ದಾವಣಗೆರೆ | ಬ್ಯಾಂಕ್ ಖಾತೆಯಿಂದ ಹಣ ವಂಚನೆ: ಸೈಬರ್ ಪೊಲೀಸರಿಂದ ಅಂತಾರಾಜ್ಯ ಆರೋಪಿ ಬಂಧನ

Date:

ಬ್ಯಾಂಕ್ ಖಾತೆಯಿಂದ ವ್ಯಕ್ತಿಯೋರ್ವನಿಗೆ 52.60 ಲಕ್ಷ ರೂ ಹಣ ವಂಚನೆ ಪ್ರಕರಣದಲ್ಲಿ ಅಂತರ್ ರಾಜ್ಯ ಆರೋಪಿಯನ್ನು ಭರ್ಜರಿ ಕಾರ್ಯಾಚರಣೆ ನಡೆಸಿ ದಾವಣಗೆರೆ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

- Advertisement -

ಅಂಜನಾದ್ರಿ ಪ್ರಾಪ್ರಟಿ ಕನ್ಸ್ಟ್ರಕ್ಸನ್ ನ ಪ್ರಮೋದ ಎಂಬುವವರು ತಮ್ಮ ಕೆನರಾ ಬ್ಯಾಂಕ್‌ ಖಾತೆಯಿಂದ ಆನ್‌ಲೈನ್ ವಹಿವಾಟನಲ್ಲಿ ರೂ. 52,60,523 ತಮಗೆ ಮಾಹಿತಿ ಇಲ್ಲದೇ ವರ್ಗಾವಣೆಯಾಗಿರುವ ಬಗ್ಗೆ ಆಗಸ್ಟ್ 8ರಂದು 2025 ರಂದು ಸೈಬರ್ ಠಾಣೆಗೆ (CEN) ದೂರು ನೀಡಿದ್ದರು. ಪ್ರಕರಣದಲ್ಲಿ ಹಾಸನ ಜಿಲ್ಲೆ ಬೇಲೂರಿನ ಶಾಂತಿನಗರದಲ್ಲಿ ಸೈಯದ್ ಅರ್ಫಾತ್(28) ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಸೆನ್ ಠಾಣೆ ಪೊಲೀಸರು ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಸೈಬರ್ ಆಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಬಂಕಾಳಿ ನಾಗಪ್ಪ ನೇತೃತ್ವದಲ್ಲಿ ಸಿಬ್ಬಂದಿಯವರಾದ ಅಶೋಕ, ಸುರೇಶ್, ಮುತ್ತುರಾಜ್, ನಿಜಲಿಂಗಪ್ಪ ರವರ ತಂಡವು ಕಾರ್ಯಚರಣೆ ನಡೆಸಿ ಎ2 ಸೈಯದ್ ಅರ್ಫಾತ್ ದಸ್ತಗಿರಿ ಮಾಡಿ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮತ್ತೊಬ್ಬ ಆರೋಪಿತ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮತ್ತು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣದಲ್ಲಿ ಆರೋಪಿತರ ಚಾಲ್ತಿ ಖಾತೆಯಲ್ಲಿ ಜುಲೈ 27 ರಿಂದ ಆಗಸ್ಟ್ 19 ರವರೆಗೆ ಸುಮಾರು 150 ಕೋಟಿ ಆನ್ ಲೈನ್ ಪ್ರಾಡ್ ಮೊತ್ತ ಡಿಪಾಸಿಟ್ ಆಗಿದ್ದು, ಆರೋಪಿಗಳು 132 ಕೋಟಿ ಹಣ ವಿತ್ ಡ್ರಾ ಮಾಡಿರುತ್ತಾರೆ. ಹಾಲಿ ಖಾತೆಯಲ್ಲಿ 18 ಕೋಟಿ ಪ್ರೀಜ್ ಮಾಡಿಸಿದ್ದು, ಪಿರ್ಯಾದಿಯ 52,60,400/- ರೂಗಳನ್ನು ದಾವಣಗೆರೆ 3ನೇ ಎ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಪ್ರಮೋದ್ ರವರಿಗೆ ರಿಫಂಡ್ ಮಾಡಲಾಗಿದೆ.

ಉತ್ತರ ಪ್ರದೇಶದ ಗಾಜೀಯ ಬಾದ್, ಜಮ್ಮು & ಕಾಶ್ಮೀರದ ಶ್ರೀನಗರ, ಆಂದ್ರ ಪ್ರದೇಶ ಏಲೂರು, ಮಹಾರಾಷ್ಟ್ರದ ಮುಂಬೈ ಸಿಟಿ, ಕರ್ನಾಟಕದ ಬೆಂಗಳೂರು ಸಿಟಿ ಹಾಗೂ ದಾವಣಗೆರೆ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿತನು ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಸೈಬರ್ ವಂಚನೆ ಪ್ರಕರಣಗಳ ಭಾಗಿಯಾಗಿದ್ದು, ಇದೇ ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಯ ಸೈಬರ್ ಪೊಲೀಸ್ ತಂಡದಿಂದ ಬಂಧಿತನಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ ದಾವಣಗೆರೆ | ಸೌಜನ್ಯ ಇತರ ಸಂತ್ರಸ್ತ ಮಹಿಳೆಯರ ಕೊಂದವರು ಯಾರು? ಮಹಿಳಾ ಸಂಘಟನೆಗಳ ಹೋರಾಟ

ದಾವಣಗೆರೆ ಜಿಲ್ಲಾ ಪೊಲೀಸ್‌ನ ಸೈಬರ್ ಪೊಲೀಸ್ ಠಾಣೆಯ ತಂಡಕ್ಕೆ ಶ್ಲಾಘನೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...