ದಾವಣಗೆರೆ | ಸಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ ಪ್ರತಿಭಟನೆ

Date:

ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ  ವಿರೋಧ ವ್ಯಕ್ತಪಡಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟ ದಾವಣಗೆರೆ ನಗರದ ಪಿ.ಬಿ. ರಸ್ತೆಯ ಮದೀನಾ ಮಸ್ಜಿದ್ ಮುಂಬಾಗ ಶಾಂತಿಯುತ ಪ್ರತಿಭಟನೆ ನಡೆಯಿತು.

- Advertisement -

ವಕ್ಫ್ ತಿದ್ದುಪಡಿ ಮಸೂದೆ- 2024 ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ತಾಹೀರ್ ಸಮೀರ್ ಮಾತನಾಡಿ, “ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಹಕ್ಕುಗಳ ಮೇಲೆ ನೇರ ಹಲ್ಲೆಯಾಗಿದ್ದು, ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹವಾಮಾನ ಬದಲಾವಣೆಯಿಂದ ಹಲವೆಡೆ ಉತ್ತಮ ಮಳೆ, ಕೃಷಿ ಚಟುವಟಿಕೆಗಳಿಗೆ ಮುನ್ನುಡಿ.

“ಈ ತಿದ್ದುಪಡಿ ಭಾರತ ಸಂವಿಧಾನ ಕೊಟ್ಟಿರುವ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಸಂವಿಧಾನವು ಧರ್ಮವನ್ನು ಆಚರಿಸುವ, ಪಾಲನೆ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕು ನೀಡುತ್ತದೆ. ಧಾರ್ಮಿಕ ಸಂಸ್ಥೆಗಳಿಗೆ ಸ್ವತಂತ್ರವಾಗಿ ನಿರ್ವಹಣೆಯ ಹಕ್ಕು ನೀಡುತ್ತದೆ. ಅಲ್ಪಸಂಖ್ಯಾತ ಸಮುದಾಯಗಳಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ನಿರ್ವಹಣೆಯ ಹಕ್ಕು ಒದಗಿಸುತ್ತದೆ. ವಕ್ಫ್ ತಿದ್ದುಪಡಿಯಲ್ಲಿ ಇದರ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದರು.

‘ಇದು ಕೇವಲ ಕಾನೂನು ತಿದ್ದುಪಡಿ ಅಲ್ಲ, ಇದು ಅಲ್ಪಸಂಖ್ಯಾತರ ಧಾರ್ಮಿಕ ಮತ್ತು ಶೈಕ್ಷಣಿಕ ಸ್ವಾತಂತ್ರ್ಯದ ವಿರುದ್ಧದ ಕದನವಾಗಿದೆ’ ಎಂದ ಪ್ರತಿಭಟನಾಕಾರರು,   ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

ಪ್ರತಿಭಟನೆಯಲ್ಲಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಶೋಯಬ್ ಅಹ್ಮದ್, ಸಯ್ಯದ್ ಅಹ್ಮದ್, ಖಮರ್ ಅಲಿ, ಸಯ್ಯದ್ ತಾಹಿರ್, ಗೌಸ್, ಮೊಇನುದ್ದೀನ್, ಶಾನವಾಜ್, ನದೀಮ್, ಕಬೀರ್ ಲಾಲ್, ಅಹ್ಮದ್ ಅಲಿ ಮತ್ತು ರಹೀಂ ಸೇರಿದಂತೆ ಅನೇಕರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...