ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

Date:

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ ಪೋಕ್ಸೊ ಪ್ರಕರಣದಲ್ಲಿ ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗೆ ನೀಡಿದ್ದ ನಿರೀಕ್ಷಣಾ ಜಾಮೀನು (ಆಂಟಿಸಿಪೇಟರಿ ಬೇಲ್) ಅನ್ನು ಹೈಕೋರ್ಟ್ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಅವರು ವಿಶೇಷ ಪೋಕ್ಸೊ ನ್ಯಾಯಾಲಯದಲ್ಲಿ ರೆಗ್ಯೂಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...
frontscrol

ಜಾಮೀನು ಅರ್ಜಿಯ ವಿಚಾರಣೆ ವೇಳೆ ಜು. 3ರಂದು ಸ್ವಾಮೀಜಿಯವರ ಪರ ವಕೀಲರು, ಜು. 4ರಂದು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರು (ಪಿಪಿ) ಪ್ರತಿವಾದ ಮಂಡಿಸಿದ್ದರು. ಬಳಿಕ ಉಭಯ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜು. 6ಕ್ಕೆ ಮುಂದೂಡಿತ್ತು. ಅಂದು ದೂರದಾರರ ಪರ ವಕೀಲರು ವಾದ ಮಂಡಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಅಂತಿಮ ಆದೇಶವನ್ನು ಕಾಯ್ದಿರಿಸಿ, ಸೋಮವಾರ (ಜು. 13) ತೀರ್ಪು ಪ್ರಕಟಿಸಿದ್ದು, ಪ್ರಕರಣದ ದಾಖಲೆಗಳು ಹಾಗೂ ವಾದಗಳನ್ನು ಪರಿಶೀಲಿಸಿದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯೂಲರ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ಐಆರ್ ಕರ್ತವ್ಯ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಗೌರವಧನಕ್ಕೆ ಆಗ್ರಹ

ನ್ಯಾಯಾಲಯದ ಜಾಮೀನು ಆದೇಶದಿಂದ ವಚನಾನಂದಶ್ರೀಗಳಿಗೆ ಸದ್ಯಕ್ಕೆ ಮಹತ್ವದ ಕಾನೂನು ಪರಿಹಾರ ದೊರೆತಿದೆ. ಆದರೆ ಪ್ರಕರಣದ ವಿಚಾರಣೆ ಹಾಗೂ ತನಿಖಾ ಪ್ರಕ್ರಿಯೆ ಮುಂದುವರಿಯಲಿವೆ.
ಸಾರ್ವಜನಿಕ ವಲಯ ಹಾಗೂ ಸಮುದಾಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಆದೇಶವು ಪ್ರಮುಖ ಬೆಳವಣಿಗೆಯಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...