ದಾವಣಗೆರೆ | ಲಿಂಗಾಯತ ಮಠಾಧೀಶರಿಗೆ ಅಪಮಾನ:ಕನ್ನೇರಿ ಶ್ರೀ ಗಡಿಪಾರಿಗೆ ಬಸವಪರ ಸಂಘಟನೆಗಳ ಒತ್ತಾಯ

Date:

ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಾವಣಗೆರೆ ಬಸವಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

“ಸೌಹಾರ್ದತೆಯ ನಾಡು ಎಂದೇ ಭಾರತ ಹೆಸರಾಗಿದೆ. ಇಂತಹ ಸೌಹಾರ್ದ ನೆಲದಲ್ಲಿ ವೈದಿಕತೆಯು ಸೃಷ್ಟಿಸಿದ ಅಸಮಾನತೆಯ ವಿರುದ್ಧ ಬುದ್ಧ ಶಾಂತಿ, ಸಹಬಾಳ್ವೆ ತತ್ವಗಳ ಮೂಲಕ ಜೀವಪರ ಆಶಯಗಳನ್ನು ಬಿತ್ತರಿಸಿದ್ದು, ಇಂದಿಗೂ ಜಗತ್ತಿಗೆ ಮಾದರಿಯಾಗಿವೆ. ಬುದ್ಧ ಗುರುವಿನ ತರುವಾಯ ಮಹತ್ವದ ಸಾಮಾಜಿಕ ಕ್ರಾಂತಿಗೆ ಮುಂದಾಗಿ ಸಮಸಮಾಜಕ್ಕೆ ಮುನ್ನುಡಿ ಬರೆದವರು 12ನೇ ಶತಮಾನದ ಬಸವಾದಿ ಶರಣರುಗಳು, 12ನೇ ಶತಮಾನದಲ್ಲಿ ಬಸವಣ್ಣ ರೂಪಿಸಿದ ಜೀವಪರ ನೆಲೆಯ ಲಿಂಗಾಯತ ಧರ್ಮವು ತನ್ನದೇ ಆದ ಮಹತ್ವ ಪಡೆದುಕೊಂಡು ಸಾಗಿಬಂದಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಲಿಂಗಾಯತ ಮಠಾಧೀಶರುಗಳು ಬಸವಣ್ಣ ರೂಪಿಸಿದ ಲಿಂಗಾಯತ ತತ್ವದ ತಳಹದಿಯ ಮೇಲೆ ಕಾರ್ಯಪ್ರವೃತ್ತರಾಗಿದ್ದಾರೆ. ಒಕ್ಕೂಟದಿಂದ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟವನ್ನು ರೂಪಿಸಿರುವುದು ಸರಿಯಷ್ಟೆ, ಆದರೆ ಬಸವ ಪರವಾದ ಮಠಾಧೀಶರ ಏಕತೆಯನ್ನು ಸಹಿಸಿಕೊಳ್ಳಲಾಗದ ಮತ್ತು ವೈದಿಕಶಾಹಿಯ ಗುಲಾಮರಂತೆ ವರ್ತಿಸುತ್ತಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳು ಬಸವಪರವಾದ ಲಿಂಗಾಯತ ಮಠಾಧೀಶರಿಗೆ ಅಸಂವಿಧಾನಿಕ ಮತ್ತು ಆವಾಚ್ಯ ಶಬ್ದಗಳಿಂದ ನಿಂದಿಸಿ, ಲಿಂಗಾಯತ ಮಠಾಧೀಶರುಗಳಿಗೆ ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಕೋಟ್ಯಾಂತರ ಲಿಂಗಾಯತ ಸಮುದಾಯಕ್ಕೆ ಕಾಡಸಿದ್ದೇಶ್ವರ ಸ್ವಾಮಿಗಳ ಈ ಮಾತಿನಿಂದ ಅಪಮಾನವಾಗಿದ್ದು, ಇವರ ಮಾತು ಸಮಾಜದ ಶಾಂತಿಗೆ ಧಕ್ಕೆ ತರುತ್ತಿವೆ ಭಾರತದ ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆಯ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಭಾರತದ ಸಾರ್ವಭೌಮತೆ, ಸಹಬಾಳ್ವೆ, ಸೌಹಾರ್ದ, ಸಹೋದರತ್ವದ ಮೂಲದಂತಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ.

ಭಾರತೀಯ ಸಮಾಜದಲ್ಲಿ ಲಿಂಗಾಯತ ಮಠಾಧೀಶರು ಗೌರವಯುತ ಸ್ಥಾನಮಾನ ಪಡೆದುಕೊಂಡು, ಈ ನೆಲದ ಸೌಹಾರ್ದತೆಯನ್ನು, ಸಂವಿಧಾನವನ್ನು ಪಾಲಿಸಿಕೊಂಡು ಮುನ್ನಡೆಯುತ್ತಿದ್ದಾರೆ. ಇಂತಹ ಗೌರವಯುತವಾದ ಸ್ಥಾನಮಾನ ಪಡೆದುಕೊಂಡಿರುವ ಮಠಾಧೀಶರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ. ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಿರುವ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿ. ಇವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಬಸವಪರ ಸಂಘಟನೆಗಳ ವತಿಯಿಂದ ಸಾಂಕೇತಿಕವಾದ ಪ್ರತಿಭಟನೆಯ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುತ್ತಿದ್ದೇವೆ” ಎಂದರು.‌

“ಮುಖ್ಯಮಂತ್ರಿಗಳು ಕಾಡಸಿದ್ದೇಶ್ವರ ಸ್ವಾಮಿಯ ವಿರುದ್ಧ ಸೂಕ್ತ ಕ್ರಮ ಜರುಗಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂಬುದನ್ನು ಸರ್ಕಾರದ ಗಮನಕ್ಕೆ ತರುತ್ತೀದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ

.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...