ದಾವಣಗೆರೆ | ಮುಸ್ಲಿಮ್‌ ಎಜುಕೇಷನ್‌ ಫಂಡ್‌ ಅಸೋಸಿಯೇಷನ್‌ ವಿದ್ಯಾರ್ಥಿವೇತನ ಹಂಚಿಕೆ ಹಾಗೂ ಬೀಳ್ಕೊಡುಗೆ ಸಮಾರಂಭ

Date:

77ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ಮುಸ್ಲಿಮ್‌ ಎಜುಕೇಷನ್‌ ಫಂಡ್‌ ಅಸೋಸಿಯೇಷನ್‌ನಿಂದ ವಿದ್ಯಾರ್ಥಿವೇತನ ಹಂಚಿಕೆ ಕಾರ್ಯಕ್ರಮ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಮೊಅಜಮ್‌ ಪಾಷ ಇವರ ಸೇವಾ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭವನ್ನು ಭಾನುವಾರ ದಾವಣಗೆರೆಯ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement -
1003607001

ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯರಾದ ಕೆ. ಅಬ್ದುಲ್‌ ಜಬ್ಬಾರ್‌ ಸಾಬ್, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು, ತಂದೆ ತಾಯಿಯ ಘನತೆ ಗೌರವವನ್ನು ಕಾಪಾಡಬೇಕು. ಹಾಗೂ ದೇಶದ ಉತ್ತಮ ನಾಗರೀಕರಾಗಬೇಕು. ಹಾಗೂ ದುಶ್ಚಟಗಳಿಂದ ದೂರವಿರಬೇಕು. ಪೋಷಕರು ತಮ್ಮ ಮಕ್ಕಳ ಮೇಲೆ ವಿಶೇಷ ಗಮನ ಹರಿಸಬೇಕು. ಮಕ್ಕಳು ಯಾರ ಜೊತೆ ಸಂಪರ್ಕದಲ್ಲಿದ್ದಾರೆ, ಎಷ್ಟು ಹೊತ್ತಿಗೆ ಕಾಲೇಜಿಗೆ ಹೋಗುತ್ತಾರೆ, ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ನಿಗಾವಹಿಸಬೇಕು. ಉತ್ತಮ ವಿದ್ಯಾಭ್ಯಾಸ ಪಡೆದು ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1003606995

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ನಿರ್ದೇಶಕರಾದ ಮೊಹಮ್ಮದ್‌ ಸಿರಾಜ್‌ ಮಾತನಾಡಿ, “ಈಗಿರುವ ಸುಸಜ್ಜಿತ ಮುಸ್ಲಿಮ್‌ ಹಾಸ್ಟೆಲ್‌ ಕಟ್ಟಡವು ಮಾನ್ಯ ಕೆ. ಅಬ್ದುಲ್‌ ಜಬ್ಬಾರ್‌ ರವರ ಪ್ರಯತ್ನದಿಂದ ನಿರ್ಮಿಸಲಾಗಿದ್ದು, ಹೊಸದಾಗಿ ನಿರ್ಮಾಣ ಮಾಡಲಾದ ಮೆಸ್‌, ಲೈಬ್ರರಿ ಹಾಲ್‌, ಸಭಾಂಗಣ ಇನ್ನಿತರೆ ಉದ್ದೇಶಗಳಿಗೆ ಉಪಯೋಗಿಸಬಹುದಾಗಿದೆ. ಹಾಗೂ ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಉಪಯೋಗವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.

1003607003

ದಾವಣಗೆರೆ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಮೊಅಜಮ್‌ ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿ, “ಪ್ರತಿ ವರ್ಷದಂತೆ ಈ ವರ್ಷವೂ ಸಹ ಸುಮಾರು 60 ಕ್ಕಿಂತಲೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು ರೂ. 7.00 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿವೇತನವನ್ನು ಹಂಚಿಕೆ ಮಾಡಲಾಗುತ್ತಿದ್ದು, ಇದರಿಂದ ಸಾಕಷ್ಟು ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹಾಗೂ ವೈದ್ಯಕೀಯ ಕೋರ್ಸ್‌ ಮಾಡುವ ಒಬ್ಬ ವಿದ್ಯಾರ್ಥಿಗೆ ದತ್ತು ತೆಗೆದುಕೊಂಡು ಅವರ ಪೂರ್ತಿ ಕೋರ್ಸ್‌ ಮುಗಿಯುವವರೆಗೂ ಅವರಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ತಿಳಿಸಿದರು.

1003607009

ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ತಾಂತ್ರಿಕ, ವೈದ್ಯಕೀಯ ಹಾಗೂ ಇತರೆ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 60 ಕ್ಕಿಂತಲೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು ರೂ. 7.00 ಲಕ್ಷಕ್ಕಿಂತಲೂ ಅಧಿಕ ವಿದ್ಯಾರ್ಥಿವೇತನವನ್ನು ಹಂಚಿಕೆ ಮಾಡಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಪಾರದರ್ಶಕತೆಯನ್ನು ಕಾಪಾಡಲು ಅವರ ಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮುಖಾಂತರ ವಿದ್ಯಾರ್ಥಿವೇತನವನ್ನು ಪಾವತಿ ಮಾಡುವ ವಿಧಾನವನ್ನು ಅನುಷ್ಠಾನಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ವಿಶ್ವವಿದ್ಯಾಲಯದ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ

ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರಾದ ಮೊಹಮ್ಮದ್‌ ಸಿರಾಜ್‌, ಅಬ್ದುಲ್‌ ಘನಿ ತಾಹಿರ್‌, ಎಂ.ಎನ್.‌ ಸಮೀವುಲ್ಲಾ, ಬಿ. ಮೊಹಮ್ಮದ್‌ ಫೈರೋಜ್‌, ಅಬ್ದುಲ್‌ ನಾಸೀರ್‌ ಮೌಲಾನಾ, ಏಜಾಜ್‌ ಅಹಮದ್‌, ಪಿ. ಖಾಸೀಂ ಸಾಬ್‌, ಜಿಲ್ಲಾ ವಕ್ಫ್‌ ಅಧಿಕಾರಿ ಜಾಕೀರ್‌ ಹುಸೇನ್‌ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್‌ ಸಂಸ್ಥೆಗಳ ಮುತವಲ್ಲಿಗಳು ಹಾಗೂ ವಿದ್ಯಾರ್ಥಿಗಳು, ಪೋಷಕರು, ಮುಸ್ಲಿಮ್‌ ಹಾಸ್ಟೆಲ್‌ ಹಾಗೂ ಜಿಲ್ಲಾ ವಕ್ಫ್‌ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ದಾವಣಗೆರೆ | ಕೇಳಿದ್ದನ್ನು ಕೊಡುವ ಏಕೈಕ ಕಾಮಧೇನು ಪುಸ್ತಕ: ಡಾ. ಮಹಾಂತೇಶ ಪಾಟೀಲ

"ಅವಮಾನ ಕೀಳರಿಮೆ ಸಂಕೋಚ ಸ್ವಭಾವ ಎಲ್ಲವನ್ನು ನೀಗುವ ಶಕ್ತಿ ಪುಸ್ತಕಗಳಲ್ಲಿದೆ. ಜಗತ್ತಿಗೆ...