ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

Date:

Advertisements

“ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ. ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೂ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಯಡಿ ಕೆರೆಗೆ ನೀರು ಹರಿಸುತ್ತಿದ್ದು, ಕೆರೆಯ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಹೀಗಾದಲ್ಲಿ ಕೆರೆಗೆ ಎಷ್ಟು ನೀರು ಹರಿಸಿದರೂ ರೈತರು, ಸಾರ್ವಜನಿಕರಿಗೆ ಉಪಯೋಗ ಇಲ್ಲದೇ ವ್ಯರ್ಥವಾಗಲಿದ್ದು, ಕೂಡಲೇ ದುರಸ್ಥಿ ಕಾರ್ಯ ಕೈಗೊಳ್ಳಬೇಕು” ಎಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತಸಂಘದ ಮುಖಂಡ ಕುಮಾರ್ ಭರಮಸಮುದ್ರ ಒತ್ತಾಯಿಸಿದರು.‌

1002555634 1

ಈ ಬಗ್ಗೆ ಮಾಹಿತಿ ನೀಡಿದ “ಅವರು ಹಲವು ದಿನಗಳಿಂದ ಕೆರೆ ತೂಬಿನಲ್ಲಿ ಬಿರುಕುಂಟಾಗಿ ನೀರು ಸೋರಿ ಹೋಗುತ್ತಿದೆ. ಇದನ್ನು ಅಧಿಕಾರಿಗಳ ಗಮನಕ್ಕೆ ತಂದರೂ, ಅರ್ಧಂಬರ್ಧ ಕೆಲಸ ಮಾಡಿ ಹೋದಂತಹ ಅಧಿಕಾರಿಗಳು ಕೆರೆಯ ಕಡೆ ನೋಡದೆ ಮತ್ತೆ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಕೆರೆಗಳಿಗೆ ಜಗಳೂರು 57 ಕೆರೆ ತುಂಬಿಸುವ ಯೋಜನೆಯಡಿ ನೀರು ಬಿಟ್ಟಿದ್ದು, ಮತ್ತೊಂದು ಕಡೆ ಈ ವರ್ಷ ಉತ್ತಮ ಮಳೆ ಆಗುತ್ತಿದ್ದು, ಮತ್ತೆ ಕೆರೆ ಕೋಡಿ ಬಿದ್ದಿದೆ. ಇದರಿಂದಾಗಿ ರೈತರಿಗೆ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕೆರೆಯ ಟ್ಯೂಬ್ಗಳಿಂದ ನೀರು ಪೋಲಾಗುತ್ತಿರುವುದನ್ನು ನಿಲ್ಲಿಸಬೇಕು. ಒಂದು ವೇಳೆ ಏನಾದರೂ ನಿರ್ಲಕ್ಷ್ಯ ಮಾಡಿದಲ್ಲಿ, ಅನಾಹುತಗಳು ಸಂಭವಿಸಿದಲ್ಲಿ ಮುಂದಿನ ದಿನದಲ್ಲಿ ಸಂಬಂಧಪಟ್ಟ ಕಚೇರಿಗಳಿಗೆ ಬೀಗ ಹಾಕುವುದರ ಮುಖಾಂತರ ಬೃಹತ್ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.‌

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

Advertisements

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಡಾ ವಾಸುದೇವ ಮೇಟಿ ಬಣ ) ಜಗಳೂರು ತಾಲೂಕಿನ ಮುಖಂಡರು ಕಾರ್ಯಕರ್ತರು ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸಾಂಪ್ರದಾಯಿಕ, ಸೌಹಾರ್ಧತೆಯಿಂದ ಆಚರಿಸಿ; ಡಿಸಿ ಜಿ.ಎಂ.ಗಂಗಾಧರಸ್ವಾಮಿ

"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ...

ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ...

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

Download Eedina App Android / iOS

X