ದಾವಣಗೆರೆ | ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಹೆಚ್ಚಿನ ಅರಿವು ಕಾರ್ಯಕ್ರಮ ಅಗತ್ಯ; ಡಾ.ನಾಗಲಕ್ಷ್ಮಿ ಚೌಧರಿ.‌

Date:

“ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ, ಕೌಶಲ್ಯತೆ ಮತ್ತು ತುರ್ತು ಸಹಾಯವಾಣಿಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಅಗತ್ಯವಿದೆ” ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ; ನಾಗಲಕ್ಷ್ಮೀ ಚೌಧರಿ ದಾವಣಗೆರೆಯಲ್ಲಿ ತಿಳಿಸಿದರು.

- Advertisement -

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಸಬಲೀಕರಣದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸರ್ಕಾರಿ ಶಾಲಾ, ಕಾಲೇಜು, ಹಾಸ್ಟೆಲ್‍ಗಳಲ್ಲಿನ ಹೆಣ್ಣು ಮಕ್ಕಳಿಗೆ ಆತ್ಮ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗುತ್ತಿದೆ. ಇದೇ ರೀತಿ ಖಾಸಗಿಯ ಎಲ್ಲಾ ಶಾಲಾ, ಕಾಲೇಜು ಮತ್ತು ಹಾಸ್ಟೆಲ್‍ಗಳಲ್ಲಿಯು ಬಾಲಕಿಯರು ಹಾಗೂ ಹೆಣ್ಣು ಮಕ್ಕಳ ರಕ್ಷಣೆ, ದೌರ್ಜನ್ಯ ತಡೆ ಕುರಿತು ವ್ಯಾಪಕ ಅರಿವು ಮೂಡಿಸುವುದರಿಂದ ಪೋಕ್ಸೋ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಲಿವೆ. ಕೆಲವು ಶಾಲಾ, ಕಾಲೇಜುಗಳಲ್ಲಿ ಶಿಕ್ಷಕರಿಂದಲೇ ಲೈಂಗಿಕ ಕಿರುಕುಳ ಪ್ರಕರಣಗಳನ್ನು ನೋಡಲಾಗಿದೆ. ಆದ್ದರಿಂದ ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾದಾಗ ಧೈರ್ಯವಾಗಿ ದೂರುಗಳನ್ನು ನೀಡುವ ನಿಟ್ಟಿನಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ವ್ಯಾಪಕವಾಗಿ ಮಾಡಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ನಗರ ಹಾಗೂ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯು ಸಿಸಿ ಕ್ಯಾಮೆರಾಗಳನ್ನು ಹೆಚ್ಚಿಸಬೇಕು. ಮೊನ್ನೆ ನಡೆದ ಹುಬ್ಬಳಿ ಪ್ರಕರಣದಲ್ಲಿ ಸಿಸಿಟಿವಿಯಿಂದ ತುರ್ತಾಗಿ ಅಪರಾಧಿಯನ್ನು ಪತ್ತೆ ಮಾಡಲು ಸಾಧ್ಯವಾಯಿತು. ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಸಂಪೂರ್ಣ ನಿಗಾ ವಹಿಸಬೇಕು” ಎಂದರು.

“ದೌರ್ಜನ್ಯ ಸೇರಿದಂತೆ ವಿವಿಧ ಕಾರಣಗಳಿಂದ ಮಹಿಳೆಯರ ಕೊಲೆ ಪ್ರಕರಣಗಳು ವರದಿಯಾಗಿದ್ದು ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. 2023 ರಿಂದ 2025 ರ ವರೆಗೆ 19 ಮಹಿಳಾ ಕೊಲೆ ಪ್ರಕರಣ, 15 ವರದಕ್ಷಿಣ ಸಾವು, ಅನೈತಿಕ ಸಾಗಣೆ ತಡೆ ಐಟಿಪಿ ಕಾಯಿದೆಯಡಿ 14 ಪ್ರಕರಣ, ಕಿರುಕುಳ ಪ್ರಕರಣದಡಿ 152, ಡಿಪಿ ಕಾಯಿದೆಯಡಿ 183, ಮಹಿಳಾ ಕಿರುಕುಳದಡಿ 475 ಪ್ರಕರಣಗಳು ದಾಖಲಾಗಿವೆ”.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಿಗಟೇರಿ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ದಿಡೀರ್ ಭೇಟಿ, ಪರಿಶೀಲನೆ, ವ್ಯವಸ್ಥೆ ಬಗ್ಗೆ ಅಸಮಾಧಾನ.‌

“ಮಹಿಳೆ ಕಾಣೆಯಡಿ 1370 ಮಹಿಳೆಯರು ಹಾಗೂ 170 ಹುಡುಗಿಯರು ಕಾಣೆಯಾದ ಪ್ರಕರಣ ದಾಖಲಿಸಿದ್ದು ಹಲವು ಪ್ರಕರಣಗಳಲ್ಲಿ ಪತ್ತೆಹಚ್ಚಲಾಗಿದೆ. ಮತ್ತು ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಸೇರಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಮಹಿಳಾ ಕೌನ್ಸಿಲಿಂಗ್ ಕೇಂದ್ರವನ್ನು ಆರಂಭಿಸಲು ರಾಷ್ಟ್ರೀಯ ಮಹಿಳಾ ಆಯೋಗ ನಿರ್ಧರಿಸಿದ್ದು ರಾಜ್ಯದಲ್ಲಿಯು ಈ ಕೇಂದ್ರವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡಲು ದಾವಣಗೆರೆಯಲ್ಲಿ ಹೊಸದಾಗಿ ಮಹಿಳೆಯರ ಕೌನ್ಸಿಲಿಂಗ್ ಕೇಂದ್ರವನ್ನು ಆದಷ್ಟು ಶೀಘ್ರದಲ್ಲಿಯೇ ಆರಂಭಿಸಲಾಗುತ್ತದೆ” ಎಂದರು.

ಮೂಲಭೂತ ಸೌಕರ್ಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು “ಪಂಚಾಯಿತಿಗಳಿಂದ ಗ್ರಾಮಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡಬೇಕಾಗಿದೆ. ಜಗಳೂರು ತಾ; ಹನುಮಂತಪುರ ಗೊಲ್ಲರಹಟ್ಟಿಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯದ ಕೊರತೆ ಇದ್ದು ಇಲ್ಲಿ ಸರಿಯಾದ ರಸ್ತೆ, ಆರ್.ಓ, ಬಸ್ ಸೌಕರ್ಯಗಳಿಲ್ಲ. ಇಲ್ಲಿ ತುರ್ತಾಗಿ ಕೆಎಸ್‍ಆರ್‍ಟಿಸಿ ಬಸ್ ನೀಡಲು ಮತ್ತು ವಿದ್ಯುತ್ ಪರಿವರ್ತಕ ಹಾಕಿ ನಿರಂತರ ವಿದ್ಯುತ್ ಒದಗಿಸಿ” ಎಂದು ಸೂಚನೆ ನೀಡಿದ್ದಾರೆ.

“ಗ್ರಾಮ ಪಂಚಾಯಿತಿಗಳಲ್ಲಿ ನಿಯಮಿತವಾಗಿ ಗ್ರಾಮಸಭೆಗಳು ನಡೆಯುವಂತೆ ನೋಡಿಕೊಳ್ಳಬೇಕು. ಗ್ರಾಮಸಭೆಗಳಲ್ಲಿ ಮಹಿಳೆಯರು ಬಂದು ತಮಗೆ ಬೇಕಾದ ಅನುಕೂಲತೆಗಳ ಬಗ್ಗೆ ಕೇಳುವರು, ಇದರಿಂದ ಅನೇಕ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದ ಅವರು ಆಸ್ಪತ್ರೆಗಳಲ್ಲಿ ಸ್ವಚ್ಚತೆ, ಔಷಧಗಳ ದಾಸ್ತಾನು, ಹೊರಗುತ್ತಿಗೆಯಡಿ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆ ತಪ್ಪಿಸಲು ಆದಷ್ಟು ಬೇಗ ಜಿಲ್ಲಾ ಕಾರ್ಮಿಕರ ಸೊಸೈಟಿ ಆರಂಭಿಸಬೇಕು” ಎಂದು ಸೂಚಿಸಿದರು.

“ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಅಂಗಡಿ, ಮನೆಗಳಲ್ಲಿ ಮದ್ಯವನ್ನು ಮಾರಾಟ ಮಾಡುವುದರಿಂದ ಕುಟುಂಬಗಳು ಹಾಳಾಗಿವೆ ಎಂದು ಮಹಿಳೆಯರ ದೂರುಗಳಾಗಿವೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು” ಎಂದು ತಿಳಿಸಿದರು

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...