ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ಕಿಡಿಗಳು, ವೀರಸೇನಾನಿಗಳಾದ ಶಾಹಿದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ 94ನೇ ಹುತಾತ್ಮ ದಿನಾಚರಣೆಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ ವತಿಯಿಂದ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿ ಭಗತ್ ಸಿಂಗ್, ರಾಜಗುರು, ಸುಖದೇವ್ ರವರ ಭಾವಚಿತ್ರಕ್ಕೆ ಪುಷ್ಪ ನಮನ, ಗೌರವ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರಾತ್ರಿ ವೇಳೆ ಜಮೀನಿನಲ್ಲಿ ರೈತನ ಮೇಲೆ ಕರಡಿ ದಾಳಿ.
ಏಐಡಿವೈಓ ಜಿಲ್ಲಾ ಸಂಚಾಲಕರಾದ ಪರಶುರಾಮ್, ಭಗತ್ ಸಿಂಗ್ ರವರ ಜೀವನ, ಆದರ್ಶ, ಸ್ವಾತಂತ್ರ್ಯ ಸಂಗ್ರಾಮದ ರಾಜಿ ರಹಿತ ಹೋರಾಟ, ಸಮಾಜವಾದಿ ಆಲೋಚನೆಗಳು, ಹಲವು ವಿಷಯಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಕ್ಕುವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಯುತ ಗದ್ದಿಗೆಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಬಸವರಾಜ್, ರವಿಕುಮಾರ್, ಕೆಪಿಎಸ್ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್ ಜಿ ಬಿ, ಸಾಮಾಜಿಕ ಹೋರಾಟಗಾರ ಮಂಜುನಾಥ್ ಕುಕ್ಕುವಾಡ, ದಿನೇಶ್, ಸಿದ್ದೇಶ್, ಷಡಕ್ಷರಪ್ಪ, ಅನಿಲ್, ಶ್ರೀಮತಿ ರೇಖಾ, ಜೀವನ್,ವಿಜಯಲಕ್ಷ್ಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.