ದಾವಣಗೆರೆ | ಲೋಕಾಯುಕ್ತ ದಾಳಿ, ಬೆಸ್ಕಾಂ ಸಹಾಯಕ ಇಂಜಿನಿಯರ್ ಬಲೆಗೆ.‌

Date:

ರೈತರ ಹೊಲದಲ್ಲಿನ ಸುಟ್ಟು ಹೋದ ವಿದ್ಯುತ್ ಪರಿವರ್ತಕವನ್ನು ಬದಲಾಯಿಸಿ ಕೊಡಲು ಲಂಚಕ್ಕೆ ಬೇಡಿಕೆಯಿರಿಸಿದ್ದ ವೇಳೆ ರೈತರು ದೂರು ನೀಡಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ವಿಭಾಗದ ಸಹಾಯಕ ಇಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

- Advertisement -

ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಚನ್ನಗಿರಿ ತಾಲೂಕು ಮಲ್ಲಾಪುರ ಗ್ರಾಮದ, ಮಂಜುನಾಥ ಬಿ.ಎಂ. ಎನ್ನುವವರು ತನ್ನ ಚಿಕ್ಕಪ್ಪ ಸೋಮಶೇಖರಪ್ಪನವರ ಹೊಲದಲ್ಲಿ ಅಳವಡಿಸಿದ್ದ ವಿದ್ಯುತ್ ಪರಿವರ್ತಕ ಸುಮಾರು 01 ವರ್ಷದ ಹಿಂದೆ ಸುಟ್ಟು ಹೋಗಿದ್ದು, ಸದರಿ ವಿದ್ಯುತ್ ಪರಿವರ್ತಕ ಬದಲಾಯಿಸಿ ಬೇರೆ ವಿದ್ಯುತ್ ಪರಿವರ್ತಕ ಅಳವಡಿಸಿಕೊಡುವ ಬಗ್ಗೆ ಸಂತೆಬೆನ್ನೂರು ಬೆಸ್ಕಾಂ ಕಛೇರಿ, ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಸೆಕ್ಷನ್ ಆಪೀಸರ್ ಮೋಹನ್ ಕುಮಾರ್ ಗೆ ಕೇಳಿದ್ದು, ಅಧಿಕಾರಿಯು ಹತ್ತು ಸಾವಿರ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು, 2025 ಮಾರ್ಚ್ 29 ರಂದು ರಂದು ದಾವಣಗೆರೆ ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದೂರು ಸ್ವೀಕರಿಸಿದ್ದ ಲೋಕಾಯುಕ್ತ ಪೊಲೀಸರು ಮೊಕದ್ದಮೆ ಸಂ:04/2025 ಯು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಅಸಿಸ್ಟೆಂಟ್ ಇಂಜಿನಿಯರ್ ಮೋಹನ್ ಕುಮಾರ್ ಹತ್ತು ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವ ವೇಳೆ ದಾಳಿ ನಡೆಸಿ ದಸ್ತಗಿರಿ ಮಾಡಿ ವಿಚಾರಣೆ ಕೈಗೊಂಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ ಜಾರಿಗೆ ತರದೇ ಸರ್ಕಾರ ವಂಚನೆ; ಮಾದಿಗ ಸಂಘಟನೆಗಳ ಒಕ್ಕೂಟ.

ಕರ್ನಾಟಕ ಲೋಕಾಯುಕ್ತದ ದಾವಣಗೆರೆ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ, ಪೊಲೀಸ್ ಉಪಾಧೀಕ್ಷಕಿ ಕಲಾವತಿರವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಹೆಚ್.ಗುರುಬಸವರಾಜು, ಸರಳ. ಪಿ. ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದು ಯಶಸ್ವಿ ಕಾರ್ಯಾಚರಣೆ ನೆಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...