ದಾವಣಗೆರೆ | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಒಕ್ಕೂಟ ಸಭೆ, ವಿರೋಧಿಸಿ ಪ್ರತಿಭಟನೆ.

Date:

ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದ ನೂರಾನಿ ಶಾದಿಮಹಲ್‌ನಲ್ಲಿ ಖಂಡನಾ ಸಭೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ಮುಸ್ಲಿಂ ಒಕ್ಕೂಟದ ಸಂಚಾಲಕ ಟಿ.ಅಸ್ಗರ್ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಮುಸ್ಲಿಂ ಸಮುದಾಯವನ್ನು ಗುರಿಪಡಿಸುವುದೇ ಇದರ ಉದ್ದೇಶವಾಗಿದೆ” ಎಂದು ಪ್ರತಿಭಟಿಸಿ ಮುಸ್ಲಿಂ ಒಕ್ಕೂಟದ ಮುಖಂಡ ಅಸಮಾಧಾನ ವ್ಯಕ್ತಪಡಿಸಿದರು.

- Advertisement -
1001798969
ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ

“ನಮ್ಮ ಪೂರ್ವಜರು ಅಲ್ಲಾನನ್ನು ಸಂತೃಪ್ತಿ ಪಡಿಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನು ವಕ್ಫ್ ಆಸ್ತಿಯಲ್ಲಿದೆ. ವಕ್ಫ್ ಸೇರಿರುವ ಜಮೀನುಗಳು ಯಾರಿಂದಲೋ ಕಬಳಿಸಿದ ಜಮೀನಲ್ಲ. ಧರ್ಮವನ್ನು ಬದಿಗಿಟ್ಟು ಎಲ್ಲಾ ಭಾರತೀಯರು ನಮ್ಮ ಜೊತೆ ಕೈ ಜೋಡಿಸಬೇಕೆಂದು ನಾವು ಕೇಳುತ್ತೇವೆ” ಮನವಿ ಮಾಡಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ, ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಗೆ ಗುರಿಯಾಗುತ್ತವೆ. ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಕಾಯ್ದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ. ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ಇದು ವಿರುದ್ದವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

1001798970

“ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಈ ಕಾಯ್ದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ದಾವಣಗೆರೆಯಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನಿಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಈ ಸಂದರ್ಭದಲ್ಲಿ ವಕೀಲರಾದ ನಜೀರ್ ಅಹ್ಮದ್, ಮಹಮ್ಮದ್ ಅಲಿ ಶೋಯೇಬ್, ಮಹಮ್ಮದ್ ಅಲ್ತಾಫ್, ರಜ್ವಿ ರಿಯಾಜ್ ಸಾಬ್, ಇಸ್ಮಾಯಿಲ್ ಕಾಟ, ಆದಿಲ್, ಜಾಫರ್, ಕೋಳಿ ಇಬ್ರಾಹಿಂ ಸಾಬ್, ಶೇರಯಾರ ಜಂಗ ಸಾಬ್, ಸುಭಾನಿ, ಲಿಯಾಕತ್ ಅಲಿ, ಮುಜಾಹೀದ್, ಮುಜಾಮಿಲ್, ತಾಹೀರ್, ಇಮ್ರಾನ್, ನಿಜಾಮ, ರಫೀಕ್, ಸರ್ಫರಜ್, ಸದ್ಧಾಂ ಇತರರು ಉಪಸ್ಥಿತರಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...