ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

Date:

ಕಬ್ಬಿಣದ ಲಾಂಗ್ ನಂತಹ ಮಾರಕ ಆಯುಧವನ್ನು ಹಿಡಿದುಕೊಂಡು ಓಡಾಡಿ ಆರ್‌ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಭಯ, ಆತಂಕ ಉಂಟು ಮಾಡಿದ್ದ ವ್ಯಕ್ತಿಯನ್ನು ದಾವಣಗೆರೆ ಆರ್‌ಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ದಾವಣಗೆರೆಯ ಟಿಪ್ಪುನಗರದ ಅಬ್ದುಲ್ ಸಮದ್ ಬಂಧಿತ ಆರೋಪಿಯಾಗಿದ್ದು, ನಗರದ ಆನೆಕೊಂಡ ಬಸವೇಶ್ವರ ದೇವಸ್ಥಾನದಿಂದ ಕಲ್ಲೇಶ್ವರ ಮಿಲ್ ಕಡೆ ಹೋಗುವ ರಸ್ತೆಯಲ್ಲಿ ಲಾಂಗ್ ಹಿಡಿದು ರಾಜಾರೋಷವಾಗಿ ನಡೆದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಗುಂಪುಗಳ ಮಧ್ಯೆ ಹಲವು ಅಹಿತಕರ ಘಟನೆಗಳು, ವಾಗ್ವಾದ ನಡೆದಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜನರಲ್ಲಿ ಭಯ ಉಂಟುಮಾಡುವಂತೆ ರಸ್ತೆಯಲ್ಲಿ ಆಯುಧ ಹಿಡಿದು, ಭಯ ಅಶಾಂತಿಯನ್ನುಂಟು ಮಾಡುವಂತ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ ಆಧರಿಸಿ ಪೊಲೀಸರು ಆರ್‌ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾನೂನು ಸಲಹಾ ಕೇಂದ್ರ; ಸಮಾಜದ ಕಡೆಯ ವ್ಯಕ್ತಿಗೂ ಸಮಾನ ನ್ಯಾಯ: ನ್ಯಾ.ರವಿ ವಿ.ಹೊಸಮನಿ

ಘಟನೆ ಸಂಬಂಧ ಎಚ್ಚರಿಕೆ ನೀಡಿರುವ ದಾವಣಗೆರೆ ಪೊಲೀಸರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕವಾಗಿ ಅಡ್ಡಾಡುವುದು, ಸಾರ್ವಜನಿಕರಿಗೆ ಭಯ ಉಂಟು ಮಾಡುವುದು ಹಾಗೂ ಅಶಾಂತಿ ಉಂಟು ಮಾಡುವಂತೆ ವರ್ತಿಸುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...