ದಾವಣಗೆರೆ | ಹೆಲಿಕಾಪ್ಟರ್ ಲೇಔಟ್ ಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆಸೌಲಭ್ಯ ಕಲ್ಪಿಸಲು ಜನಶಕ್ತಿ ಆಗ್ರಹ

Date:

ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಬೀದಿ ದೀಪವನ್ನು ಸೌಲಭ್ಯ ಒದಗಿಸಲು ಕೋರಿ ಕರ್ನಾಟಕ ಜನಶಕ್ತಿಯ ದಾವಣಗೆರೆ ಘಟಕದ ಮುಖಂಡರು ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “ದಾವಣಗೆರೆ ನಗರದ ಬೂದಾಳ್ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಮೆಹಕ್ ಶಾದಿ ಮಹಲ್ ಮುಂಭಾಗದ ತಾಜ್ ಲೇಔಟ್ 1ನೇ ಮುಖ್ಯ ರಸ್ತೆಗೆ ಹೊಂದಿಕೊಂಡ ಹೆಲಿಕಾಪ್ಟರ್ ಲೇ ಔಟ್ ನಲ್ಲಿ 128 ನಿವೇಶನಗಳಿದ್ದು, ಈಗಾಗಲೇ 15 ನಿವೇಶನದಾರರು ಮನೆಯನ್ನು ಕಟ್ಟಿಕೊಂಡಿದ್ದು ಬಿ ಖಾತೆಯನ್ನು ಕೂಡ ಪಡೆದಿದ್ದಾರೆ.‌ ಆದರೆ ಈ ಪ್ರದೇಶದಲ್ಲಿ ಮೂಲಸೌಕರ್ಯಗಳಿಲ್ಲದೇ ಜನ ಸಮಸ್ಯೆ ಎದುರಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
1002986684
Oplus_131072

“ಕಳೆದ 2 ವರ್ಷಗಳಿಂದ ಇಲ್ಲಿನ ಜನರಿಗೆ ದಾರಿಯಿಲ್ಲ, ದಿನನಿತ್ಯ ಬಳಸುವ ಹಾಗೂ ಕುಡಿಯುವ ನೀರಿನ ಸಂಪರ್ಕವು ಕಲ್ಪಿಸಿಲ್ಲ, ಮತ್ತು ರಾತ್ರಿ ಸಮಯದಲ್ಲಿ ಬೀದಿ ದೀಪಾಗಳಿಲ್ಲದೆ ಮಕ್ಕಳು ಮತ್ತು ಹಿರಿಯ ನಾಗರೀಕರು ಓಡಾಡಲು ತೊಂದರೆ ಆಗುತ್ತಿದೆ. ಕೆಲವರು ರಸ್ತೆಯಲ್ಲಿ ಬಿದ್ದು ಸಣ್ಣ ಪುಟ್ಟ ಗಾಯಗಳಾದ ಘಟನೆಗಳೂ ನಡೆದಿವೆ. ನಿರಂತರ ಮಳೆಯಿಂದಾಗಿ ಗಿಡ-ಗಂಟಿಗಳು ಪೊದೆಗಳು ಬೆಳೆದು, ಹಾವುಗಳ ಹಾವಳಿಯು ಜಾಸ್ತಿ ಆಗಿದೆ. ಅದರಿಂದ ಮಹಾನಗರ ಪಾಲಿಕೆಯಿಂದ ನಿವೇಶನದಾರರಿಗೆ 24*7 ಕುಡಿಯುವ ನೀರಿನ ವ್ಯವಸ್ಥೆ, ಸುರಕ್ಷತವಾಗಿ ಓಡಾಡಲು ರಸ್ತೆ ಮತ್ತು ಬೀದಿ ದೀಪಗಳನ್ನು ಅಳವಡಿಸಬೇಕು” ಎಂದು ಮನವಿ ಸಲ್ಲಿಸಿ ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? http://ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

1002986683
Oplus_131072

ಕರ್ನಾಟಕ ಜನಶಕ್ತಿಯ ಮುಖಂಡರಾದ ಸೈಯದ್ ಅಸ್ಪಾಕ್, ಪವಿತ್ರ, ಸತೀಶ್ ಅರವಿಂದ್, ಜಾಫರ್ ಶರೀಪ್, ಸಮೀರ್, ರಫೀಕ್ ಖಾನ್, ರಿಯಾಜ್, ಮೆಹಬೂಬ್, ಬುಡೇನ್ ಸಾಬ್, ಮಾಹೀರ್ ಸೇರಿದಂತೆ ಹಲವಾರು ನಿವಾಸಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...