ದಾವಣಗೆರೆ | ಬಾಬುಜಗಜೀವನರಾಂ ಜಯಂತಿ ಆಚರಣೆಯಲ್ಲಿ ಲೋಪ: ದಸಂಸ ಪ್ರತಿಭಟನೆ

Date:

ಎಪ್ರಿಲ್ 5 ರಂದು ಆಚರಿಸಿದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆಯಲ್ಲಿ ಹಲವೆಡೆ ಲೋಪ ಎಸಗಲಾಗಿದ್ದು, ಲೋಪವೆಸಗಿದ ತಾಲೂಕಿನ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಇದನ್ನು ಖಂಡಿಸಿ ಕ್ರಮಕ್ಕೆ ಆಗ್ರಹಿಸಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಮೇ 15ರಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ತಾಲೂಕು ಸಂಚಾಲಕ ಮಹಾಂತೇಶ ತಿಳಿಸಿದರು.

- Advertisement -

ಹರಿಹರದಲ್ಲಿ ಮಾತನಾಡಿದ ಮಹಾಂತೇಶ “ತಾಲೂಕಿನ ಹೊಳೆಸಿರಿಗೆರೆ, ಬೆಳ್ಳೂಡಿ ಗ್ರಾಪಂ ಕಚೇರಿಯಲ್ಲಿ ಆಚರಣೆಯ ಸಂದರ್ಭದಲ್ಲಿ ಒಬ್ಬರು, ಯಲವಟ್ಟಿ, ಕಡರನಾಯಕನಹಳ್ಳಿ, ಕುಣಿಬೆಳೆಕೆರೆ, ನಂದಿಗಾವಿ ಗ್ರಾಪಂ ಕಚೇರಿಯಲ್ಲಿ ಇಬ್ಬರು, ಭಾನುವಳ್ಳಿ, ರಾಜನಹಳ್ಳಿ, ಹನಗವಾಡಿ, ಕೊಂಡಜ್ಜಿ, ಉಕ್ಕಡಗಾತ್ರಿ, ಬನ್ನಿಕೋಡು ಗ್ರಾಪಂ ಕಚೇರಿಯಲ್ಲಿ ಮೂವರು ಮಾತ್ರ ಜಗಜೀವನರಾಂ ಜಯಂತಿಯಲ್ಲಿ ಭಾಗವಹಿಸಿದ್ದಾರೆ. ಹೊಳೆಸಿರಿಗೆರೆ, ಹನಗವಾಡಿ, ಕಡರನಾಯಕನಹಳ್ಳಿ, ಕುಂಬಳೂರು, ರಾಜನಹಳ್ಳಿ, ಕೊಂಡಜ್ಜಿ, ಕುಣೆಬೆಳೆಕೆರೆ, ಬೆಳ್ಳೂಡಿ, ಸಾಲಕಟ್ಟೆ, ಸಾರಥಿ, ವಾಸನ ಗ್ರಾಪಂ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಹೂವಿನಹಾರವನ್ನು ಹಾಕಿಲ್ಲ, ಭಾನುವಳ್ಳಿ ಗ್ರಾಪಂನಲ್ಲಿ ಪ್ಲಾಸ್ಟಿಕ್ ಹಾರ ಹಾಕಲಾಗಿದೆ” ಎಂದು ಖಂಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಹಲವೆಡೆ ಗ್ರಾಪಂ ಪಿಡಿಒ, ಆಡಳಿತಾಧಿಕಾರಿ, ಬಿಲ್ ಕಲೆಕ್ಟರ್ ಹಾಗೂ ಇತರೆ ಸಿಬ್ಬಂದಿಗಳು ಆಚರಣೆಯಲ್ಲಿ ಭಾಗವಹಿಸಿಲ್ಲ. ಹಸಿವಿನಿಂದ ಬಳಲುತ್ತಿದ್ದ ಅವಧಿಯಲ್ಲಿ ಹಸಿರು ಕ್ರಾಂತಿಯನ್ನು ಜಾರಿ ಮಾಡಿ ಆಹಾರ ಧಾನ್ಯ ಉತ್ಪನ್ನ ಹೆಚ್ಚಿಸಿ, ದೇಶದ ವಾಸಿಗಳ ಹಸಿವನ್ನು ನೀಗಿಸಿದ ಖ್ಯಾತಿಯ ಬಾಬು ಜಗಜೀವನರಾಂ ಅವರನ್ನು ಅವಮಾನಿಸಿರುವ ಸಂಬಂಧಿತ ಗ್ರಾಪಂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿ ಜಿಪಂ ಸಿಇಒ, ತಾಪಂ ಇಒ ಅವರಿಗೆ ದೂರು ಸಲ್ಲಿಸಲಾಗಿತ್ತು” ಎಂದು ಆರೋಪಿಸಿದರು.

ಇ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

“ತಾಪಂ ಕಾರ್ಯನಿರ್ವಹಣಾಧಿಕಾರಿ ಅವರು ಮೇ 5ರಂದು ಜಿಪಂ ಸಿಇಒ ಅವರಿಗೆ ತಪ್ಪು ಎಸಗಿದ ಗ್ರಾಪಂ ಸಿಬ್ಬಂದಿಗಳ ಕುರಿತು ವರದಿ ನೀಡಿದ್ದಾರೆ. ಸದರಿ ವರದಿ ಆಧರಿಸಿ ಜಿಪಂ ಸಿಇಒ ಅವರು ಕೂಡಲೆ ತಪ್ಪಿತಸ್ಥ ಪಿಡಿಒ, ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳ ವಿರುದ್ಧ ನಿಯಮಾವಳಿ ಪ್ರಕಾರ ಶಿಸ್ತು ಕ್ರಮಕೈಗೊಳ್ಳಬೇಕು.
ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 15 ರಂದು ಜಿಪಂ ಕಚೇರಿ ಮುಂದೆ ನೂರಾರು ಕಾರ್ಯಕರ್ತರೊಂದಿಗೆ ದಸಂಸದಿಂದ ಪ್ರತಿಭಟನೆ ಕೈಗೊಳ್ಳಲಾಗುವುದು” ಎಂದು ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...