ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

Date:

“ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ” ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯ ವೇಳೆ ದಾವಣಗೆರೆಯಲ್ಲಿ ತಿಳಿಸಿದರು.

- Advertisement -
1003951740

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ಪರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೊಂದಿಗೆ ರ್ಯಾಲಿಯಲ್ಲಿ ಆಗಮಿಸಿ ದಾವಣಗೆರೆ ಮಹಾನಗರ ಪಾಲಿಕೆಯ ಆವರಣದ ಚುನಾವಣಾ ಕಚೇರಿಗೆ ತೆರಳಿ ಬಿ-ಫಾರ್ಮ್ ನೊಂದಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎರಡೂ ಕಡೆ ಸಮರ್ಥ ಅಭ್ಯರ್ಥಿಗಳನ್ನು ಹಾಕಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಗ್ಯಾರಂಟಿಗಳೊಂದಿಗೆ ಮನೆಮನೆಗೂ ತಲುಪಿದ್ದೇವೆ. ಕಾಂಗ್ರೆಸ್ ಸಾಮಾಜಿಕವಾಗಿ, ಬಡವರ, ಹಿಂದುಳಿದವರ ಪರ ಕೆಲಸ ಮಾಡಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

“ಮತ್ತೆ ದಾವಣಗೆರೆ ಬಂದು ಎಲ್ಲರನ್ನೂ ಭೇಟಿ ಮಾಡಿ ಮತಯಾಚಿಸಿ ಪ್ರಚಾರ ಮಾಡಲಿದ್ದೇನೆ. ಈ ಹಿಂದಿನ ಉಪಚುನಾವಣೆಗಳಲ್ಲಿ ಮೂರನ್ನೂ ಕಾಂಗ್ರೆಸ್ ಗೆದ್ದಿದ್ದು, ಅವು ಕೂಡ ಮುಂದಿನ ಚುನಾವಣೆಗಳ ದಿಕ್ಸೂಚಿಗಳಾಗಿವೆ. ಅಲ್ಪಸಂಖ್ಯಾತರಿಗೂ ಕೂಡ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಉಪಚುನಾವಣೆಯಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ

ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‍ಡಿ ಮಂಜಪ್ಪ, ಕಾಂಗ್ರೆಸ್ ಮುಖಂಡ ಆಯುಬ್ ಪೈಲ್ವಾನ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...