ದಾವಣಗೆರೆ | ಕಾರ್ಮಿಕ ವಿರೋಧಿ, ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ; ಪೋಸ್ಟರ್ ಬಿಡುಗಡೆ

Date:

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ ಬೆಂಬಲ ವ್ಯಕ್ತಪಡಿಸಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

- Advertisement -

ಈ ವೇಳೆ ಮಾತನಾಡಿದ ಎಐಯುಟಿಯುಸಿ ಮುಖಂಡರು “ನಮ್ಮ ದೇಶದ ದುಡಿಯುವ ವರ್ಗವು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸುತ್ತಿದೆ. ಈ ದಾಳಿಗಳನ್ನು ಎದುರಿಸಲು, ದುಡಿಯುವ ಜನರ ಒಗ್ಗಟ್ಟಿನ, ಪ್ರಬಲ, ಸಂಘಟಿತ ಮತ್ತು ಅವಿರತ ಚಳವಳಿಗಳು ತುರ್ತು ಅಗತ್ಯವಾಗಿವೆ. “ಫ್ಯಾಸಿಸ್ಟ್ ದಾಳಿಗಳ” ವಿರುದ್ಧ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ಸೆಪ್ಟೆಂಬರ್ 4, 2025 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಪ್ರತಿಭಟನೆಯನ್ನು ನಡೆಸಲು ಕರೆ ನೀಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅತಿದೊಡ್ಡ ಪ್ರಜಾಪ್ರಭುತ್ವವೆಂದು ಹೇಳಿಕೊಳ್ಳುವ ದೇಶದಲ್ಲಿ ಸ್ವಾತಂತ್ರ್ಯ ನಂತರ ಕಳೆದ 78 ವರ್ಷಗಳಲ್ಲಿ ಶ್ರೀಮಂತರ-ಬಡವರ ಅಸಮಾನತೆ ಭಾರೀ ಮಟ್ಟದಲ್ಲಿ ಹೆಚ್ಚುತ್ತಿದ್ದು, ಜನಸಂಖ್ಯೆಯ ಕೇವಲ 5% ಶ್ರೀಮಂತರು ದೇಶದ 70% ಸಂಪತ್ತನ್ನು ಕಬಳಿಸಿರುವರೆಂದು, 50% ಜನರು ಕೇವಲ 3% ಸಂಪತ್ತಿನಲ್ಲಿ ಬದುಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ, ಕಾರ್ಮಿಕರು, ರೈತರು, ಬಡವರು, ಅಸಂಘಟಿತ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರು ಧರ್ಮ-ಜಾತಿ-ಭಾಷಾ-ಪ್ರದೇಶ ಭೇದಗಳನ್ನು ಮೀರಿ ಒಗ್ಗಟ್ಟಾಗಿ ಹೋರಾಡುವುದು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

“ಆದರೆ ಆಳುವ ಬಂಡವಾಳಶಾಹಿ ವರ್ಗ ಮತ್ತದರ ಸೇವಕ ಸರ್ಕಾರಗಳು ಗರಿಷ್ಠ ಲಾಭಗಳಿಸುವ ತಮ್ಮ ವರ್ಗ ಹಿತಾಸಕ್ತಿಗಾಗಿ, ನಮ್ಮ ಐಕ್ಯತೆಯನ್ನು ಒಡೆಯಲು, ಸತತ ಪಿತೂರಿಗಳನ್ನು ಮಾಡುತ್ತಿವೆ. ನಿಜವಾದ ಭೇದ ಅಥವಾ ವಿಭಜನೆಯು ಶೋಷಕ ಮತ್ತು ಶೋಷಿತರ ನಡುವೆ, ಶ್ರೀಮಂತರು ಮತ್ತು ಬಡವರ ನಡುವೆ ಇದೆ. ಆದ್ದರಿಂದ ದುಡಿಯುವ ಜನರು ತಮ್ಮ ವರ್ಗ ಹಿತಾಸಕ್ತಿಗಾಗಿ, ಆಳುವ ವರ್ಗ ಮತ್ತದರ ಸರ್ಕಾರಗಳು, ನಮ್ಮ ದೇಶಭಕ್ತಿಯ ಆಳವಾದ ಭಾವನೆಗಳನ್ನು ದುರುಪಯೋಗ ಮಾಡಿಕೊಂಡು, ರಾಷ್ಟ್ರ ಅಂಧಾಭಿಮಾನವನ್ನು ಕೆರಳಿಸಿ, ನಮ್ಮ ಒಗ್ಗಟ್ಟನ್ನು ಮುರಿಯದಂತೆ ಪ್ರಜ್ಞಾವಂತಿಕೆಯಿಂದ ಜಾಗೃತರಾಗಿರಬೇಕು” ಎಚ್ಚರಿಸಿದರು.

“ಮುಖ್ಯ ಬೇಡಿಕೆಗಳಾದ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ರದ್ದುಗೊಳಿಸಬೇಕು. ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2023 ಹಾಗೂ ಸ್ಮಾರ್ಟ್ ಮೀಟರ್ ಯೋಜನೆ ಕೈಬಿಡಬೇಕು. ಕೆಲಸದ ಅವಧಿ ದಿನಕ್ಕೆ 8 ಗಂಟೆ ನಿಗದಿಪಡಿಸಬೇಕು. ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ತರಬೇಕು.
ಪಿಎಫ್, ಇಎಸ್‌ಐ, ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಎಲ್ಲ ಕಾರ್ಮಿಕರಿಗೆ ಖಾತ್ರಿಪಡಿಸಬೇಕು. ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರಿಗೆ ಕಾನೂನುಬದ್ಧ ಹಕ್ಕು ನೀಡಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಅಥವಾ ನಿರುದ್ಯೋಗ ಭತ್ಯೆ ನೀಡಬೇಕು. ಆಹಾರ, ಔಷಧಿ, ಪೆಟ್ರೋಲಿಯಂ ಬೆಲೆ ಏರಿಕೆ ನಿಯಂತ್ರಿಸಬೇಕು. ರೈತರಿಗೆ “C2+50” ಸೂತ್ರದಂತೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ 2020 ರದ್ದುಗೊಳಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭಾರತದ ಜಾತಿಗಳು ಹೋಮೋಜೀನಿಯಸ್‌ ಅಲ್ಲ, ರೆಟ್ರೋ ಜೀನಿಯಸ್; ಚಿಂತಕ ವಿ ಎಲ್ ನರಸಿಂಹಮೂರ್ತಿ

ಕಾರ್ಯಕ್ರಮದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಕೈದಾಳೆ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕುಕ್ಕುವಾಡ, ಜಿಲ್ಲಾ ಉಪಾಧ್ಯಕ್ಷರಾದ ಶಿವಾಜಿರಾವ್, ಪ್ರಕಾಶ್ ಎಲ್.ಹೆಚ್. ಜಿಲ್ಲಾ ಖಜಾಂಚಿ ತಿಪ್ಪೇಸ್ವಾಮಿ ಅಣಬೇರು, ಮುಖಂಡರಾದ ವಿರೂಪಾಕ್ಷಪ್ಪ ದೊಡ್ಡಮನಿ, ಪರಮೇಶ್ವರಪ್ಪ, ರವಿಕುಮಾರ್, ಲಲಿತಮ್ಮ, ಇಂದಿರಾ ಎಸ್.ಆರ್. ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...