ದಾವಣಗೆರೆ | ಅಕ್ರಮ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ಮಾಶಾಸನ, 23ಜನರ ವಿರುದ್ಧ ದೂರು, ಮರು ವಸೂಲಿಗೆ ಶಿಫಾರಸು.

Date:

ಕೇಂದ್ರ ಸರ್ಕಾರದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ ಮತ್ತು ರಾಜ್ಯ ಸರ್ಕಾರ ನೇತೃತ್ವದ ಸಂಧ್ಯಾ ಸುರಕ್ಷಾ ಯೋಜನೆ, ಮಾಶಾಸನ ದುರ್ಬಳಕೆ ಮಾಡಿಕೊಂಡು ಅಕ್ರಮ ದಾಖಲೆ ಸೃಷ್ಟಿಸಿ, ಅನಧಿಕೃತವಾಗಿ ವೃದ್ಧಾಪ್ಯ ವೇತನವನ್ನು ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ದಾಗಿನಕಟ್ಟೆ-ಯಲೋಧಹಳ್ಳಿಯ 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

ಜನಪ್ರತಿನಿಧಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿಯವರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು. ಅಧಿಕಾರಿಗಳ ಭೇಟಿ, ತನಿಖೆ ಕೈಗೊಂಡ ವೇಳೆ ಅಕ್ರಮ ಬಯಲಿಗೆ ಬಂದಿದ್ದು 23 ಜನರು ಅನಧಿಕೃತವಾಗಿ ಅಕ್ರಮ ದಾಖಲೆಗಳನ್ನು ಸಲ್ಲಿಸಿ ವೇತನ ಪಡೆಯುತ್ತಿದ್ದು, ಒಟ್ಟು 1,11,200 ಲಕ್ಷ ರೂಪಾಯಿ ಇದುವರೆಗೂ ವೇತನ ಪಾವತಿಯಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು, ಆರೋಪಿಗಳ ವಿರುದ್ಧ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಬಗ್ಗೆ ಮಾಹಿತಿ ನೀಡಿರುವ ಹೊನ್ನಾಳಿ ಕಂದಾಯ ಉಪವಿಭಾಗದ ಉಪ ವಿಭಾಗಾಧಿಕಾರಿ ವಿ.ಅಭಿಷೇಕ್,
ದಾಗಿನಕಟ್ಟೆ ಹಾಗೂ ಯಲೋದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಗ್ರಾಮಗಳಲ್ಲಿ ವೃದ್ಧಾಪ್ಯ ವೇತನ ಪಡೆಯುತ್ತಿರುವವರ ಮನೆಗಳಿಗೆ ತೆರಳಿ ಪರಿಶೀಲಿಸಿದ್ದೇವೆ. ಈ ವೇಳೆ 23 ಜನ ಅನರ್ಹರು ವೃದ್ಧಾಪ್ಯ ವೇತನ ಹಾಗೂ 6 ಜನರು ಅಂಗವಿಕಲರ ಮಾಸಾಶನ ಪಡೆಯುತ್ತಿರುವುದು ಪತ್ತೆಯಾಗಿದೆ. ಅಕ್ರಮ ಹಿನ್ನೆಲೆ ತಪ್ಪು ಮಾಹಿತಿ ನೀಡಿ ಹಲವು ತಿಂಗಳಿಂದ ಪಡೆದಿದ್ದ ಮಾಸಾಶನ ನಿಲ್ಲಿಸಿ ಕ್ರಮ ಕೈಗೊಳ್ಳಲಾಗಿದೆ.

ಇವರ ವಿರುದ್ಧ ದೂರು ದಾಖಲಾಗಿದ್ದು, ಈ ಎರಡೂ ಯೋಜನೆಗಳ ಪೈಕಿ ಒಟ್ಟು 1,11,200 ಲಕ್ಷ ರೂಪಾಯಿ 23 ಜನ ಅನರ್ಹ ಫಲಾನುಭವಿಗಳ ಪಾಲಾಗಿದೆ ಎನ್ನುವ ಅಂಕಿ ಅಂಶಗಳಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ಹಣವನ್ನು ಆರೋಪಿಗಳಿಂದಲೇ ವಸೂಲಿ ಮಾಡುವಂತೆ ಕ್ರಮ ಕೈಗೊಳ್ಳಲು ವರದಿಯಲ್ಲಿ ಶಿಫಾರಸು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಜನಪ್ರತಿನಿಧಿಯೊಬ್ಬರು ವೃದ್ಧಾಪ್ಯ ವೇತನ, ಮಾಶಾಸನದ ಅಕ್ರಮದ ಬಗ್ಗೆ ವೃದ್ಧಾಪ್ಯ ವೇತನ ಅನರ್ಹರ ಪಾಲಾಗುತ್ತಿದ್ದ ವಿಚಾರವನ್ನು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ್ ಸ್ವಾಮಿ ಅವರ ಗಮನಕ್ಕೆ ತಂದಿದ್ದು ಬಯಲಿಗೆಳೆದಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿಯ ಉಪ ತಹಶೀಲ್ದಾ‌ರ್ ನೀಲಮ್ಮ ಅವರು ವೃದ್ಧಾಪ್ಯ ವೇತನ ಮಂಜೂರು ಮಾಡುವ ವೇಳೆ ಸರಿಯಾದ ಕ್ರಮಕೈಗೊಂಡಿಲ್ಲದಿರುವುದು, ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ವಿರುದ್ಧ ಕ್ರಮಕ್ಕೆ ವರದಿಯಲ್ಲಿ ಒತ್ತಾಯಿಸಲಾಗಿದೆ.‌ ಅಲ್ಲದೇ ವೃದ್ಧಾಪ್ಯ ವೇತನಕ್ಕೆ ಸಲ್ಲಿಸಿದ್ದ ಕಡತ ದಾಖಲೆಗಳು ಕಚೇರಿಯಲ್ಲಿಲ್ಲ, ಕಳೆದು ಹೋಗಿರುವುದಾಗಿ ಕಂಡು ಬಂದಿದೆ ಎನ್ನಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...