ದಾವಣಗೆರೆ | ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನ:ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಆಕ್ರೋಶ

Date:

ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಒತ್ತಾಯಿಸಿದರು.

- Advertisement -

ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿರುವ ಶ್ರೀಗಳು “ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರು ಬಳಸಿದ ಭಾಷೆಯಿಂದ ಸಮಸ್ತ ಬೇಡ, ವಾಲ್ಮೀಕಿ, ನಾಯಕ ಸಮಾಜಕ್ಕೆ ನೋವುಂಟು ಮಾಡಿದೆ. ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುಧನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

“ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಜಾತಿ ಕಾರಣಕ್ಕೆ, ಸಮುದಾಯದ ಮುಖ್ಯವಾಹಿನಿಯಿಂದ ದೂರ ಉಳಿದ ಕಾರಣಕ್ಕೆ ಕಾನೂನಿನಲ್ಲಿ ರಕ್ಷಣೆ ನೀಡಿದ್ದಾರೆ. ಕಾನೂನು ರಕ್ಷಣೆ ಕೊಟ್ಟು 78 ವರ್ಷಗಳಾದರೂ ರಮೇಶ ಕತ್ತಿಯ ಮನಸ್ಥಿತಿಯ ಕೆಲವರು ಈ ರೀತಿ ವರ್ತಿಸುತ್ತಿರುವುದು ಬೇಸರದ ವಿಚಾರ. ಸಮಾಜದ ವಿರುದ್ಧ ಅವಹೇಳನಕಾರಿ ಪದ ಬಳಸಿದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಾಲ್ಮೀಕಿ ಗುರುಪೀಠದ ಆಗ್ರಹವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...