ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ “ಪೊಲೀಸರೊಂದಿಗೆ ಮ್ಯಾರಥಾನ್ 2025”

Date:

ದಾವಣಗೆರೆ ಪೊಲೀಸ್ ಇಲಾಖೆ ವತಿಯಿಂದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ‘ಡ್ರಗ್ಸ್ ಮುಕ್ತ ದಾವಣಗೆರೆ’ ‘ಸೈಬರ್ ಸೇಫ್ ಸಿಟಿ’ ‘112 ಸಹಾಯವಾಣಿ’ ‘ಸಂಚಾರ ನಿಯಮಗಳ ಕಡ್ಡಾಯ ಪಾಲನೆ’, ‘ಫಿಟ್ ನೆಸ್ ಫಾರ್ ಆಲ್’. ‘ಮಹಿಳಾ ಸುರಕ್ಷತೆ ಅಭಿಯಾನ’ ಎಂಬ ಘೋಷಣೆ ಅಡಿಯಲ್ಲಿ ಎರಡನೇ ಬಾರಿಗೆ ಮ್ಯಾರಥಾನ್ ಓಟ -2025 ಆಯೋಜಿಸಲಾಗಿದೆ” ಎಂದು ಪೂರ್ವವಲಯ ಪೊಲೀಸ್ ಮಹಾನಿರ್ದೇಶಕ ಡಾ.ರವಿಕಾಂತೇಗೌಡ ಬಿಆರ್ ತಿಳಿಸಿದರು.

- Advertisement -

ದಾವಣಗೆರೆ ಕಛೇರಿಯಲ್ಲಿ ಪೊಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 2025 ಮಾರ್ಚ್ 9ರಂದು “10ಕೆ ಮ್ಯಾರಥಾನ್ ಹಾಗೂ 5ಕೆ ಮ್ಯಾರಾಥಾನ್ ಪೊಲೀಸರೊಂದಿಗೆ ಓಟ” ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಪೊಲೀಸರೊಂದಿಗೆ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಯುವಕ, ಯುವತಿಯರು, ಕ್ರೀಡಾಪಟುಗಳು, ಹಾಗೂ ಜಿಲ್ಲೆಯ ನಾಗರೀಕರು ಸಹ ಸ್ವ-ಹಿತಾಸಕ್ತಿಯಿಂದ ಪಾಲ್ಗೊಳ್ಳಲು ಅವಕಾಶವಿದೆ. ಸದರಿ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರು ಮಾರ್ಚ್ 8ರ ಮದ್ಯಾಹ್ನ 02-00 ಗಂಟೆಯೊಳಗೆ ಲಿಂಕ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳುವುದು ಕಡ್ಡಾಯ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 9ರ ಬೆಳಗ್ಗೆ 07-00 ಗಂಟೆಗೆ “10ಕೆ ಮ್ಯಾರಾಥಾನ್ ಹಾಗೂ 5ಕೆ ಮ್ಯಾರಾಥಾನ್ ಗೆ ಚಾಲನೆ ನೀಡಲಾಗುತ್ತದೆ. ಪ್ರತಿ ವಿಭಾಗದಲ್ಲೂ ವಿಜೇತರಾದ ಮೂವರು ಸ್ಪರ್ಧಿಗಳಿಗೆ ಬಹುಮಾನ ನೀಡಲಾಗುವುದು. ವಿಶೇಷವಾಗಿ ಮಹಿಳೆಯರಿಗಾಗಿ 5000 ಮೀ. ಓಟದ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಾದ ಮೊದಲ 03 ಸ್ಪರ್ದಿಗಳಿಗೆ ಬಹುಮಾನ ನೀಡಲಾಗುತ್ತದೆ. ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟ ವಯಸ್ಕರಾಗಿರಬೇಕು.‌ ಯಾವುದೇ ಆರೋಗ್ಯದ ಸಮಸ್ಯೆಗಳು ಹೊಂದಿರಬಾರದು ಹಾಗೂ ಯಾವುದೇ ಸಮಸ್ಯೆ, ಆರೋಗ್ಯದಲ್ಲಿ ಏರುಪೇರಾದರೂ ಸ್ಪರ್ಧಾಳುಗಳೇ ಜವಾಬ್ದಾರರಾಗಿರುತ್ತಾರೆ” ಎಂದು ಸೂಚನೆ ನೀಡಿದರು.

1001649223
ಮ್ಯಾರಥಾನ್ ಪೋಸ್ಟರ್ ಬಿಡುಗಡೆ

“ಬೆಳಿಗ್ಗೆ 7ಕ್ಕೆ ಪ್ರಾರಂಭವಾಗುವ ಮ್ಯಾರಥಾನ್ ಓಟದ 10ಕೆ ಮ್ಯಾರಥಾನ್ ಓಟದ ಮಾರ್ಗ, ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಡೆಂಟಲ್ ಕಾಲೇಜ್ ರಸ್ತೆ – ಗುಂಡಿ ವೃತ್ತ – ಶಾಮನೂರು ರಸ್ತೆ ಮೂಲಕ ನಗರದ ಹಲವೆಡೆ ಸಂಚರಿಸಿ ಜಯದೇವ ವೃತ್ತ, ವಿದ್ಯಾರ್ಥಿ ಭವನ ಜಂಕ್ಷನ್ ಮೂಲಕ ಸಾಗಿ – ಬಾಪೂಜಿ ಬ್ಯಾಂಕ್ ಬಳಿ ಬಲ ತಿರುವ ಪಡೆದುಕೊಂಡು ಜಿಲ್ಲಾ ಕ್ರೀಡಾಂಗಣದ ಮುಖ್ಯದ್ವಾರದ ಮೂಲಕ ಒಳಗಡೆ ಬರಲಿದೆ”.

“5000 ಮಿ. ಮ್ಯಾರಥಾನ್ ಓಟ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಿ ಹದಡಿ ರಸ್ತೆಯ ಪೂರ್ವ ಮುಖ್ಯದ್ವಾರದ ಮೂಲಕ ಸಾಗಿ ಎ ಆರ್ ಜಿ ಕಾಲೇಜ್ ರಸ್ತೆ ಮೂಲಕ ಡೆಂಟಲ್ ಯುಬಿಡಿಟಿ ಕಾಲೇಜ್ ಬಳಿ ತಿರುವು ಪಡೆದು ನಗರದ ವಿವಿಧೆಡೆ ಸಂಚರಿಸಿ ಹದಡಿ ರಸ್ತೆಗೆ ಬಂದು ನೇರವಾಗಿ ಹದಡಿ ರಸ್ತೆ ಮುಖಾಂತರ ಜಿಲ್ಲಾ ಕ್ರೀಡಾಂಗಣಕ್ಕೆ ವಾಪಸ್ ಬಂದು ಸೇರಲಿದೆ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಆಸ್ತಿ ಗಳಿಕೆ ಆರೋಪ, ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಂತೋಷ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...