ದಾವಣಗೆರೆ | ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

Date:

Advertisements

ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಹಳೇ ಟೈರ್ ರಿಪೇರಿ ಮತ್ತು ಮಾರಾಟಗಾರರಿಗೆ ಸ್ಮಾರ್ಟ್ ಲೇಬರ್ ಕಾರ್ಡ್ ವಿತರಣೆ ಮಾಡಲಾಯಿತು.

ಸಂಘದ ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, “ಜಿಲ್ಲೆಯಲ್ಲಿ 500 ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರು ಇದ್ದಾರೆ. ಅದರಲ್ಲಿ 150 ಜನರಿಗೆ ಈಗ ವಿತರಿಸಲಾಗಿದೆ. ಉಳಿದವರಿಗೂ ಹಂತ -ಹಂತವಾಗಿ ವಿತರಣೆ ಮಾಡಲಾಗುವುದು” ಎಂದು ಹೇಳಿದರು.

ಕಾರ್ಯದರ್ಶಿ ಲಿಯಾಖತ್ ಮಾತನಾಡಿ, “ಓಲ್ಡ್ ಟೈರ್ ರಿಪೇರಿ ಮಾಡುವವರು ಮತ್ತು ಮಾರಾಟಗಾರರು ಬಳ ಬಡತನದಿಂದ ಜೀವನ ನಡೆಸುತ್ತಿದ್ದಾರೆ. ರಾಜ್ಯ ಸರಕಾರ ಇವರಿಗೂ ಲೇಬರ್ ಕಾರ್ಡ್ ವಿತರಿಸುವ ಮೂಲಕ ಭದ್ರತೆ ಒದಗಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಓಲ್ಡ್ ಟೈರ್ ಕೆಲಸ ಮಾಡುವವರು ಕಚೇರಿಗೆ ಬಂದು ಕಾರ್ಡ್ ಮಾಡಿಕೊಳ್ಳುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಅರವಿಂದ್, ಕಾರ್ಮಿಕ ಇಲಾಖೆಯ ಜಿಲ್ಲಾ ಸಂಯೋಜಕ ಚಿಕ್ಕಣ್ಣ, ಗೌರವಾಧ್ಯಕ್ಷ ಶೇಖ್ ಆಹಮದ್, ಹಯಾತ್ ಸಾಬ್, ಜೆ.ಕೆ.ಖಲೀಲ್, ಉಪಾಧ್ಯಕ್ಷ ಮಹಮದ್ ಆಲಿ, ಸಹಕಾರ್ಯದರ್ಶಿ ಇರ್ಫಾನ್, ಎಂ.ಕೆ.ದಾದಾಪೀರ್, ಜಬೀವುಲ್ಲಾ, ಫಯಾಜ್, ಸಲ್ಮಾನ್, ಕಲೀಲ್ ಸೇರಿದಂತೆ ಇತರರು ಹಾಜರಿದ್ದರು.‌

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X