ದಾವಣಗೆರೆ | ನೋಯ್ಡಾ ಕಾರ್ಮಿಕರ ಮೇಲೆ ದೌರ್ಜನ್ಯ, ಅಕ್ರಮ ಬಂಧನ: ಎಐಯುಟಿಯುಸಿ ಪ್ರತಿಭಟನೆ

Date:

ಹರಿಯಾಣದ ಗುರ್ಗಾಂವ್ ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾರ್ಮಿಕರ ಪ್ರಜಾತಾಂತ್ರಿಕ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ಧಮನಕಾರಿ ಆಕ್ರಮಣ ಹಾಗೂ 400ಕ್ಕೂ ಹೆಚ್ಚು ಪ್ರತಿಭಟನಾ ನಿರತ ಕಾರ್ಮಿಕರನ್ನು ಅಕ್ರಮ ಬಂಧನಕ್ಕೆ ಒಳಪಡಿಸಿದ್ದಾರೆ. ಕೂಡಲೇ ಹೋರಾಟಗಾರರ ಬಿಡುಗಡೆ ಮಾಡಬೇಕೆಂದು ಅಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ-AIUTUC) ಯು ದೇಶವ್ಯಾಪಿ ಒಗ್ಗಟ್ಟಿನ ದಿನ ಆಚರಿಸುವ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದಾವಣಗೆರೆ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

- Advertisement -

ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ “ದೇಶದ ಕೈಗಾರಿಕಾ ಕೇಂದ್ರವಾದ ಹರಿಯಾಣ ರಾಜ್ಯದ ಗುರ್ಗಾವ್ ಹಾಗೂ ಉತ್ತರ ಪ್ರದೇಶ ನೋಯ್ಡಾದಲ್ಲಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ಕಾರ್ಮಿಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಮತ್ತು ಅಕ್ರಮ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಹಸಿವು ಮತ್ತು ವೇತನ ಶೋಷಣೆಯ ವಿರುದ್ಧ ಧ್ವನಿ ಎತ್ತಿದ ಅಮಾಯಕ ಕಾರ್ಮಿಕರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಪ್ರಜಾಪ್ರಭುತ್ವದ ಕಪ್ಪು ಚುಕ್ಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...
1004131853

“ಸಾವಿರಾರು ಕಾರ್ಮಿಕರು ನೋಯ್ಡಾದ ಕೈಗಾರಿಕಾ ವಲಯಗಳಲ್ಲಿ ಕಳೆದ ಕೆಲವು ದಿನಗಳಿಂದ ಕನಿಷ್ಠ ವೇತನ ಹೆಚ್ಚಳಕ್ಕಾಗಿ ಬೀದಿಗಿಳಿದಿದ್ದಾರೆ. 12 ಗಂಟೆಗಳ ಕಾಲ ರಕ್ತ ಬಸಿದು ದುಡಿದರೂ ಕೇವಲ 11,000 ರಿಂದ 15,000 ರೂಪಾಯಿಗಳ ಅಲ್ಪ ವೇತನ ನೀಡಲಾಗುತ್ತಿದೆ. ಈ ಬೆಲೆ ಏರಿಕೆಯ ಕಾಲದಲ್ಲಿ ಜೀವನ ನಿರ್ವಹಣೆ ಅಸಾಧ್ಯವಾಗಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರೆ, ಇದಕ್ಕೆ ವಿರುದ್ಧವಾಗಿ ಪೊಲೀಸರು ಅಮಾನವೀಯವಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ದೌರ್ಜನ್ಯ ಎಸಗಿದ ಮತ್ತು ಅದಕ್ಕೆ ಆದೇಶ ನೀಡಿದ ಪೊಲೀಸ್ ಅಧಿಕಾರಿಗಳ ಮೇಲೆ ಸರ್ಕಾರ ಕೂಡಲೇ ಕಠಿಣ ಶಿಸ್ತುಕ್ರಮ ಜರುಗಿಸಬೇಕು.
ತಮ್ಮ ಹಸಿವಿನ ಸಂಕಟವನ್ನು ಹೇಳಿಕೊಳ್ಳಲು ಹೋದ ನೂರಾರು ಅಮಾಯಕ ಕಾರ್ಮಿಕರನ್ನು ಬಂಧಿಸಿ ಜೈಲಿಗೆ ಅಟ್ಟಿರುವುದು ಅನ್ಯಾಯದ ಪರಮಾವಧಿ. ಪೊಲೀಸರು ಮತ್ತು ಉದ್ಯಮಿಗಳು ಕೈಜೋಡಿಸಿ ಕಾರ್ಮಿಕರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.‌

“ಈ ಕೂಡಲೇ ಬಂಧಿತರಾಗಿರುವ ಎಲ್ಲಾ ಕಾರ್ಮಿಕರನ್ನು ಯಾವುದೇ ಷರತ್ತಿಲ್ಲದೆ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ ದಾಖಲಿಸಲಾದ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಬೇಕು. ನೋಯ್ಡಾದ ಈ ಪ್ರತಿಭಟನೆಯು ಕೇವಲ ಅಲ್ಲಿಗೆ ಸೀಮಿತವಲ್ಲ. ಇದು ದೇಶದಾದ್ಯಂತ ಇರುವ ಅಸಂಘಟಿತ ಕಾರ್ಮಿಕರಿಗೆ ಒಂದು ಸ್ಫೂರ್ತಿಯಾಗಿದೆ. ಕಂಪನಿಗಳು ಹೆಚ್ಚುವರಿ ಅವಧಿಯ (OT) ಹಣವನ್ನು ನೀಡದೆ ವಂಚಿಸುತ್ತಿವೆ. ಮತ್ತು ಕಾರ್ಮಿಕರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿವೆ. ಸರ್ಕಾರದ ಬಣ್ಣಬಣ್ಣದ ಜಾಹೀರಾತುಗಳು ಹಸಿದ ಹೊಟ್ಟೆಯನ್ನು ತುಂಬಿಸುವುದಿಲ್ಲ. ಬದಲಾಗಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಗೌರವಯುತ ಬದುಕು ಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಜೈಲಿನಲ್ಲಿರುವ ಎಲ್ಲಾ ಕಾರ್ಮಿಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಶಾಂತಿಯುತ ಹೋರಾಟಗಾರರ ಮೇಲೆ ಲಾಠಿ ಬೀಸಿದ ಅಧಿಕಾರಿಗಳ ಮೇಲೆ ತನಿಖೆಯಾಗಬೇಕು. ಸರ್ಕಾರ ಮಧ್ಯಪ್ರವೇಶಿಸಿ ಜೀವನ ನಿರ್ವಹಣೆಗೆ ಪೂರಕವಾದ ಗೌರವಯುತ ವೇತನವನ್ನು ಘೋಷಿಸಬೇಕು. ಉದ್ಯಮಿಗಳ ಹಿತಾಸಕ್ತಿಗಿಂತ ಕಾರ್ಮಿಕರ ಬದುಕು ಮುಖ್ಯ ಎಂಬುದನ್ನು ಸರ್ಕಾರ ಮರೆಯಬಾರದು” ಎಂದು ಆಗ್ರಹಿಸಿದರು.

“ಗುರ್ಗಾಂವ್, ನೋಯ್ಡಾದ ಈ ‘ಸಂಘಟಿತ ಹೋರಾಟ’ವು ಶೋಷಿತ ವರ್ಗದ ಶಕ್ತಿಯ ಸಂಕೇತವಾಗಿದೆ. ಬಂಧನ ಅಥವಾ ದೌರ್ಜನ್ಯಗಳ ಮೂಲಕ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಕಾರ್ಮಿಕರ ಬೇಡಿಕೆಗಳು ಈಡೇರುವವರೆಗೂ ನಮ್ಮ ಬೆಂಬಲ ಮುಂದುವರಿಯಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದ ಕಾಂಗ್ರೆಸ್ ಎಂಎಲ್ಸಿ ಜಬ್ಬಾರ್ ಸಾಬ್ ಅಮಾನತು

ಪ್ರತಿಭಟನೆಯಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ತಿಪ್ಪೇಸ್ವಾಮಿ ಅಣಬೇರು, ಜಿಲ್ಲಾ ಉಪಾಧ್ಯಕ್ಷ ಶಿವಾಜಿರಾವ್, ಕಾರ್ಮಿಕರಾದ ಉದಯ್, ಲೋಕೇಶ್, ಮನುಕುಮಾರ್, ಮನೋಜ್, ಸಿದ್ದೇಶ್ ಇನ್ನೂ ಮುಂತಾದವರು ಭಾಗವಹಿಸಿದ್ದರು.

ಧ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....