ದಾವಣಗೆರೆ | ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ವಿದ್ಯಾರ್ಥಿ ಸಾವು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರ

Date:

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಚನ್ನಗಿರಿಯ ಮರಬನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆ್ಯಕ್ಸಲ್‌ ತುಂಡಾದ ಕಾರಣ ಬಸ್‌ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ. ಇದರಿಂದಾಗಿ 50ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಡಿದ್ದಾರೆ. ಸದ್ಯ ಬಸವಾಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ>ದಾವಣಗೆರೆ | ಅಧಿಕಾರ ದುರುಪಯೋಗ, ಹಣಬಲ ಅಕ್ರಮದಿಂದ ಕಾಂಗ್ರೆಸ್ ಚುನಾವಣೆ ಗೆದ್ದಿದೆ: ಎಸ್‌ಡಿಪಿಐ

ಅಪಘಾತದಲ್ಲಿ ಜೀವ ಕಳೆದುಕೊಂಡ ವಿಧ್ಯಾರ್ಥಿ ವರ್ದ ದರ್ಶನ್‌(21) ಎಂದು ಗುರುತಿಸಲಾಗಿದೆ. ಬಸ್‌ ದಾವಣಗೆರೆಯಿಂದ ಬಸವಾಪಟ್ಟಣದ ಕಡೆಗೆ ಸಾಗುತ್ತಿತ್ತು, ಬೆಳಿಗ್ಗೆ 10:30ರ ಸುಮಾರಿಗೆ ಮರಬನಹಳ್ಳಿ ಸಮೀಪ ಬಸ್‌ನ ಆ್ಯಕ್ಸಲ್ ತುಂಡಾಗಿ ಗಾಲಿಗಳು ಕಳಚಿದ್ದ ಪರಿಣಾಮ ಬಸ್‌ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಸ್‌ ಪಲ್ಟಿಯಾದ ಸುದ್ದಿ ತಿಳಿಯುತ್ತಿದ್ದಂತೇ ರಕ್ಷಣೆಗೆ ಧಾವಿಸಿದ ಮರಬನಹಳ್ಳಿ ಗ್ರಾಮಸ್ಥರು, ಬಸ್‌ನಲ್ಲಿ ಸಿಲುಕಿದ್ದವರನ್ನು ಹೊರತೆಗೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ದರ್ಶನ್‌ ಸ್ಥಳದಲ್ಲೇ ಅಸುನೀಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಮತ್ತು ಬಸವಾಪಟ್ಟಣದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ದಾವಣಗೆರೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...