತ ದಿನಗಳಲ್ಲಿ ನಮ್ಮನ್ನು ಆಳುತ್ತಿರುವ ಎಲ್ಲ ಸರ್ಕಾರಗಳು ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಇಂತಹ ನೀತಿಗಳನ್ನು ಸೋಲಿಸಲು ಒಗ್ಗಟ್ಟಿನ ಹೋರಾಟವೇ ಏಕೈಕ ಮಾರ್ಗ” ಎಂದು ಹೇಳಿದರು.

1003653376

“ದೆಹಲಿಯಲ್ಲಿ ಒಂದು ವರ್ಷಕ್ಕಿಂತ ಅಧಿಕ ಕಾಲ ನಡೆದ ರೈತ ಚಳುವಳಿ ನಮ್ಮ ದೇಶದಲ್ಲಿ ಇತಿಹಾಸ ನಿರ್ಮಿಸಿದಷ್ಟೇ ಅಲ್ಲ, ಇತರ ಹೋರಾಟಗಳಿಗೂ ಮಾದರಿಯಾಗಿದೆ. ಅದೇ ಸ್ಪೂರ್ತಿಯಿಂದ ಕಾರ್ಗಿಲ್ ಕಾರ್ಮಿಕರ ಹೋರಾಟ ಮುಂದುವರಿದಲ್ಲಿ ನ್ಯಾಯಕ್ಕೆ ಜಯ ಸಿಗಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಮಾನತೆ ಸಾಧಿಸಲು ನಾನು ಮೀಸಲಾತಿ ಪರ ಇದ್ದೇನೆ: ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬುಳ್ಳಾಪುರ ಹನುಮಂತಪ್ಪ, ಮರುಳಸಿದ್ದಯ್ಯ, ಸೇರಿದಂತೆ ಇತರ ರೈತ ಮುಖಂಡರು ಧರಣಿ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿ ಮಾತನಾಡಿದರು. ಕಾರ್ಗಿಲ್ ವರ್ಕರ್ಸ್ ಯೂನಿಯನ್ಅಧ್ಯಕ್ಷ ಸಂಜಯ್ ಜೆ, ಗೌರವಾಧ್ಯಕ್ಷ ಮಂಜುನಾಥ್ ಕೈದಾಳೆ, ಮಂಜುನಾಥ್, ಮಧು ತೊಗಲೇರಿ, ಮಂಜುನಾಥ್ ಕುಕ್ಕುವಾಡ ಸೇರಿದಂತೆ ನೂರಾರು ಕಾರ್ಮಿಕರು ಹಾಜರಿದ್ದರು.‌.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...