ದಾವಣಗೆರೆ | ಕರ್ನಾಟಕ ರಾಷ್ಟ್ರ ಸಮಿತಿಯ ಯುವ ಕಾರ್ಯಕರ್ತರಿಗೆ ತುಮಕೂರಿನಲ್ಲಿ ನಾಯಕತ್ವ ತರಬೇತಿ

Date:

“ಯುವ ಕಾರ್ಯಕರ್ತರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 3 ಮತ್ತು ಎಪ್ರಿಲ್ 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ” ಎಂದು ಕೆಆರ್ ಎಸ್ ಪಕ್ಷದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ.ಬಸವರಾಜಯ್ಯ ತಿಳಿಸಿದರು.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು “ತರಭೇತಿ ಶಿಬಿರದಲ್ಲಿ ಸ್ವ ಅರಿವು ಮತ್ತು ಸ್ವ ವಿಮರ್ಶೆ ಜೊತೆಗೆ ನಾನೇಕೆ ರಾಜಕೀಯ ನಾಯಕತ್ವ ವಹಿಸಬೇಕು. ತನ್ನ ಸುತ್ತಮುತ್ತಲಿನ ಸಮಕಾಲೀನ ಸಮಸ್ಯೆಗಳನ್ನು ಮುಖಾಮುಖಿಯಾಗಿ ಸಮರ್ಥವಾಗಿ ಹೇಗೆ ಎದುರಿಸಬೇಕು? ಪ್ರಾಮಾಣಿಕ ರಾಜಕೀಯ, ಪ್ರಸ್ತುತ ರಾಜಕೀಯ, ಸಮಕಾಲೀನ ಚಿಂತನೆಗಳಲ್ಲದೆ ನಾಯಕತ್ವ ಅರ್ಥ, ವಿಧಗಳು ಇತ್ಯಾದಿ ವಿಷಯ ತಿಳಿಸಲಾಗುತ್ತದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ ಬಿ ಐ ಬ್ಯಾಂಕ್ ಕಳ್ಳತನ ಪ್ರಕರಣ, ಸಾಲ ನಿರಾಕರಿಸಿದ್ದಕ್ಕೆ ಬ್ಯಾಂಕ್ ದರೋಡೆ.

“ಭಾಷಣ ಕಲೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯ ಕೌಶಲ್ಯಗಳನ್ನು ತರಬೇತಿ ಒಳಗೊಂಡಿದೆ. ಶಿಬಿರವು ಸಮಾಜದ ಉತ್ತಮ ನಾಯಕಿಯರು, ನಾಯಕರಾಗಲು ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುತ್ತದೆ. ಯುವ ಪೀಳಿಗೆಯಲ್ಲಿನ ನಾಯಕಿಯರು, ನಾಯಕರನ್ನು ವಿಮರ್ಶೆಗೊಳಪಡಿಸಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ.‌ ಈ ತರಬೇತಿ ಶಿಬಿರವು 2 ದಿನ ನಡೆಯಲಿದ್ದು, 2 ದಿನವೂ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ಹಾಗೇ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಭಾಗವಹಿಸುವವರು ತಮ್ಮ ಹೆಸರನ್ನು ನೋಂದಾಯಿಸಲು 7619353525, 8749065597 ಸಂಪರ್ಕಿಸಲು ಕೋರಿದರು.

ಈ ಸುದ್ದಿಯನ್ನು ಓದಿ; ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ

ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ ಪುಟ್ಟನಾಯ್ಕ, ಕೆ.ಎಸ್.ವೀರಭದ್ರಪ್ಪ, ವಿ.ಬಿ.ಕೃಷ್ಣ, ಮಂಜುನಾಥ್ ಹಳ್ಳಿಕೆರೆ, ರಾಘವೇಂದ್ರ, ಸುರೇಶ್ ಸಂಗೇನಹಳ್ಳಿ, ಟಿ.ಅಜೇಶ್ ಹಾಗೂ ಮುಖಂಡರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...